Registration in FRUITS software is mandatory ಕೃಷಿ, ರೇಷ್ಮೆ, ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ ಇಲಾಖೆಯ ಯೋಜನೆಯಡಿ ರೈತರು ಸೌಲಭ್ಯ ಪಡೆಯಬೇಕಾದರೆ ಇನ್ನು ಮುಂದೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.
ರೈತರು ಫ್ರೂಟ್ಸ್ ತ್ರಂತ್ರಾಂಶದಲ್ಲಿ ನೋಂದಣಿ ಮಾಡಿಸಿದರೆ ಮಾತ್ರ ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಿಗುತ್ತವೆ. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಸಹ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಬೇಕು. ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮನೆಯಲ್ಲಿಯೇ ಕುಳಿತು ಮೊಬೈಲ್ ಮೂಲಕವೂ ನೋಂದಣಿ ಮಾಡಿಸಬಹುದು. ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸದರೆ ಎಫ್ಐಡಿ (FID) ಸಂಖ್ಯೆ ನೀಡಲಾಗುತ್ತದೆ. ಒಮ್ಮೆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿದರೆ ಸಾಕು ಕೃಷಿ ಇಲಾಖೆಯ ವತಿಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಾನೆ.
ರೈತರು ತಮ್ಮ ಜೀನಿನ ವಿವರಗಳನ್ನು ಆಧಾರ್ ಮತ್ತು ಬ್ಯಾಂಕ್ ಖಾತೆ ವಿವರಗಳೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿ ನೋಂದಣಿ ಸಂಖ್ಯೆ ಪಡೆಯಬೇಕು. ಈಗಾಗಲೇ ನೋಂದಣಿಯಾಗಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಇಲಾಖೆಗಳಲ್ಲಿ ಸೇರ್ಪಡೆ ಮಾಡಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
Registration in FRUITS software is mandatory ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಹೇಗೆ?
ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಲು ಈ ಮುಂದಿನ ಲಿಂಕ್ ಕ್ಲಿಕ್ ಮಾಡಿ.
https://fruits.karnataka.gov.in/OnlineUserRegistration.aspx
ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ಭರ್ತಿ ಮಾಡಿ, ಆಧಾರ್ ವಿವರ ದಾಖಲಿಸಿ ನಂತರ ಓಟಿಪಿ ಬರುತ್ತದೆ, ಮುಂದುವರಿದು ಇತರೆ ವಿವರ ದಾಖಲಿಸಬಹುದು.FRUITS ತಂತ್ರಾಂಶದಲ್ಲಿ ಹೆಸರು ನೋಂದಣಿಯಾದ ನಂತರ ರೈತರಿಗೆ, ಯೂನಿಕ್ ನಂಬರ್ ಇರುವ ಕಾರ್ಡ್ ನೀಡಲಾಗುತ್ತದೆ. ರೈತರ ಎಲ್ಲಾ ಮಾಹಿತಿ ಆನ್ ಲೈನ್ ನಲ್ಲಿ ನೋಂದಣಿಯಾಗಿರುತ್ತದೆ.
ತಮಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಸಮಸ್ಯೆಯಾಗುತ್ತಿದ್ದರೆ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝಿರಾಕ್ಸ್, ಪ್ರತಿ ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಝಿರಾಕ್ಸ್ ಪ್ರತಿ ಸೇರಿದಂತೆ ಸೂಕ್ತ ದಾಖಲಾತಿ ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು.
ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸುವ ವಿಧಾನ
ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು. ಅಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.ಆಗ ಅಲ್ಲಿ ಎಫ್ಐಡಿ (ಗುರುತಿನ ಸಂಖ್ಯೆ) ನೀಡಲಾಗುವುದು, ಆಧಾರ್ ಸಂಖ್ಯೆ, ಸರ್ವೆ ನಂಬರ್ ನಮೂದಿಸಬೇಕು. ರೈತರು ಹೊಂದಿರುವ ಭೂ ಹಿಡುವಳಿಯ ಮಾಹಿತಿ ಆಧಾರದ ಮೇಲೆ ರೈತರನ್ನು ಫಲಾನುಭವಿ ಪಟ್ಟಿಯಲ್ಲಿ ಸೇರಿಸಲಾಗುವುದು.
ಏನಿದು ಸ್ವಾಭಿಮಾನ ರೈತ ಕಾರ್ಡ್ ?
ಸ್ವಾಭಿಮಾನಿ ರೈತರ ಗುರುತಿನ ಚೀಟಿ ರೈತರಿಗೆ ನೀಡುವ ಡಿಜಿಟಲ್ ಐಡಿ ಕಾರ್ಡ್ ಆಗಿದ್ದು, ಕೃಷಿ ಸಾಲ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ. ಕೃಷಿ, ತೋಟಗಾರಿಕೆ , ರೇಷ್ಮೆ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳಲ್ಲಿ ರೈತರನ್ನು FRUITS ತಂತ್ರಾಂಶದಲ್ಲಿ ನೋಂದಾಯಿಸಲಾಗುತ್ತಿದೆ. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಲ್ಪಟ್ಟಿರುವ ರೈತರಿಗೆ ಸ್ವಾಭಿಮಾನಿ ರೈತರ ಗುರುತಿನ ಚೀಟಿ ನೀಡಲಾಗುವುದು. ಸರ್ಕಾರದ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ (ಫಾರ್ಮರ್ ರಿಜಿಸ್ಟ್ರೇಷನ್ ಆಯಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮೇಷನ್ ಸಿಸ್ಟಂ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಲೇಬೇಕು