cattle relief increased ಮಾನವ ವನ್ಯಜೀವಿ ಸಂಘರ್ಷದಿಂದ ಹಸು, ಎಮ್ಮೆ , ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಈಗ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರದಿಂದ 75 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ವನ್ಯ ಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆಯಾದರೆ ತಕ್ಷಣವೇ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು 20 ಸಾವಿರ ರೂಪಾಯಿಯನ್ನು ಬಿಡುಗಡೆ ಮಾಡಲು ಅವಕಾಶ ನೀಡಲಾಗಿದೆ. ನಂತರ ಸ್ಥಳೀಯ ಪಶು ವೈದ್ಯಾಧಿಕಾರಿಗಳು ಸತ್ತ ಸಾಕುಪ್ರಾಣಿಯ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ನಂತರ ಉಳಿದ ಮೊತ್ತ ಪಾವತಿಸಬಹುದು ಎಂದು ತಿಳಿಸಿದ್ದಾರೆ.
cattle relief increased ಹಸು, ಎತ್ತು, ಎಮ್ಮೆ ಸತ್ತರೆ 75 ಸಾವಿರಕ್ಕೆ ಪರಿಹಾರ ಹಣ ಹೆಚ್ಚಳ
ಹಸು, ಎಮ್ಮೆ, ಕೋಣ, ವನ್ಯ ಜೀವಿಗಳಿಂದ ಮೃತಪಟ್ಟಲ್ಲಿ ಅವುಗಳ ಮಾಲಿಕನಿಗೆ ಈಗ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರದಿಂದ 75 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡಲಾಗುತ್ತಿರುವ 5 ಸಾವಿರ ಪರಿಹಾರ ಧನವನ್ನು 10 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಈ ಆದೇಶದ ಮೂಲಕ ಜನಪ್ರತಿನಿಧಿಗಳು, ರೈತರು ಮತ್ತು ಸಾರ್ವಜನಿಕರ ಬಹು ದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುರಿ ಮೇಕೆ ಸಾಕಾಣಿಕೆ ಘಟಕ, ಮೀನು ಸಾಕಾಣಿಕೆಗೆ ಶೇ. 50 ರ ರಷ್ಟು ಸಬ್ಸಿಡಿ
ಪಶುಪಾಲನೆ ಇಲಾಖೆ, ಮೀನುಗಾರಿಕೆ ಇಲಾಖೆಗಳ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕುರಿ ಮೇಕೆ ಸಾಕಾಣಿಕೆ ಘಟಕ, ಕಾವ್ ಮ್ಯಾಟ್, ಮೀನುಸಾಕಾಣಿಕೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖಾ ವತಿಯಿಂದ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌ ಮ್ಯಾಟ್ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾಗುವ ಪ್ರತಿ ಭಲಾನುಭವಿಗೆ ಎರಡು ಕೌ ಮ್ಯಾಟ್ ವಿತರಣೆ ಮಾಡಲಾಗುವುದು. ಘಟಕದ ವೆಚ್ಚ 2799 ರೂಪಾಯಿ ಇದ್ದು, ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಅಂದರೆ 1399 ರೂಪಾಯಿ ಸಬ್ಸಿಡಿ ನೀಡಲಾಗುವುದು. ರೈತರು ಶೇ. 50 ರಷ್ಟು ಅಂದರೆ 1399 ರೂಪಾಯಿ ಫಲಾನುಭವಿ ವಂತಿಗೆ ಪಾವತಿಸಬೇಕು.
ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ, ಹಾನಗಲ್ಲ, ರಾಣಿಬೆನ್ನೂರ ಹಾಗೂ ಸವಣೂರು ತಾಲೂಕಿಗೆ ತಲಾ 50, ಹಿರೇಕೇರೂರ ಹಾಗೂ ರಟ್ಟಿಹಳ್ಳಿ ತಾಲೂಕಿಗೆ ತಲಾ 60 ಹಾಗೂ ಶಿಗ್ಗಾವಿ ತಾಲೂಕಿಗೆ 100 ಮ್ಯಾಟ್ ವಿತರಣೆ ಗುರಿ ನಿಗದಿಪಡಿಸಲಾಗಿದೆ.
ಅರ್ಜಿ ನಮೂನೆಗಳನ್ನು ಹತ್ತಿರದ ಪಶುವೈದ್ಯ ಸಂಸ್ಥೆಗಳಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಆಸಕ್ತ ರೈತರು ಆಧಾರ್ ಕಾರ್ಡ್, ಸ್ಥಳೀಯ ಪಶು ವೈದ್ಯ ಸಂಸ್ಥೆಗಳಿಂದ ಪಡೆದ ಜಾನುವಾರು ದೃಢೀಕರಣ ಪತ್ರ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮಾತ್ರ) ಪತ್ರಗಳ ನಕಲು ಪ್ರತಿಗಳೊಂದಿಗೆ ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆಗಸ್ಟ್ 22 ರೊಳಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳಿಂದ ಸಂಪರ್ಕಿಸಲು ಮತ್ತು ಜಿಲ್ಲೆಯ ರೈತರು ಈ ಯೋಜನೆಯ ಸದುಪಪಯೋಗ ಪಡೆದುಕೊಳ್ಳುವಂತೆ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ