ಮಳೆಯಿಂದಾಗಿ ಬೆಳೆಹಾನಿಯಾಗಿರುವ ರೈತರ ಖಾತೆಗೆ ಮುಂದಿನ ಎರಡು ದಿನಗಳಲ್ಲಿ 116 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
ಹೌದು, ಮಳೆಯಿಂದಾಗಿ ಸಂಭವಿಸಿರುವ ಬೆಳೆಹಾನಿ ಕುರಿತು ರಾಜ್ಯದ ಕೆಲವೆಡೆ ಸಮೀಕ್ಷೆ ನಡೆಸಲಾಗಿದ್ದು, ಮುಂದಿನ ಎರಡು ದಿನಗಳಲ್ಲಿ 116.38 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
ಸೋಮವಾರ ಅತೀವೃಷ್ಟಿ ಕುರಿತ ಚರ್ಚೆ ವೇಳೆ ಸರ್ಕಾರವು ಬೆಳೆಹಾನಿ ಕುರಿತು ಸಮೀಕ್ಷೆ ನಡೆಸಿಲ್ಲ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಜಂಟಿಯಾಗಿ ಉತ್ತರ ನೀಡಿದ್ದಾರೆ.
ಕೆಲವು ಪ್ರದೇಶದಲ್ಲಿ ನೀರು ನಿಂತಿರುವ ಕಾರಣದಿಂದಾಗಿ ಸಮೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಕೆಲವೆಡೆ ಸಮೀಕ್ಷೆ ನಡೆಯತ್ತಿದ್ದು, ಸಮೀಕ್ಷೆ ಕಾರ್ಯ ಮುಗಿದು ವಿವರ ಅಪಲೋಡ್ ಆಗುತ್ತಿದ್ದಂತೆ ಪರಿಹಾರ ನೀಡಲಾಗುವುದು. ಈಗಾಗಲೇ 1.4 ಲಕ್ಷ ರೈತರ ಸಮೀಕ್ಷೆ ನಡೆಸಲಾಗಿದ್ದು, 116 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇದಕ್ಕೆ ಪೂರಕವಾಗಿ ಸಚಿವಆರ್. ಅಖೋಸ ಉತ್ತರ ನೀಡಿ, ಬೆಳೆಹಾನಿ ಕುರಿತು ಸಮೀಕ್ಷೆಯು ಹಂತ ಹಂತವಾಗಿ ನಡೆಸಲಾಗುತ್ತಿದೆ. 116.38 ಕೋಟಿ ರೂಪಾಯಿ ಅನ್ನು ಎರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿ ರೈತರಿಗೆ ಹೆಚ್ಚಿನ ಪರಿಹಾರ ನೀಡಲಾಗುತ್ತಿದೆ ಎಂದರು.
ಎನ್.ಡಿ.ಆರ್.ಎಫ್್ ಪರಿಹಾರದಷ್ಟೇ ಮೊತ್ತವನ್ನು ರಾಜ್ಯ ಸರ್ಕಾರ ಸೇರಿಸಿ ದುಪ್ಪಟ್ಟು ಮೊತ್ತದ ಪರಿಹಾರ ಕೊಡುತ್ತಿದ್ದೇವೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯ ಸರ್ಕಾರ ರೈತರ ಪರವಾಗಿ ಇಂತಹ ಕ್ರಮ ಕೈಗೊಂಡಿದೆ ಎಂದು ಮುಖ್ಮಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೆಳೆ ಹಾನಿಯಾದ ರೈತರು ಇಂದೇ ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ: ಅರ್ಜಿ ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ
ಕಳೆದ ಆಗಸ್ಟ್ 20 ರಿಂದ ಈವರೆಗೆ ರಾಜ್ಯದಲ್ಲಿ 10 ರಿಂದ 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಕೃಷಿ ಬೆಳೆ ಹಾನಿಯಾಗಿದೆ. 11 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆಯೇ ಆಗಿಲ್ಲ, ಿದರ ಸಮೀಕ್ಷೆಕೂಡ ಆಗಿಲ್ಲ. ಪರಿಹಾರವೂ ಸಿಕ್ಕಿಲ್ಲ ಎಂದು ವಿಪಕ್ಷ ನಾಯಕ ಚರ್ಚೆ ವೇಳೆ ಅಪಾದಿಸಿದರು.
ಇದಕ್ಕೆ ಉತ್ತರಿಸಿದ ಸಿಎಂ ಬೊಮ್ಮಾಯಿ ಈಗಾಗಲೇ ಪ್ರಾಥಮಿಕ ಸರ್ವೆ ಆಗಿದೆ. ಜಂಟಿ ಸರ್ವೆಯೂ ಮುಗಿದಿದ್ದು, ಪರಿಹಾರ ತಂತ್ರಾಂಶಕ್ಕೆ ಬೆಳ ಹಾನಿ ವರದಿ ಅಪಲ್ಡೋಡ್ ಮಾಡಲಾಗಿದೆ. ಮಂದಿನ ಎರಡು ದಿನಗಳಲ್ಲಿ ಆಯಾ ರೈತರ ಬ್ಯಾಂಕ್ ಖಾತೆಗೆ ಹಣ ಸೇರಲಿದೆ ಎಂದರು.
ಈ ವರ್ಷ ಒಣಬೇಸಾಯಕ್ಕೆ ಪ್ರತಿ ಹೆಕ್ಟೇರಿಗೆ 13 ಸಾವಿರ ರೂಪಾಯಿ ನೀರಾವರಿ ಬೆಳೆಗೆ 25 ಸಾವಿರ ರೂಪಾಯಿ ಹಾಗೂ ತೋಟಗಾರಿಕೆ ಬೆಳೆಗಳಿಗೆ 28 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿದೆ ಎಂದರು.
ರೈತರು ತಮ್ಮ ಖಾತೆಗೆ ಹಣ ಜಮೆಯ ಸ್ಟೇಟಸ್ ಎಲ್ಲಿ ಚೆಕ್ ಮಾಡಬೇಕು?
ರೈತರು ತಮ್ಮ ಖಾತೆಗೆ ಪರಿಹಾರ ಹಮ ಜಮೆಯಾಗುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕಾಗಿ ರೈತರು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಪೇಜ್ ತೆರೆದುಕೊಳ್ಳುತ್ತದೆ. ಇಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಇದಾದಮೇಲೆ select calamity type ನಲ್ಲಿ flood ಆಯ್ಕೆ ಮಾಡಿಕೊಳ್ಲಬೇಕು. select year ನಲ್ಲಿ 2022-23 ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ ನಮೂದಿಸಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕಾಗುತ್ತದೆ. ಇದರನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಜಮೆಯಾಗಿದೆಯೋ ಇಲ್ಲವೋ ಎಂಬ ಸ್ಟೇಟಸ್ ಚೆಕ್ ಮಾಡಬಹುದು.