ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ? ಇಲ್ಲಿದೆ ಮಾಹಿತಿ

Written by Ramlinganna

Updated on:

emergency drought amount release ಬರಗಾಲ ಪರಿಹಾರ ಹಣ ಯಾರಿಗೆ ಯಾವ ಬೆಳೆಗೆ ಎಷ್ಟು ಜಮೆಯಾಗಲಿದೆ ಎಂಬುದನ್ನು ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಬರಗಾಲ ಪರಿಹಾರದ ಮೊದಲ ಕಂತಿನ ಹಣ ಈಗಾಗಲೇ  ರೈತರ ಖಾತೆೆೆಗೆ ಜಮೆಯಾಗುತ್ತಿದೆ.  ಕಳೆದ ಎರಡು ದಿನದ ಹಿಂದೆ ಸೇಡಂ ತಾಲೂಕಿನ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ. ನಿಮಗೂ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹದು.

ರಾಜ್ಯ ಸರ್ಕಾರದಿಂದಲೇ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ 2 ಸಾವಿರ ರೂಪಾಯಿವರೆಗೆ ಪರಿಹಾರ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.

ಹೌದು, ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆಯಾಗಿದ್ದು, 48.19 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಆಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಹಾಗಾಗಿ ರಾಜ್ಯ ಸರ್ಕಾರದಿಂದಲೇ ಮೊದಲ ಕಂತಿಲನಲ್ಲಿ ಪರಿಹಾರ ಹಣ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿರುವ ಒಟ್ಟು 236 ತಾಲೂಕುಗಳ ಪೈಕಿ, ಈ ಬಾರಿ223 ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಬರದಿಂದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 33,770.10 ಕೋಟಿ ಬೆಳೆ ನಷ್ಟ ಅಂದಾಜಿಸಲಾಗಿದೆ. ಕೇಂದ್ರದಿಂದ 18,171.44 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ಸೆಪ್ಟೆಂಬರ್ 21 ರಂದು ಕೇಂದ್ರಕ್ಕೆ ಮೊದಲ ಮನವಿ ಸಲ್ಲಿಸಲಾಗಿದೆ. ಕೇಂದ್ರದ ತಂಡ ಅಕ್ಟೋಬರ್ ನಲ್ಲಿ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ ಎಂದರು.

ಕಂದಾಯ ಸಚಿವರು, ಕೃಷಿ ಸಚಿವರು ದೆಹಲಿಗೆ ಹೋದರೂ ಕೇಂದ್ರ ಗೃಹ, ಹಣಕಾಸು ಮತ್ತು ಕೃಷಿ ಸಚಿವರು ಭೇಟಿಗೆ ಸಿಕ್ಕಿರಲಿಲ್ಲ.ಹೀಗಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ಬರ ಪರಿಸ್ಥಿತಿ ವಿವರಿಸಿದ್ದಾರೆ. ಆ ಬಳಿಕ, ಹಣಕಾಸು ಸಚಿವರನ್ನು ಕಂದಾಯ ಮತ್ತು ಕೃಷಿ ಸಚಿವರು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಎಂದರು.

ಯಾವ ಬೆಳೆಗೆ ಎಷ್ಟು ಜಮೆಯಾಗಲಿದೆ?

ಕೇಂದ್ರ ಸರ್ಕಾರ ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಬಹುವಾರ್ಷಿಕ ಬೆಳೆಗೆ 22500 ಪರಿಹಾರ ನಿಗದಿ ಮಾಡಿದೆ. ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ (ಎನ್.ಡಿ.ಆರ್.ಎಫ್)4663 ಕೋಟಿ ಬೆಳೆ ನಷ್ಟ ಪರಿಹಾರ ನೀಡುವಂತೆ ಕೇಂದ್ರಕ್ಕೆಮನವಿ ಸಲ್ಲಿಸಲಾಗಿದೆ ಎಂದರು.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ಬೆಳೆ ವಿಮೆ ಪರಿಹಾರವಾಗಿ ರಾಜ್ಯ ಸರ್ಕಾರ 6.5 ಲಕ್ಷ ರೈತರಿಗೆ 440 ಕೋಟಿ ಬಿಡುಗಡೆ ಮಾಡಿದೆ ಎಂದರು.

ಇದನ್ನೂ ಓದಿ : ನೀವು ಎಲ್ಲೆಲ್ಲಿ ಸಾಲ ಪಡೆದಿದ್ದೀರಿ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಜಮೀನಿನ ವಿಸ್ತೀರ್ಣ ಮತ್ತು ಬೆಳೆ ನಷ್ಟವನ್ನು ಪರಿಗಣಿಸಿ ಮೊದಲ ಕಂತಿನಲ್ಲಿ ಕನಿಷ್ಠ 1ಸಾವಿರದಿಂದ ಗರಿಷ್ಠ 2 ಸಾವಿರ ರೂಪಾಯಿಯವರೆಗೆ ನಷ್ಟ ಪರಿಹಾರ ನೀಡಲಾಗುವುದು. ಕೇಂದ್ರ ಸರ್ಕಾರದ ಬೆಳೆ ನಷ್ಟ ಪರಿಹಾರ ಹಣ ನೀಡುವ ಸಂದರ್ಭ, ರಾಜ್ಯ ಸರ್ಕಾರ ಪಾವತಿಸಿದ ಈ ಮಧ್ಯಂತರ ಬೆಳೆ ಪರಿಹಾರವನ್ನು ಕಡಿತಗೊಳಿಸಿ, ಬಾಕಿ ಉಳಿದ ಮೊತ್ತವನ್ನು ಪಾವತಿಸಲಾಗುವುದು. ಬರ ಪೀಡಿತ 223 ತಾಲೂಕುಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಬೆಳೆ ನಷ್ಟ ಪರಿಹಾರ ನೀಡಲಾಗುವುದು ಎಂದರು.

emergency drought amount release ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಸೆಲೆಕ್ಟ್ ಕಾಲಾಮಿಟಿಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು.ಇಯರ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ಆಧಾರ್ ಸಂಖ್ಯೆ ನಮೂದಿಸಿ ಕೆಳಗಡೆ ಆಧಾರ್ ಸಂಖ್ಯೆ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

Leave a Comment