ರೈತರ ಖಾತೆಗೆ 250 ಕೋಟಿ ಬೆಳೆ ಹಾನಿ ಪರಿಹಾರ ಜಮೆ

Written by Ramlinganna

Updated on:

Rs 250 crore to be released within two days  ಮಳೆಯಿಂದಾಗಿ ಬೆಳೆ ಹಾನಿಯಾದ ಎಲ್ಲಾ ರೈತರಿಗೆ ಈ ತಿಂಗಳೊಳಗೆ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಗುರುವಾರ ಅವರು ಬೆಳೆ ಹಾನಿ ಕುರಿತು 16 ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಎಸ್.ಪಿಗಳ ಜತೆಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ, ಅಕ್ಟೋಬರ್ ತಿಂಗಳಲ್ಲಿಹಾನಿಯಾದ ಬೆಳೆಗಳಿಗೂ ಸಮೀಕ್ಷೆ ನಡೆಸಿ ತಿಂಗಳೊಳಗೆ ಪರಿಹಾರ ವಿತರಿಸಬೇಕೆಂದು ಸೂಚಿಸಿದ್ದಾರೆ.

ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು. ಮಳೆಹಾನಿ ಸಂಭವಿಸಿದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಮಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಗಳು ಖುದ್ದು ಭೇಟಿ ಪರಿಹಾರ ವಿತರಣೆ ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಶೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆಹಾನಿ ಪರಿಹಾರ ವಿತರಣೆಯನ್ನು ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಲ್ಲಿ ಸಂಭವಿಸಿದ ಬೆಳೆಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಿದರು.

ಬೆಳೆ ಹಾನಿ ಮತ್ತು ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆಯಿಲ್ಲ. ಮೂಲ ಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸಿ ಅನುಸ್ಠಾನಗೊಳಿಸಬೇಕು. ಮೂಲಸೌಕರ್ಯ ಹಾನಿಗೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಲಾಗುವುದು.

ಇದನ್ನೂ ಓದಿ : ಈ ಜಿಲ್ಲೆಯ ರೈತರ ಖಾತೆಗೂ 50 ಕೋಟಿ ಬೆಳೆಹಾನಿ ಪರಿಹಾರ ಜಮೆ

ಮುಂಗಾರು ಹಂಗಾಮಿನಲ್ಲಿ ಒಟ್ಟು 9,90,957 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಸಿದ್ದು, 6,16,138 ಹೆಕ್ಟೇರ್ ಪ್ರದೇಶದ ಬೆಳೆಹಾನಿಗೆ 8.83 ಲಕ್ಷ ರೈತರಿಗೆ 947.8 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಇನ್ನೂ ಎರಡು ದಿನಗಳಲ್ಲಿ ಇನ್ನೊಂದು ಹಂತದಲ್ಲಿ ಸುಮಾರು  ಎರಡು ಲಕ್ಷ ರೈತರಿಗೆ 250 ಕೋಟಿ ರೂಪಾಯಿ ಬೆಳೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ  48,485 ಮನೆಗಳಿಗೆ ಹಾನಿ ಸಂಭವಿಸಿದ್ದು, 42661 ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಒಟ್ಟು 635.13 ಕೋಟಿ ರೂಪಾಯಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸಿ ಬೆಳೆಹಾನಿ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ನಕಲಿ ಫಲಾನುಭವಿಗಳ ಹೆಸರನ್ನು ಸಂತ್ರಸ್ತರ ಪಟ್ಟಿಯಲ್ಲಿ ಸೇರಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದರೆ ತಕ್ಷಣ ಅಮಾನುತುಗೊಳಿಸಬೇಕು. ನಿಜವಾದ ಫಲಾನುಭವಿಗಳು ಪರಿಹಾರ ವಂಚಿತ ಆಗಬಾರದು. ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತವಾದರೆ 24 ಗಂಟೆಯಲ್ಲಿ ಸಂಪರ್ಕ ಕಲ್ಪಿಸಬೇಕು.

ಬೆಳೆ ಹಾನಿಯಾದ ರೈತರು ಬೆಳೆ ಹಾನಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ?

ಬೆಳೆ ಹಾನಿಯಾದ ರೈತರು ಬೆಳೆ ಹಾನಿಗಾಗಿ ಅರ್ಜಿ ಸಲ್ಲಿಸಿದ ನಂತರ ಬೆಳೆ ಹಾನಿ ಪರಿಹಾರ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಆಯ್ಕೆ ಮಾಡಿಕೊಂಡು 2022-23ನೇ ಸಾಲಿನ, ಫ್ಲಡ್ ಹಾಗೂ ಆಯ್ಕೆ ಮಾಡಿಕೊಂಡು ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ಕ್ಯಾಪ್ಚ್ಯಾ ಕೋಡ್ ನಮೂದಿಸಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು. ಇದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕಾಗಿ ರೈತರಿಗೆ ಯಾರ ಸಹಾಯವೂ ಬೇಕಿಲ್ಲ. ಅತೀ ಸುಲಭವಾಗಿ ಮೊಬೈಲ್ನಲ್ಲಿ ಚೆಕ್ ಮಾಡಬಹುದು.

Leave a Comment