ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಯಲು 3.50 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಒಕ್ಕಲಿಗ ಸಮುದಾಯಕ್ಕೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದಕ್ಕಾಗಿ 2 3.50 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ 4 ಲಕ್ಷ ರೂಪಾಯಿಯಗಳಲ್ಲಿ 3.50 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಉಳಿದ 50 ಸಾವಿರ ರೂಪಾಯಿಗೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಮೇಲೆ ತಿಳಿಸಿದ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳ ರೈತರಿಗೆ ಘಟಕ ವೆಚ್ಚ 2 ಲಕ್ಷ ರೂಪಾಯಿ ಇದರಲ್ಲಿ 1.50 ಲಕ್ಷ ಸಹಾಯಧನ ನೀಡಲಾಗುವುದು.
ಉಳಿಕೆ ಮೊತ್ತ 50 ಸಾವಿರ ರೂಪಾಯಿಗೆ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಪ್ರತಿ ಕೊಳವೆ ಬಾವಿಗೆ ವಿದ್ಯುದೀಕರಣಕ್ಕೆ 50 ಸಾವಿರ ರೂಪಾಯಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಭರಿಸಲಾಗುವುದು.
ಅರ್ಜಿ ಸಲ್ಲಿಸಲು ಅರ್ಹತೆ
ಈ ಯೋಜನೆಯಡಿಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.
ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆ ಬಾವಿ ವೆಚ್ಚದಲ್ಲಿ ತೆರೆದ ಬಾವಿಗಳ ಮೂಲಕ ನೀರಾವರಿ ಸೌಲಭ್ಯ ನೀಡಲಾಗುವುದು. ಭೂ ಮಟ್ಟದಲ್ಲಿ ದೊರೆಯುವ ನದಿ ಮತ್ತು ಜಲಾಶಯಗಳ ನೀರಾವರಿ ಸಂಪನ್ಮೂಲಗಳಿಂದ ಸಾಮೂಹಿಕ ಯೋಜನಾ ಘಟಕ ವೆಚ್ಚದ ಮಿತಿಯಲ್ಲಿ ಪೈಪ್ ಲೈನ್ ಮೂಲಕ ಏತ ನೀರಾವರಿ ಸೌಲಭ್ಯ ಒದಿಗಸಲಾಗುವುದು.
ಅರ್ಜಿ ಆನ್ಲೈನ್ ನಲ್ಲೇ ಡೌನ್ಲೋಡ್ ಮಾಡುವುದು ಹೇಗೆ?
ರೈತರು ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಕೋರುವ ಅರ್ಜಿಯನ್ನು ಡೌನ್ಲೋಡ್ ಮಾಡಲು ಈ
https://kvcdc.karnataka.gov.in/uploads/media_to_upload1658122511.pdf
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅರ್ಜಿ ಓಪನ್ ಆಗುತ್ತದೆ. ಅರ್ಜಿ ಪ್ರಿಂಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಮ್ಮ ಜಿಲ್ಲೆಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಪ್ರತಿ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿಗಳಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಕಚೇರಿಗಳಿರುತ್ತವೆ.
ಅರ್ಜಿ ಯಾರು ಸಲ್ಲಿಸಬೇಕು?
ಹಿಂದುಳಿದ ವರ್ಗಗಳ ಪ್ರವರ್ಗ -3ಎನಲ್ಲಿ ಬರುವ ಒಕ್ಕಲಿಗ, ಸರ್ಪ ಒಕ್ಕಲಿಗ, ವಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ದಾಸ್ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ಗೌಡರ್, ರೆಡ್ಡಿ, ನಾಮಧಾರಿ ಗೌಡ, ಉತ್ತಮ ಕೊಳಗ, ಉಪ್ಪಿನ ಕೊಳಗ ಒಕ್ಕಲಿಗ ಸಮುದಾಯದ ರೈತರು ಅರ್ಜಿ ಸಲ್ಲಿಸಬಹುದು.
ದಾಖಲಾತಿಗಳು
ಅರ್ಜಿದಾರರು 2 ಪಾಸ್ ಪೋರ್ಟ್ ಅಳತೆಯ ಫೋಟೊ ನೀಡಬೇಕು. ಜಾತಿ ಮತ್ತು ಆಧಾಯ ಪ್ರಮಾಣ ಪತ್ರಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಣ ಮಾಡಿದ ಪ್ರತಿ ಲಗತ್ತಿಸಬೇಕು. ಕಂದಾಯ ಇಲಾಖೆಯ ತಹಶೀಲ್ದಾರ / ಉಪ ತಹಶೀಲ್ದಾರ ಇವರು ನೀಡಿದ ಅರ್ಜಿದಾರರ ಭೂ ಹಿಡುವಳಿ, ಸಣ್ಣ ಹಾಗೂ ಅತೀ ಸಣ್ಣ ರೈತರ ದೃಢೀಕಕರಣ ಪತ್ರ ಲಗತ್ತಿಸಬೇಕು. ಹಾಲಿ ಜಮೀನಿನಲ್ಲಿ ನೀರಾವರಿ ಸೌಲಭ್ಯಯಿಲ್ಲದೆ ಇರುವ ಬಗ್ಗೆ ಕಂದಾಯ ಇಲಾಖಾ ಅಧಿಕಾರಿಗಳಿಂದ ದೃಢೀಕರಣ ಪತ್ರ ಲಗತ್ತಿಸಬೇಕು.
ರೇಷನ್ ಕಾರ್ಡ್ ಝರಾಕ್ಸ್ ಪ್ರತಿ ಲಗತ್ತಿಸಬೇಕು. ವಾಸಸ್ಥಳ ಪ್ರಮಾಣ ಪತ್ರ, ಜಮೀನಿನ ಪಹಣಿ ಪ್ರಮಾಣ ಪತ್ರ ಲಗತ್ತಿಸಬೇಕು. ಅರ್ಜಿದಾರರ ಹೆಸರಿನಲ್ಲಿ ಜಮೀನಿನ ಖಾತಾ ಆಗಿರುವ ಬಗ್ಗೆ ಖಾತಾ ಉದ್ದರಣಾ ಎಕ್ಸ್ ಟ್ರಾಕ್ಟ್ ಲಗತ್ತಿಸಬೇಕು. ಕುಟುಂಬದ ವಂಶವೃಕ್ಷ ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಂಪರ್ಕಿಸಬೇಕು. ನಿಮ್ಮ ಜಿಲ್ಲೆಯ ನಿಮಗ ಕಚೇರಿಗಳ ವಿಳಾಸಕ್ಕಾಗಿ ಈ
https://kvcdc.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಒಕ್ಕಲಿಗರ ಅಭಿವೃದ್ಧಿ ನಿಗಮ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸಂಪರ್ಕಿಸಿ ಕೆಳಗಡೆ ನಿಗಮದ ಜಿಲ್ಲಾ ಕಚೇರಿಗಳ ವಿವರ ಮೇಲೆ ಕ್ಲಿಕ್ ಮಾಡಬೇಕು. ಆಗ ಎಲ್ಲಾ ಜಿಲ್ಲಾ ಕಚೇರಿಗಳ ವಿಳಾಸ ಫೋನ್ ನಂಬರ್ ಕಾಣುತ್ತದೆ.
Yes. Good idea
ತುಂಬಾ ಉಪಯುಕ್ತ ಮಾಹಿತಿಗಳು ಧನ್ಯವಾದಗಳು ನಿಮಗೆ