ಬೆಳೆ ಹಾನಿ ಪರಿಹಾರಕ್ಕಾಗಿ 300 ಕೋಟಿ ರೂಪಾಯಿ ಬಿಡುಗಡೆ

Written by Ramlinganna

Updated on:

300 crore released for compensation ಕಳೆದ ಜುಲೈ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದಲ್ಲಾದ ಬೆಳೆ ಹಾನಿಗೆ ಕಳೆದ ಒಂದು ವಾರದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಶನಿವಾರ ಕಲಬುರಗಿ ನಗರದ ಪೋಲೀಸ್ ಪರೇಡ್ ಮೈದಾನ ರಸ್ತೆಯಲ್ಲಿ 18.50 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದುಕೊಂಡು ತಕ್ಷಣ ಪರಿಹಾರ ನೀಡಲಾಗುತ್ತಿದೆ. ಹಿಂದೆಲ್ಲಾ ಪರಿಹಾರ ನೀಡಲು ವರ್ಶಗಟ್ಟಲೇ ಬೇಕಾಗುತ್ತಿತ್ತು. ಆದರೆ ಈಗ ಪರಿಹಾರ ತಂತ್ರಾಂಶದಲ್ಲಿ ನಮೂದಿಸಿದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.

ಒಣ ಬೇಸಾಯದ ಪ್ರತಿ ಹೆಕ್ಟೇರಿಗೆ 6800 ರೂಪಾಯಿಗಳಿಂದ 13600 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ನೀರಾವರಿ ಪ್ರದೇಶದ ಪ್ರತಿ ಹೆಕ್ಟೇರಿಗೆ 13000 ರೂಪಾಯಿಗಳಿಂದ 25 ಸಾವಿರ ರೂಪಾಯಿಗಳಇಗೆ ಹೆಚ್ಚಿಸಲಾಗಿದೆ. ಇದರೊಂದಿಗೆ ತೋಟಗಾರಿಕೆ ಪ್ರದೇಶದ ಪ್ರತಿ ಹೆಕ್ಟೇರ್ ಗೆ 18000 ರೂಪಾಯಿಯಿಂದ 28 ಸಾವಿರ ರೂಪಾಯಿಗಳಿಗೆ ಪರಿಹಾರ ಪರಿಹಾರ ಹೆಚ್ಚಿಸಲಾಗಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿ ಮೀರಿ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ಅನ್ನದಾತರಿಗೆ ನಮ್ಮಸರ್ಕಾರ ನೀಡಿದಿ ಎಂದು ತಿಳಿಸಿದರು.

300 crore released for compensation ರೈತರ ಬೆಳೆ ಹಾನಿಯಾದ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು ರೈತರು ಕೇವಲ ತಮ್ಮ ಆಧಾರ್ ನಂಬರ್ ನಮೂದಿಸಿ ಬೆಳೆ ಹಾನಿ ಪರಿಹಾರ ತಮ್ಮ ಖಾತೆಗೆ ಜಮೆ ಮಾಡಲಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.

ರೈತರು ಈ

https://landrecords.karnataka.gov.in/pariharapayment/?AaId=

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಪರಿಹಾರ ಹಣ ಸಂದಾಯ ವರದಿ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಹಾಗೂ Year ನಲ್ಲಿ 2022-23 ಆಯ್ಕೆ ಮಾಡಿಕೊಂಡು, ಆಧಾರ್ ಕಾರ್ಡ್ ನಂಬರ್ ಬರೆಯಬೇಕು. ಕ್ಯಾಪ್ಚ್ಯಾ ಕೋಡ್ ಬರೆಯಬೇಕು. ಇದಾದಮೇಲೆ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ನಿಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿರುವುದನ್ನು ಚೆಕ್ ಮಾಡಬಹುದು.

ಬೆಳೆ ಹಾನಿಯಾದ ಎಲ್ಲಾ ರೈತರಿಗೆ ಶೀಘ್ರದಲ್ಲಿ ಬೆಳೆ ಹಾನಿ ಪರಿಹಾರ ಜಮೆ- ಬಿ.ಸಿ. ಪಾಟೀಲ್

ಬೆಳೆ ಪರಿಹಾರವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು ರೈತರ ಬೆಳೆ ಹಾನಿಯಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ 7ಲಕ್ಷಕ್ಕೂ ಹೆಚ್ಚು ಬೆಳೆ ಹಾನಿಯಾಗಿದೆ.  ಈ ಕುರಿತು ಕೃಷಿ, ಕಂದಾಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಜಂಟಿಯಾಗಿ ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿ ಲಭ್ಯವಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಳೆ ಹಾನಿಯಾದ ರೈತರು ಇಂದೇ ಅರ್ಜಿ ಸಲ್ಲಿಸಿ ಪರಿಹಾರ ಪಡೆಯಿರಿ: ಅರ್ಜಿ ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

ಅವರು ಶಶಿ ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿ, ರೈತರಿಂದ ಬೆಳೆ ವಿಮೆಯ ಕಂತನ್ನು ಕಟ್ಟಿಸಿಕೊಳ್ಳುವಾಗ ಇರುವ ಧಾವಂತ ಪರಿಹಾರ ನೀಡುವಾಗಲೂ ಇರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.  ಈ ಕುರಿತಂತೆ ವಾರಕ್ಕೊಮ್ಮೆ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ ಎಂದರು.

ರೈತರಿಗೆ ಬೆಳೆ ಪರಿಹಾರ ನೀಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆ ಬೆಳೆ ಹಾನಿಯಾದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು. ರೈತರ ಖಾತೆಗೆ ನೇರವಾಗಿ ಬೆಳೆ ಪರಿಹಾರ ಹಣವನ್ನು ಜಮೆ ಮಾಡಲಾಗುವುದು ಎಂದರು.

Leave a Comment