ಈ ರೈತರಿಗೆ 5.38 ಕೋಟಿ ರೂಪಾಯಿ ಬೆಳೆ ಪರಿಹಾರ ಬಿಡುಗಡೆ

Written by Ramlinganna

Updated on:

Rs 5.38 crore has been released ಪ್ರಸಕ್ತ ಮುಗಾರುವಿನಲ್ಲಿ ಅತೀವೃಷ್ಟಿಯಿಂದ  ಬೆಳೆ ಕಳೆದುಕೊಂಡಿರುವ 3976 ರೈತರಿಗೆ 5.38 ಕೋಟಿ ಬೆಳೆ  ಹಾನಿ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಜರಬಂಡಿ ಹಳ್ಳಿ ಗ್ರಾಮದಲ್ಲಿಭಾನುವಾರ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಮುಗಿದ ಬಳಿಕ ರೈತರನ್ನುದ್ದೇಶಿಸಿ ಮಾತನಾಡುತ್ತಾ, ಚಿಕ್ಕಬಳ್ಳಾಪುರ ಜಿಲ್ಲೆಯ 3976 ರೈತರಿಗೆ ಬೆಳೆಹಾನಿ ಪರಿಹಾರ ಹಣ ನೀಡಲಾಗಿದೆ ಎಂದರು.

ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಕಷ್ಟು ಹಣ ಅವರ ಪಿಡಿ ಖಾತೆಗಳಲ್ಲಿ ಜಮೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ 435 ಮನೆಗಳಿಗೆ ಹಾನಿಯಾಗಿದ್ದು, ಆ ಕುಟುಂಬಸ್ಥರಿಗೆ ಪರಿಹಾರಕ್ಕಾಗಿ 3.69 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು.

ಈ ಹಿಂದೆ ಬೆಳೆ ಹಾನಿ ಪರಿಹಾರಕ್ಕಾಗಿ ಒಂದೊಂದು ವರ್ಷ ಕಳೆದರೂ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುತ್ತಿರಲಿಲ್ಲ. ಆದರೆ ಈಗ ಒಂದು ತಿಂಗಳಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವ ವ್ಯವಸ್ಥೆಯನ್ನು ಪಾರದರ್ಶಕವಾಗಿಸಿ ಸರ್ಕಾರ ನೇರವಾಗಿ ರೈತರ ಖಾತೆಗೆ ಜಮೆ ಮಾಡುತ್ತಿದೆ ಎಂದರು.

Rs 5.38 crore has been released ನಿಮ್ಮ ಆಧಾರ್ ನಂಬರ್ ಹಾಕಿ ಖಾತೆಗೆ ಬೆಳೆ ಹಾನಿ ಪರಿಹಾರ ಜಮೆಯಾಗಿದೆಯೇ? 

ರೈತರು ತಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಆಧಾರ್ ಸಂಖ್ಯೆ ಬಾಕ್ಸ್ ನಲ್ಲಿ ಕ್ಲಿಕ್ ಮಾಡಬೇಕು. ಅಲ್ಲಿ ರೈತರು ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಆಯ್ಕೆ ಮಾಡಿಕೊಂಡು ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2022-23 ಆಯ್ಕೆಮಾಡಿಕೊಳ್ಳಬೇಕು. ನಂತರ 12 ಅಂಕಿಗಳ ಆಧಾರ್ ಕಾರ್ಡ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ವಿವರಗಳನ್ನುಪಡೆಯಲು ಮೇಲೆ ಕ್ಲಿಕ್ ಮಾಡಿ ನಿಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿರುವ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ರೈತರಿಗೆ ಬಹಳ ವರ್ಷಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಪೌತಿ ಖಾತೆಯನ್ನುನಾವು ಒಂದು ಆಂದೋಲನವಾಗಿ ಮಾಡಿ ರೈತರಿಗೆ ಪೌತಿ ಖಾತೆ ಮಾಡಿಕೊಡುವ ಕೆಲಸವನ್ನು ಮಾಡುತ್ತಿದ್ದೇವೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕವೂ ರೈತರಿಗೆ ಪೌತಿ ಖಾತೆ ಮಾಡಿಕೊಡಲಾಗುತ್ತಿದೆ ಎಂದರು.

ಇದನ್ನೂ ಓದಿ :  ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿ ಸರ್ಕಾರದ ಈ ಸೌಲಭ್ಯಗಳನ್ನು ಪಡೆಯಿರಿ

ರೈತರು ಪೌತಿ ಖಾತೆ ಆಂದೋಲನದ ಲಾಭ ಪಡೆದುಕೊಂಡು ಮುಂದಿನ ದಿನಗಳಲ್ಲಿ ಯಾರಿಗೂ ಜಮೀನು ಮಾರಾಟ ಮಾಡದೆ ದಾಖಲೆಗಳನ್ನು ಮುಂದಿನ ನಿಮ್ಮ ಮಕ್ಕಳಿಗೆ ಭದ್ರಪಡಿಸಬೇಕು.ಪೌತಿ ಖಾತೆ ಆಂದೋಲನವನ್ನು ಇನ್ನಷ್ಟು ಚುರುಕುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ಪೌತಿ ಖಾತೆ ಎಂದರೇನು ?

ಪಿತ್ರಾರ್ಜಿತ ಆಸ್ತಿಯ ಹಕ್ಕನ್ನು ವಾರಸುದಾದರ ಹೆಸರಿಗೆ ವರ್ಗಾವಣೆ ಮಾಡಿಕೊಡುವ ಪ್ರಕ್ರಿಯೆನ್ನು ಪೌತಿ ಖಾತೆ ಎನ್ನುವರು.  ಜಮೀನಿನ ಮಾಲಿಕರು ನಿಧನವಾದ ನಂತರ ಆಸ್ತಿಯನ್ನುಪೌತಿ ಖಾತೆಯಡಿ ಅವರು ಮಕ್ಕಳು ಭಾಗ ಮಾಡಿಕೊಳ್ಳಬಹುದು. ಅಂದರೆ ಅವರ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಬಹುದು.  ಜಮೀನಿನ ಮಾಲಿಕರು ಮರಣ ಹೊಂದಿದ ನಂತರ ಆ ಆಸ್ತಿಯು ಹೆಂಡತಿ ಹಾಗೂ ಮಕ್ಕಳು ನೇರ ವಾರಸುದಾರರರಾಗಿರುತ್ತಾರೆ.

ಪೌತಿ ಖಾತೆ ಬದಲಾವಣೆಗೆ ಇದ್ದ ನಿಯಮ ಈಗ ಸಡಿಲಗೊಳಿಸಲಾಗಿದೆ. ಇದನ್ನು ಆಂದೋಲನ ರೂಪದಲ್ಲಿ ಖಾತೆ ಬದಲಾವಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.  ಮರಣ ಹೊಂದಿದ ಖಾತೆದಾರರ ವಿವರ ಪತ್ತೆ ಹಚ್ಚಿ ದಾಖಲಿಸಲು ಗ್ರಾಮ ಲೆಕ್ಕಿಗರಿಗೆ ಹೊಣೆ ನೀಡಲಾಗಿದೆ.

Leave a Comment