ಈ ಜಿಲ್ಲೆಯ ರೈತರ ಖಾತೆಗೆ 50.95 ಕೋಟಿ ಬೆಳೆ ವಿಮೆ ಜಮೆ

Written by Ramlinganna

Updated on:

50.95 crore insurance credited ಕಳೆದ ಸಾಲಿನಲ್ಲಿ ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ 50.95 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮೆಯಾಗಿದೆ.

ಹೌದು, 2022-23ನೇ ಸಾಲಿಗೆ ಸ್ಥಳೀಯ ವಿಪತ್ತು ಪರಿಹಾರ ನಿಧಿಯಡಿ ಒಟ್ಟು 1,38,169 ರೈತರಿಗೆ 23.63 ಕೋಟಿ ರೂಪಾಯಿ ಪರಿಹಾರ ಮತ್ತು ಕ್ರಾಪ್ಕಟಿಂಗ್ ಎಕ್ಸಪಿರಿಮೆಂಟ್ ನಲ್ಲಿ ಒಟ್ಟು 73,331 ರೈತರಿಗೆ 27.32 ಕೋಟಿ ರೂಪಾಯಿ ಹೀಗೆ ಒಟ್ಟು 50.95 ಕೋಟಿ ರೂಪಾಯಿ ಪರಿಹಾರ ಬೀದರ್ ಜಿಲ್ಲೆಯ ರೈತರ ಖಾತೆಗೆ ಜಮೆ ಮಾಡಲಾಗಿದೆ. ಹಾಗಾಗಿ ಪ್ರತಿ ವರ್ಷ ಬೀದರ್ ಜಿಲ್ಲೆಯ ರೈತರ ಬೆಳೆಗಳು ಹಾಳಾದಾಗ ಅವರ ಹಾಳಾದ ಬೆಳೆಗಳಿಗೆ ಸೂಕ್ತವಾದ ಪರಿಹಾರ ಪಡೆದುಕೊಳ್ಳುತ್ತಿದ್ದಾರೆ ಕೇಂದ್ರ ಸಚಿವ ಭಗವಂತ ಖೂಬಾ ಎಂದು ತಿಳಿಸಿದ್ದಾರೆ.

2023-24ನೇ ಸಾಲಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ನೋಂದಣಿ ಪ್ರಾರಂಭವಾಗಿದೆ. ಈ ವರ್ಷವೂ ಸಹ ರಾಷ್ಟ್ರೀಕೃತ ಬ್ಯಾಂಕ್, ಡಿಸಿಸಿ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್, ಕಾಮನ್  ಸರ್ವಿಸ್ ಸೆಂಟರ್ ಮತ್ತು ಗ್ರಾಮ ಒನ್ ಗಳಲ್ಲಿ ರೈತರು ತಮ್ಮ ಬೆಳೆಗಳನ್ನು ನೋಂದಾಯಿಸಿಕೊಳ್ಳಲು ಸಚಿವರು ಕೋರಿದ್ದಾರೆ.

ನೋಂದಣಿ ಮಾಡಿಕೊಳ್ಳುವಾಗ ರೈತರು ತಮ್ಮ ಆಧಾರ್ ಕಾರ್ಡ್, ಹೊಲದ ಪಹಣಿ, ಆಧಾರ್ ಲಿಂಕ್ ಮಾಡಿರುವ ಬ್ಯಾಂಕ್ ಖಾತೆಯ ಝರಾಕ್ಸ್ ಪ್ರತಿಗಳನ್ನು ನೀಡಬೇಕು ಹಾಗೂ ಜುಲೈ 31 ರೊಳಗೆ ವಿಮೆ ಪಾವತಿಸಬೇಕು. ಉದ್ದು, ಹೆಸರು, ಸೋಯಾ, ಅವರೆ, ತೊಗರ, ಜೋಳ ಬೆಳೆಗಳಿಗೆ ನೋಂದಣಿ ಮಾಡಿಸಿಕೊಳ್ಳಬೇಕು ಹಾಗೂ ಸೂರ್ಯಕಾಂತಿ ಬೆಳೆಗೆ ಆಗಸ್ಟ್ 16 ರೊಳಗಾಗಿ ನೋಂದಾಯಿಸಿಕೊಳ್ಳತಕ್ತದ್ದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಜಮೆಗೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ರೈತರು ತಮ್ಮಬೆಳೆಗಳ್ನು ನೋಂದಾಯಿಸಬೇಕು. ನೋಂದಣಿ ಮತ್ತು ಅದಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಟೋಲ್ ಫ್ರೀ ನಂಬರ್ 1800 200 5142 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ನೀವು ಯಾವ ಯಾವ ಬೆಳೆಗಳಿಗೆ ವಿಮೆ ಕಟ್ಟಬಹುದು? ಇಲ್ಲೇ ಚೆಕ್ ಮಾಡಿ

ರೈತರು ತಮ್ಮ ಮನೆಯಲ್ಲಿಯೇ ಕುಳಿತು ತಾವು ಯಾವ ಯಾವ ಬೆಳೆಗಳಿಗೆ ವಿಮೆ ಪಾವತಿಸಬಹುದು ಎಂಬುದನ್ನು ಮನೆಯಲ್ಲಿಯೇ ಕುಳಿತು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಡಿದ್ದೀರಾ… ರೈತರು ಈ

https://samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡರೆ ಸಾಕು, ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು. ಹಾಗೂ ಯಾವ ಬೆಳೆಗೆ ಯಾವ ದಿನಾಂಕದೊಳಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ. ಆ ಆಧಾರದ ಮೇಲೆ ನೀವು ನಿಮ್ಮ ಬೆಳೆಗಳಿಗೆ ವಿಮೆ ಮಾಡಿಸಬಹುದು.

ಬೆಳೆ ವಿಮೆ ಎಲ್ಲಿ ಕಟ್ಟಬೇಕು?

ರೈತರು  ತಮ್ಮ ಮುಂಗಾರು ಹಂಗಾಮಿನ ಬೆಳೆಗಳಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಪಾವತಿಸಬಹುದು ನಿಮ್ಮ ಹತ್ತಿರದ ಬ್ಯಾಂಕುಗಳಲ್ಲಿ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮಾತ್ರ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಬಹುದಾಗಿತ್ತು.ಈಗ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳಬಹುದು.

50.95 crore insurance credited ಬೆಳೆ ವಿಮೆ ಮಾಡಿಸಿದ ನಂತರ ರೈತರೇನು ಮಾಡಬೇಕು?

ಬೆಳೆ ವಿಮೆ ಮಾಡಿಸಿದ ನಂತರ ರೈತರು ಒಂದು ವೇಳೆ ನಿಮ್ಮ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ಬೆಳೆ ವಿಮಾ ಕಂಪನಿಗೆ ತಿಳಿಸಬೇಕಾಗುತ್ತದೆ. ಬೆಳೆ ವಿಮಾ ಕಂಪನಿಗೆ ದೂರು ನೀಡಿದರೆ ಮಾತ್ರ ನಿಮಗೆ ಬೆಳೆ ವಿಮೆ ಹಣ ಜಮೆಯಾಗುವ ಸಾಧ್ಯತೆಯಿದೆ.

Leave a Comment