ಈ ರೈತರ ಖಾತೆಗೂ 50 ಕೋಟಿ ಬೆಳೆಹಾನಿ ಪರಿಹಾರ ಜಮೆ

Written by Ramlinganna

Updated on:

50 crore crop compensation ಜೂನ್  ತಿಂಗಳಿನಿಂದ ಇಲ್ಲಿಯವರೆಗೆ ಸುರಿದ ಮಳೆಯಿಂದಾಗಿ ಬೆಳೆ ಹಾನಿಯಾದ ಬಾಗಲಕೋಟೆ  ಜಿಲ್ಲೆಯ ರೈತರಿಗೆ 50 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿ ಪಾವತಿಸಲಾಗಿದೆ  ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಜಿಪಂ ಆಡಳಿತಾಧಿಕಾರಿ ಶಿವಯೋಗಿ ಕಳಸದ ಹೇಳಿದರು.

ಅವರು ಬಾಗಲಕೋಟೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸೆಪ್ಟೆಂಬರ್ ತಿಂಗಳಿನ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 56916 ರೈತರ ಬೆಳೆಗಳು ಹಾನಿಗೊಳಗಾಗಿದ್ದು, ಈ ಪೈಕಿ 41723 ರೈತರಿಗೆ ಒಟ್ಟು 50.01 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿ ಹಣ ಪಾವತಿ ಆಗಿರುತ್ತದೆ.

ಮೊದಲನೇ ಹಂತದಲ್ಲಿ 773 ರೈತರಿಗೆ 1.12 ಕೋಟಿ ರೂಪಾಯಿ, ಎರಡನೇ ಹಂತದಲ್ಲಿ 12365 ರೈತರಿಗೆ 12.82 ಕೋಟಿ ರೂಪಾಯಿ, ಮೂರನೇ ಹಂತದಲ್ಲಿ 10630 ರೈತರಿಗೆ 13.46 ಕೋಟಿ ರೂಪಾಯಿ ಹಣ ಪಾವತಿಸಲಾಗಿದೆ. ನಾಲ್ಕನೇ ಹಂತದಲ್ಲಿ 17955 ರೈತರಿಗೆ 21.59 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿ ಹಣ ಪಾವತಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ PM kisan ಅರ್ಹ ಮತ್ತು ಅನರ್ಹ ರೈತರ ಪಟ್ಟಿ ಬಿಡುಗಡೆ

ಜಿಲ್ಲೆಯಲ್ಲಿ ಉಂಟಾದ ಅಕಾಲಿಕ ಮಳೆ ಹಾಗೂ ಪ್ರವಾಹದಿಂದಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಸೇತುವೆ, ಹೆಸ್ಕಾಂ, ಕೈಮಗ್ಗ, ಶಾಲಾ ಕೊಠಡಿ ಹಾನಿಯ ಮಾಹಿತಿ ಹಾಗೂ ಪರಿಹಾರ ಪಾವತಿ ಹಾಗೂ ದುರಸ್ತಿ ಕೈಗೊಂಡ ಬಗ್ಗೆ ಮಾಹಿತಿ ಪಡೆದರು.  ಜಿಲ್ಲೆಯಲ್ಲಿ ರೈತರ ಇಕೆವೈಸಿಶೇ. 66 ರಷ್ಟು ಆಗಿದ್ದು, ನೂರಕ್ಕೆ ನೂರರಷ್ಟು ಆಗಬೇಕು. ಇದಕ್ಕಾಗಿ ಕಂದಾಯ ಇಲಾಖೆ ಸೇರಿ ಇತರೆ ಇಲಾಖೆಗಳ ಸಹಕಾರ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್ ಅವರಿಗೆ ತಿಳಿಸಿದರು.

50 crore crop compensation ಇತರ ಜಿಲ್ಲೆಗಳ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ

ಕಲಬುರಗಿ, ಬೀದರ್, ಹುಬ್ಬಳ್ಳಿ ಜಿಲ್ಲೆಯ ರೈತರಿಗೂ ಇತ್ತೀಚೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಒಂದೆರಡು ಹಂತದಲ್ಲಿ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೂರು ಮತ್ತು ನಾಲ್ಕನೇ ಹಂತದಲ್ಲಿಯೂ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತೀ ಶೀಘ್ರದಲ್ಲಿ ಬೆಳೆಹಾನಿಯಾದ ಎಲ್ಲಾ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು.

ಬೆಳೆ ಹಾನಿಯಾದ ರೈತರು ಅರ್ಜಿ ಸಲ್ಲಿಸಿ ಬೆಳೆ ಪರಿಹಾರ ಪಡೆಯಿರಿ

ಬೆಳೆ ಹಾನಿಯಾದ ರೈತರು ತಮ್ಮ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯತನಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಪಡೆಯಬಹುದು. ರೈತರು ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಹತ್ತಿರದ ಗ್ರಾಮ ಪಂಚಾಯತನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಗ್ರಾಪಂ ಅಧಿಕಾರಿಗಳು ಪರಿಹಾರ ಪೋರ್ಟಲ್ ನಲ್ಲ ಅಪ್ಲೋಡ್ ಮಾಡಿದ ನಂತರ ಪರಿಹಾರ ಹಣ ಜಮೆ ಮಾಡಲಾಗುವುದು.

ಬೆಳೆ ಹಾನಿ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ಹಾನಿಯಾದ ರೈತರು ತಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಆಧಾರ್ ಕಾರ್ಡ್ ನಮೂದಿಸಿ ಚೆಕ್ ಮಾಡಬಹುದು. ಹೌದು, ರೈತರು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಧಾರ್ ಸಂಖ್ಯೆ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Flood ಆಯ್ಕೆ ಮಾಡಿಕೊಳ್ಳಬೇಕು. 2022-23 ನೇ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ಆಧಾರ್ ಸಂಖ್ಯೆ ನಮೂದಿಸಿ ಕ್ಯಾಪ್ಚ್ಯಾ ಕೋಡ್ ನಮೂದಿಸಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

Leave a Comment