Rs18.44 crore money released ಮುಂಗಾರು ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರಿಗೆ 18.44 ಕೋಟಿ ರೂಪಾಯಿ ಬೆಳೆ ವಿಮೆ ಹಣ ಬಿಡುಗಡೆಯಾಗಿದೆ.
ಹೌದು, 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸ್ಥಳೀಯ ನೈಸರ್ಗಿಕ ವಿಕೋಪದಿಂದ ಬೆಳೆ ಹಾಳಾಗಿ ಬೆಳೆ ವಿಮೆ ಮಾಡಿಸಿ ತಡವಾಗಿ ಅಂದರೆ ವಿಕೋಪ ಕಂಡು ಬಂದು 4 ರಿಂದ 10 ದಿನಗಳ ಅವಧಿಯಲ್ಲಿ ದೂರು ಸಲ್ಲಿಸಿದ ಕಲಬುರಗಿ ಜಿಲ್ಲೆಯ 19,047 ರೈತರುಗಳ ಖಾತೆಗೆ 9.59 ಕೋಟಿ ರೂಪಾಯಿ ಹಣ ಜಮೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
2022 ರ ಮುಂಗಾರು ಹಂಗಾಮಿನ ಕೃಷಿ ವಿಮೆ ಪರಿಹಾರ ಹಣವನ್ನು ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಜಿಲ್ಲೆಯ 3 ತಾಲೂಕಿನ 4 ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಯಲ್ಲಿಟ್ಟಿತ್ತು. ಈಗ ಅದನ್ನು ಸಹ 2579 ರೈತರಿಗೆ ರೂಪಾಯ 8 ಕೋಟಿಗೂ ಅಧಿಕ ಹಣ ಬಿಡುಗಡೆಗೊಳಿಸಿದೆ ಎಂದು ತಿಳಿಸಿದ್ದಾರೆ.
ಅಫಜಲ್ಪೂರ ತಾಲೂಕಿನ ಮಾಶ್ಯಾಳ ಗ್ರಾಮದ 464 ರೈತರಿಗೆ ಬೆಳೆ ವಿಮ ಹಣ ಪಾವತಿಸಲಾಗಿದೆ. ಅದೇ ರೀತಿ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದ 1187 ರೈತರಿಗೆ, ಕೊಡ್ಲಹಂಗರಗಾ ಗ್ರಾಮದ 525 ರೈತರಿಗೆ ಬೆಳೆ ವಿಮೆ ಹಣ ಪಾವತಿಸಲಾಗಿದೆ.ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದ 403 ರೈತರಿಗೆ ಬೆಳೆ ವಿಮೆ ಹಣ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.
Rs18.44 crore money released ಯಾವ ಯಾವ ರೈತರ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಿದೆ? ಚೆಕ್ ಮಾಡಿ
ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಕಳೆದ ವರ್ಷದ ಸ್ಟೇಟಸ್ ಚೆಕ್ ಮಾಡುವುದಾದರೆ 2022-23 ಆಯ್ಕೆ ಮಾಡಿಕೊಳ್ಳಬೇಕು. ಪ್ರಸಕ್ತ ವರ್ಷದ ಸ್ಟೇಟಸ್ ಚೆಕ್ ಮಾಡಬೇಕಾದರೆ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Kharif ಆಯ್ಕೆ ಮಾಡಿಕೊಂಡು ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ Farmers ಕೆಳಗಡೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Check status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.
ಅಲ್ಲಿ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು.
ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದ್ದರೆ ಯಾವ ಬ್ಯಾಂಕಿನಲ್ಲಿ ಎಷ್ಟು ಹಣ ಜಮೆಯಾಗಿದೆ ಎಂಬುದು ಕಾಣಿಸುತ್ತದೆ. ನಿಮಗೆ ಇನ್ನೂ ಬೆಳೆ ವಿಮೆ ಹಣ ಜಮೆಯಾಗದಿದ್ದರೆ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಓದಿ : ಪಿಎಂ ಕಿಸಾನ್ ಅನರ್ಹ ರೈತರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿರುವವರಿಗೆ ಹಣ ಜಮೆಯಾಗಲ್ಲ
ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ. ಅಲ್ಲಿ ಕಾಣುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದ ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ View Details ಮೇಲೆ ಕ್ಲಿಕ್ ಮಾಡಿದರೆ ನೀವು ಯಾವ ಬೆಳೆಗೆ ಎಷ್ಟು ವಿಮೆ ಹಣ ಪಾವತಿಸಿದ್ದೀರಿ? ನಿಮ್ಮ ಸರ್ವೆ ನಂಬರ್, ಹಾಗೂ ನಿಮಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಬಹುದು ಎಂಬುದರ ಮಾಹಿತಿ ಸಹ ಕಾಣಿಸುತ್ತದೆ.
ಇತರ ಜಿಲ್ಲೆಯ ರೈತರೂ ಸಹ ಇದೇ ರೀತಿ ಬೆಳೆ ವಿಮೆ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.