ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

Written by By: janajagran

Updated on:

Second pu exam postponed ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರಿಂದ  ಇದೇ ತಿಂಗಳು ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು (Second pu exam postponed) ಮುಂದೂಡಲಾಗಿದೆ ಎಂದು   ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್‌ ತಿಳಿಸಿದ್ದಾರೆ.

ಅವರು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ ಇಪ್ಪತ್ತು ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ ಮೊಬೈಲ್ ನಲ್ಲೇ ಜಮೀನಿನ ಸ್ಕೆಚ್ ನಕ್ಷೆ ಹೀಗೆ ಪಡೆಯಿರಿ

ಸಿಬಿಎಸ್ಇ ಸೇರಿದಂತೆ ಕೇಂದ್ರ ಮಂಡಳಿ ಪರೀಕ್ಷೆಗಳು ಹಾಗೆಯೇ ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ಹಿಮಾಚಲ ಪ್ರದೇಶ, ಛತ್ತೀಸ್ಘಡ್, ರಾಜಸ್ಥಾನ, ಪಂಜಾಬ್ ಹಾಗೂ ತೆಲಂಗಾಣ ರಾಜ್ಯಗಳ 12ನೇ ತರಗತಿ ಮಂಡಳಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪರೀಕ್ಷೆ ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ  ಎಂದು ತಿಳಿಸಿದರು.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ನಡೆಸದೆ ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು. ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು ಬ್ರಿಡ್ಜ್ ಕೋರ್ಸ್‌ಗಳನ್ನು ನಡೆಸಲಾಗುವುದು. ಅಲ್ಲದೆ, ಇಲಾಖೆಯ ಯೂ-ಟ್ಯೂಬ್ ಚಾನಲ್‌ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್‌ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ..!

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದರು.

ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮೊಬೈಲ್ ನಲ್ಲೇ ನೋಡಿ

ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಂದು ತಮ್ಮ ರಿಸಲ್ಟ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ

https://karresults.nic.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಎಕ್ಸಾಮಿನೇಶನ್ ರಿಸಲ್ಟ್ -2023 ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಕರ್ನಾಟಕಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಹಾಗೂ ದ್ವಿತೀಯ ಪೀಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶಪ್ರಕಟಣೆ ಎಂಬ ಎರಡು ಆಯ್ಕೆಗಳು ಕಾಣಿಸುತ್ತವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಕೆಳಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ರೋಲ್ ನಂಬರ್ ಅಥವಾ (Registration Number)  ಮತ್ತು ಜನ್ಮ ದಿನಾಂಕ ಬರೆಯಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Leave a Comment