ಸ್ವಯಂ ಉದ್ಯೋಗ ಕೈಗೊಳ್ಳಲು 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Self Employment subsidy : ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ / ಕೃಷಿ ಅವಲಂಬಿತ ಚಟುವಟಿಕೆ ಕೈಗೊಳ್ಳಲು 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳ ಖರೀದಿಗೂ 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವುದು. ಇದರೊಂದಿಗೆ ಆರ್ಥಿಕ ಚಟುವಟಿಕೆಗಳು ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಠ 1 ಲಕ್ಷ ರೂಪಾಯಿ ಸಹಾಯಧನ ಮಂಜೂರು ಮಾಡಲಾಗುವುದು.

ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.  2024-25ನೇ ಸಾಲಿಗೆ ಅನುಷ್ಠಾನನಗೊಳಿಸುತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ವೀರಶೈವ – ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ –III ಬಿ) ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸ್ಯಯಂ ಉದ್ಯೋಗ ಕೈಗೊಳ್ಳುವ ಯೋಜನೆಯೂ ಒಂದಾಗಿದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ, ಸಾರ್ವಜನಿಕರಿಗೆ  ಆರ್ಥಿಕ ನೆರವು ನೀಡಲಾಗುವುದು.

Self Employment subsidy ಅರ್ಜಿ ಎಲ್ಲಿ ಸಲ್ಲಿಸಬೇಕು ಈ ಯೋಜನೆಯ ಸೌಲಭ್ಯ ಪಡೆಯಲು ಬೇಕಾಗುವ ಅರ್ಹತೆಗಳಾವುವು?

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು

ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಡಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ :  ಮುಟೇಶನ್ ಪ್ರಕಾರ ನಿಮಗೆಷ್ಟು ಎಕರೆ ಜಮೀನಿದೆ? ಇಲ್ಲೇ ಚೆಕ್ ಮಾಡಿ

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

2023-24ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.

Self Employment subsidy ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.

ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ಇರಬೇಕು.

ಸಣ್ಣ ಅಥವಾ ಅತೀ ಸಣ್ಣ ರೈತರ ದೃಢೀಕರಣ ಪತ್ರ ಇರಬೇಕು.

ರೈತರ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಸಲ್ಲಿಸಬೇಕು.

ಜಮೀನಿನ ಪಹಣಿ (ಆರ್.ಟಿ.ಸಿ) ಮೂಲ ಪತ್ರ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಯಾರಿಗೆ ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ  ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ. ದೇವರಾಜ ಅರಸು ಹಿಂದುಳದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು

ಇನ್ನೇಕ ತಡ ಕೂಡಲೇ ನಿಮ್ಮ ಹತ್ತಿರದ ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ತಮ್ಮ ಹತ್ತಿರದ ಕೇಂದ್ರಗಳ್ಲಿ ಅರ್ಜಿ ಸಲ್ಲಿಸಬೇಕು.

Leave a Comment