ಅಸಂಘಟಿತ ಕಾರ್ಮಿಕರಿಗೆ 2000 ರೂ.ಗಳ ಆರ್ಥಿಕ ನೆರವು

Written by By: janajagran

Updated on:

seva sindhu portal app ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಒಂದು ಬಾರಿ 2000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ 2021 ರ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಅಸಂಘಟಿತ ವರ್ಗದ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು (ಮನೆ ಕೆಲಸ), ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.2020ನೇ ಸಾಲಿನ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ನೆರವು ಪಡೆದ ಅಗಸರು ಮತ್ತು ಕ್ಷೌರಿಕ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿಲ್ಲ. ಸದರಿ ಸಾಲಿನಲ್ಲಿ ನೆರವು ಪಡೆಯದ ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಕುಟುಂಬದ ಓರ್ವ ಕಾರ್ಮಿಕ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು.

seva sindhu portal app ಕಾರ್ಮಿಕರಿಗೆ ಆರ್ಥಿಕ ನೆರವು ಪಡೆಯಲು ಏನು ಮಾಡಬೇಕು

ನೆರವು ಪಡೆಯಲು ಅರ್ಹತಾ ಷರತ್ತುಗಳು: ಇ.ಎಸ್.ಐ. ಮತ್ತು ಪಿ.ಎಫ್. ಕಾಯ್ದೆಯಡಿ ನೋಂದಾಯಿತ ಫಲಾನುಭವಿಗಳಾಗದೆ ಅಸಂಘಟಿತ  ಕಾರ್ಮಿಕರಾಗಿರಬೇಕು. ವಯೋಮಿತಿ 18 ರಿಂದ 65 ವರ್ಷದೊಳಗಿದ್ದು, ಬಿ.ಪಿ.ಎಲ್. ಕುಟುಂಬದವರಾಗಿರಬೇಕು. ಕುಟುಂಬದಲ್ಲಿ ಓರ್ವರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಕಟ್ಟಡ ಕಾರ್ಮಿಕರು ಹಾಗೂ ಘೋಷಿತ 11 ವರ್ಗಗಳಲ್ಲಿ ಕೇವಲ ಒಂದು ವೃತ್ತಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ.

ಇದನ್ನೂ ಓದಿ ಅನ್ನಭಾಗ್ಯ ಹಣ ನಿಮಗೆ ಜಮೆಯಾಗಿಲ್ಲವೇ? ಸ್ಟೇಟಸ್ ಚೆಕ್ ಮಾಡಿ

ಕರ್ನಾಟಕದಲ್ಲಿ ವೃತ್ತಿ ನಿರ್ವಹಿಸುವ ಹೊರ ರಾಜ್ಯದ ಕಾರ್ಮಿಕರು ಸಹ ಪರಿಹಾರಕ್ಕೆ ಅರ್ಹರಿದ್ದು, ಕರ್ನಾಟಕ ಸರ್ಕಾರ ನೀಡಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ವೃತ್ತಿಗೆ ಸಂಬಂಧಿಸಿದ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದಿರಬೇಕು. ಅಧಾರ ಸಂಖ್ಯೆ ಹೊಂದಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಅರ್ಹ ಫಲಾನುಭವಿ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಶೀಘ್ರದಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಆಧಾರ ಕಾರ್ಡ್, ವಿಳಾಸ ಧೃಡೀಕರಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ಬಿ.ಪಿ.ಎಲ್ ಕಾರ್ಡ್, ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ತಾನು ಅಸಂಘಟಿತ ಕಾರ್ಮಿಕರೆಂದು ಸ್ವಯಂ ಘೋಷಣೆ ಪ್ರಮಾಣ ಪತ್ರ ಹಾಗೂ ನಿಗದಿತ ಅಧಿಕಾರಿಗಳಿಂದ ಧೃಡೀಕರಿಸಲ್ಪಟ್ಟ ಉದ್ಯೋಗ ಪ್ರಮಾಣ ಪತ್ರ ದಾಖಲೆಗಳನ್ನು ಲಗತ್ತಿಸಬೇಕು. ಅಲ್ಲದೇ ಅರ್ಜಿಯಲ್ಲಿ ಬ್ಯಾಂಕ್ ಖಾತೆಯ ವಿವರ ಹಾಗೂ ದೂರವಾಣಿ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ.

1 thought on “ಅಸಂಘಟಿತ ಕಾರ್ಮಿಕರಿಗೆ 2000 ರೂ.ಗಳ ಆರ್ಥಿಕ ನೆರವು”

Leave a Comment