ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Written by Ramlinganna

Published on:

Seven days rain alert : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಮಳೆಗಾಗಿ ಕಾಯುತ್ತಿರುವ ರೈತರಿಗೆ ಇದು ಸಂತಸದ ಸಂಗತಿಯಾಗಿದೆ. ಈಗಾಗಲೇ ಅಲ್ಲಲ್ಲಿ ಪೂರ್ವ ಮುಂಗಾರು ಮಳೆ ಸುರಿಯುತ್ತಿದೆ.  ಬಿತ್ತನೆಗೆ ತಯಾರಿ ನಡೆಸುತ್ತಿರುವ ರೈತರಿಗೆ ಅತ್ಯಂತ ಸಂತಸವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಲಿದೆ.  ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಗಳಲ್ಲಿಯೂ ಉತ್ತಮ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಗಾಳಿಯೊಂದಿಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಉಡುಪಿ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಚಿಕ್ಕಮಗಳೂರು ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ವಿಜಯನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ರಾಯಚೂರು, ಕೊಪ್ಪಳ, ಕೋಲಾರ, ರಾಮನಗರ, ತುಮಕೂರು, ವಿಜಯಪುರ  ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಹಗುರವಾದ ಮಳೆಯಾಗುವ ಸಂಭವವಿದೆ.

Seven days rain alert ಜೂನ್ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ

ಮುಂದಿನ ಐದು ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದಕೆಲವು ಭಾಗಗಳು ಮಾಲ್ಡಿವ್ಸ್ ಮತ್ತು ಕೋಮರಿನ್ ಪ್ರದೇಶದಲ್ಲಿ ನೈರುತ್ಯ ಮಾನ್ಸೂನ್ ಮುನ್ನಡೆಯಲಿದೆ. ಕೇರಳಕ್ಕೆ ಇಂದು ಅಥವಾ ನಾಳೆ ಮುಂಗಾರು ಪ್ರವೇಶಿುಸುವ ಸಾಧ್ಯತೆಯಿದೆ. ಜೂನ್ 7 ರಂದು ರಾಜ್ಯದ ಕರಾವಳಿಗೆ ಮುಂಗಾರು ಮಾರುತಗಳು ಪ್ರವೇಶಿಸಲಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ರಾಜವೇಲ್ ಮಾಣಿಕ್ಯಂ ಹೇಳಿದ್ದಾರೆ.

ವರುಣಮಿತ್ರ ಸಹಾಯವಾಣಿ

ಮಳೆ ಗಾಳಿ ಹಾಗೂ ಸಿಡಿಲು ಮಿಂಚಿನಿಂದ ತಪ್ಪಿಸಿಕೊಳ್ಳಲು ಜನಸಾಮಾನ್ಯರು ಕೆಎಸ್.ಎನ್.ಡಿ.ಎಂ.ಸಿಯಲ್ಲಿ ಚಾಲ್ತಿಯಲ್ಲಿರುವ ವರುಣಮಿತ್ರ ಸಹಾಯವಾಣಿ 9243345433 ನ್ನುಸಂಪರ್ಕಿಸಿ ಹವಾಮಾನ ಮಾಹಿತಿ ಪಡೆದುಕೊಳ್ಳಬಹುದು ಎಂದು ಹಾವೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ಮೂರ್ತಿ ತಿಳಿಸಿದ್ದಾರೆ.

ಇದನ್ನೂಓದಿFID ಗೆ ನಿಮ್ಮ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿವೆ? ಇಲ್ಲೇ ಚೆಕ್ ಮಾಡಿ

ಅದೇ ರೀತಿ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು ಕೆಎಸ್ಎನ್.ಡಿ.ಎಂ.ಸಿ ಅಭಿವೃದ್ಧಿಪಡಿಸಿರುವ ಸಿಡಿಲು ಆ್ಯಪ್ ನಲ್ಲಿ ಪಡೆಯಬಹುದು. ಅಥವಾ ಎನ್.ಡಿ.ಎಂ.ಎ ಅಭಿವೃದ್ಧಿಪಡಿಸಿರುವ ದಾಮಿನಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಇರುತ್ತದೆ ಎಂಬುದರ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ, ಸೂಚನೆಗಳನ್ನು ನೀಡುತ್ತದೆ.

ಹವಾಮಾನ ವಿಷಯದಲ್ಲಿ ಮಾಹಿತಿ ಮತ್ತು ಅಲರ್ಟ್ ಆ್ಯಪ್ ಪಡೆಯಲು ಎನ್.ಡಿಎಂಎ ಅಭಿವೃದ್ಧಿಪಡಿಸಿರುವ ಸಾಚೆಟ್ ಆ್ಯಪ್ ನಲ್ಲಿ ಸಹ ಪಡೆಯಬಹುದಾಗಿದೆ. ಈ ಅವಶ್ಯಕ ಆ್ಯಪ್ ಗಳಿಂದ ಜಿಲ್ಲೆಯಲ್ಲಿ ಜೀವಹಾನಿ, ಜಾನುವಾರುಗಳ ಹಾನಿಯನ್ನು ತಪ್ಪಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರುಣಮಿತ್ರ ಸಹಾಯವಾಣಿ ನಂಬರ್ ಕರೆ ಮಾಡಿ

ವರುಣಮಿತ್ರ ಸಹಾಯವಾಣಿ ನಂಬರ್ ಗೆ ಕರೆ ಮಾಡಿದರೆ ಸಾಕು, ನಿಮ್ಮೂರಲ್ಲಿ ಮಳೆಯಾಗುತ್ತೋ ಇಲ್ಲವೋ ಹಾಗೂ  ಗಾಳಿ ಯಾವ ಪ್ರಮಾಣದಲ್ಲಿ ಬೀಸುತ್ತದೆ. ಯಾವ ದಿಕ್ಕಿನಿಂದ ಯಾವ ದಿಕ್ಕಿನ ಕಡೆ ಬೀಸುತ್ತದೆ ಹವಾಮಾನ ವರದಿಯನ್ನು ತಕ್ಷಣ ರೈತರಿಗೆ ನೀಡಲಾಗುವುದು.ಈ ಉಚಿತ ಸಹಾಯವಾಣಿಯ ಸಹಾಯವನ್ನು ರಾಜ್ಯದಲ್ಲಿ ಬಹುತೇಕ ಎಲ್ಲಾ ಸಾರ್ವಜನಿಕರು ಪಡೆಯುತ್ತಿದ್ದಾರೆ.

Leave a Comment