sewing machine Free distribution : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇಚ್ಛೆಯುಳ್ಳ ಮರಾಠ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್) ವರೆಗೆ ಬರುವ ಮರಾಠ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯೋಮಿತಿ 18 ರಂದ 55 ವರ್ಷದೊಳಗಿರಬೇಕು.
ಇದನ್ನೂ ಓದಿ : ರೈತರಿಗೆ 20 ಸಾವಿರ ರೂಪಾಯಿಯ ತರಕಾರಿ ಬೀಜ ಕೀಟ್ ವಿತರಣೆಗೆ ಅರ್ಜಿ ಆಹ್ವಾನ
sewing machine Free distribution ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮುಖಾಂತರ, ಗ್ರಾಮ ಒನ್, ಕಲಬುರಗಿ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ 2025ರ ಡಿಸೆಂಬರ್ 6ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 8867537799/ ದೂ.ಸಂ:080-29903994 (ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಲು), ನಿಗಮದ
https://kmcdc.karnataka.gov.in
ವೆಬ್ಸೈಟ್ನ್ನು ಅಥವಾ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ/ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278635ಗೆ ಸಂಪರ್ಕಿಸಲು ಕೋರಲಾಗಿದೆ.
ನವೆಂಬರ್ 17 ರಂದು ಮಿನಿ ಉದ್ಯೋಗ ಮೇಳ
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ನವೆಂಬರ್ 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಡಾನ್ ಬಾಸ್ಕೊಟೆಕ್ದಲ್ಲಿ ಡೆಟಾ ಎಂಟ್ರಿ ಟ್ರೈನರ್ ಹುದ್ದೆಗೆ ಬಿ.ಎಸ್ಸಿ, ಬಿ.ಕಾಂ, ಬಿಸಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 23 ರಿಂದ 40 ವರ್ಷದೊಳಗಿರಬೇಕು.
ಲಾಹೋಟಿ ಮೋಟಾರ್ಸ್ದಲ್ಲಿ ರಿಲೇಷನ್ಶಿಪ್ ಮ್ಯಾನೇಜರ್, ಕಮರ್ಶಿಯಲ್ ಎಕ್ಸಿಕ್ಯೂಟಿವ್, ರಿಸೆಪ್ನಿಸ್ಟ/ ಶೋರೂಂ ಹಾಸ್ಟೆಸ್, ಇನ್ಸೂರೆನ್ಸ್ ಎಕ್ಸಿಕ್ಯೂಟಿವ್, ಬ್ಯಾಕ್ ಎಂಡ್ ಟೆಲಿಕಾಲರ್ ಹುದ್ದೆಗಳಿಗೆ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಬಿ.ಎಂ, ಎಂ.ಕಾಮ್, ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು. ಟ್ರೂ ವ್ಯಾಲಿವ್ ಇವ್ಯಾಲಿವೆಟರ್ ಹುದ್ದೆಗೆ ಐಟಿಐ, ಡಿಪ್ಲೊಮಾ, ಬಿಇ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.
ಕೊಟಕ್ ಲೈಫ್ ಇನ್ಸೂರೆನ್ಸ್ದಲ್ಲಿ ಏಜೆನ್ಸಿ ಪಾರ್ಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 55 ರಿಂದ 65 ವರ್ಷದೊಳಗಿರಬೇಕು.
ಇಂಡೈಬಸ್ ಡ್ರೀಮ್ಸ್ ಎಕ್ಸ್ಪ್ಲೋರ್ಡ್ದಲ್ಲಿ ಡ್ರೈವರ್ ಹುದ್ದೆಗೆ ಎಸ್.ಎಸ್.ಎಲ್.ಸಿ. ಮೇಲ್ಟಟ್ಟು ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 28 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-274846 ಅಥವಾ (ಮೊಬೈಲ್ ಸಂಖ್ಯೆ 9900872002) ಗೆ ಸಂಪರ್ಕಿಸಲು ಕೋರಲಾಗಿದೆ.





