ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ ಪದಗ್ರಹಣ

Written by By: janajagran

Updated on:

Agriculture minister ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟಕ್ಕೆ ಕರ್ನಾಟಕಕ್ಕೆ ಆಯ್ಕೆಯಾದ ನಾಲ್ವರ ಪೈಕಿ ಸಂಸದೆ ಶೋಭಾ ಕರಂದ್ಲಾಜೆಯವರು ಕೃಷಿ ಸಚಿವೆಯಾಗಿ (Agriculture minister) ಗುರುವಾರ ದೆಹಲಿಯ ಕೃಷಿ ಭವನದಲ್ಲಿ ಪದಗ್ರಹಣ ಮಾಡಿದರು.

ರೈತರ ಸಂಕೇತವಾದ ಹಸಿರು ಶಾಲು ಧರಿಸಿ ಸಚಿವೆ ಶೋಭಾ ಕರಂದ್ಲಾಜೆಯವರು ಸಚಿವರ ಕಾರ್ಯಾಭಾರ ವಹಿಸಿಕೊಂಡಿದ್ದು, ಆ ಮೂಲಕ ನೂತನ ಸಚಿವರ ಅಧಿಕಾರ ಚಾಲನೆಗೆ ಹಸಿರು ನಿಶಾನೆ ಸಿಕ್ಕಂತಾಗಿದೆ.

Agriculture minister ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶೋಭಾ ಕರಂದ್ಲಾಜೆಯವರು ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವ ಸಂಪುಟ ಸೇರಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2004 ರಲ್ಲಿ ವಿಧಾನ ಪರಿಷತ್ತಿಗೆ, 2008 ರಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾಗಿದ್ದರು. 2014 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮಹಿಳಾ ಸಬಲೀಕರಣ ಸಮಿತಿ, ರಕ್ಷಣಾ ಸ್ಥಾಯಿ ಸಮಿತಿ, ಕೃಷಿ ಸಚಿವಾಲಯ ಸಲಹಾ ಸಮಿತಿ ಸದಸ್ಯೆಯಾಗಿದ್ದರು.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ಎರಡು ಸಲ ಲೋಕಸಭೆಗೆ ಆಯ್ಕೆಯಾದ ಶೋಭಾ ಕರಂದ್ಲಾಜೆಯವರು ಈ ಹಿಂದೆ ರಾಜ್ಯ ಸರ್ಕಾರದಲ್ಲಿ ಸಚಿವೆಯಾಗಿ ಅನುಭವಹೊಂದಿದ್ದರಿಂದ  ಇದೀಗ ಕೇಂದ್ರ ನಾಯಕತ್ವ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಅವರಿಗೆ ಆವಕಾಶ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಗೆ 2019 ರ ತಿಂಗಳಲ್ಲಿ ರಚನೆಯಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಕೋವಿಡ್ -19 ಮಾರ್ಗಸೂಚಿಗೆ ಅನುಗುಣವಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಒಟ್ಟು 43 ಜನ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಶೋಭಾ ಕರಂದ್ಲಾಜೆಯವರು ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೇದಿಯವರು ನನಗೆ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ. ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ನನಗೆ ನೀಡಲಾಗಿದೆ. ರೈತನ ನೋವು ನನಗೆ ಗೊತ್ತಿದೆ. ಸರ್ಕಾರದ ಲಾಭಗಳು, ಯೋಜನೆಗಳನ್ನು ರೈತರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆಯವರು ಕೃಷಿಗೆ ಸಂಬಂಧಿಸಿದ ಯೋಜನೆಗಳು ರೈತರಿಗಾಗುವ ಪ್ರಯೋಜನಗಳ ಬಗ್ಗೆ ರೈತರಿಗೆ ಮುಟ್ಟಿಸುವುದಕ್ಕಾಗಿ ಅಧಿಕಾರಿಗಳು ಪ್ರಯತ್ನಿಸಬೇಕೆಂದು ಸೂಚಿಸಬೇಕು. ಅಂದಾಗ ಮಾತ್ರ ಕೇಂದ್ರ ಸರ್ಕಾರದ ಯೋಜನೆಗಳು ರೈತರಿಗೆ ತಲುಪಲಿದೆ.ಇಲ್ಲದಿದ್ದರೆ ಅವು ಕಾಗದದಲ್ಲೇ ಉಳಿಯುತ್ತವೆ. ಹಾಗಾಗಿ ಅಧಿಕಾರ ವಹಿಸಿದ ಮಾತ್ರಕ್ಕೆ ಸಾಲದು, ಹೆಚ್ಚಿನ ಪ್ರಮಾಣದಲ್ಲಿ ರಾಜ್ಯದ ರೈತರಿಗೆ ತಮ್ಮ ಸೇವೆ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಈ ಹುದ್ದೆ ಸಿಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಅವರು ರೈತ ಕಲ್ಯಾಣ ಸಚಿವೆಯಾಗಿ ಅಧಿಕಾರವಹಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ..

 

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

Leave a Comment