ಪೊಲೀಸ್, ಆರೋಗ್ಯ, ಅಗ್ನಿಶಾಮಕ, ಸೇರಿದಂತೆ ಇನ್ನಿತರ ತುರ್ತು ಸೇವೆಗಳಿಗೆ ದೇಶಕ್ಕೆ ಒಂದೇ ನಂಬರ್ ( All emergency helpline number ) ಜಾರಿಗೆ ಬಂದಿದೆ.
ಹೌದು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು ಒಂದೇ ಭಾರತ ಒಂದೇ ತುರ್ತು ಕರೆ ಪರಿಕಲ್ಪನೆಯಡಿಯಲ್ಲಿ ದೇಶಾದ್ಯಂತ ಒಂದೇ 112 ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ.
ಹಿಂದೆ ಪೊಲೀಸ್, ಅಗ್ನಿಶಾಮಕ, ಆಂಬ್ಯುಲೆನ್ಸ್ ಗೆ ಪ್ರತ್ಯೇಕ ತುರ್ತು ಸೇವಾ ನಂಬರ್ ಗಳಿದ್ದವು. ಅದೀಗ ಒಂದೇ ನಂಬರ್ ನಡಿ ಬಂದಿದ್ದರಿಂದ ಸಾರ್ವಜನಿಕರಿಗೆ ಯಾವುದಕ್ಕೆ ಕರೆ ಮಾಡಬೇಕೆಂಬ ಗೊಂದಲ ಬಗೆಹರಿದಂತಾಗಿದೆ.
All emergency helpline number ತುರ್ತು ಸಂದರ್ಭದಲ್ಲಿ ಪೊಲೀಸ್, ಆಂಬ್ಯಲೆನ್ಸ್, ಅಗ್ನಿಶಾಮಕದಳ ಸೇರಿದಂತೆ ಯಾರಿಗೆ ಫೋನ್ ಮಾಡಬೇಕು ಎಂಬ ಗೊಂದಲವಾಗುವುದು ಬೇಡ ಇನ್ನೂ ಮುಂದೆ ಯಾವುದೇ ತುರ್ತು ಸಂದರ್ಭವಾದರೂ ಸರಿ 112 ಸಹಾಯವಾಣಿಗೆ ಕರೆ ಮಾಡಿ ಸಾಕು. ಎಲ್ಲಾ ರೀತಿಯ ನೆರವುಗಳು ತಕ್ಷಣವೇ ನಿಮ್ಮನ್ನು ತಲುಪುತ್ತವೆ.
ಇದನ್ನೂ ಓದಿ Vanshavali (ವಂಶಾವಳಿ) ಪ್ರಮಾಣ ಪತ್ರಕ್ಕೆ ಇಲ್ಲಿ ಅರ್ಜಿ ಸಲ್ಲಿಸಿ
ಹಿಂದೆ ಪೊಲೀಸ್ ಇಲಾಖೆ ಸಹಾಯವಾಣಿಗೆ 100, ಅಗ್ನಿ ಶಾಮಕ ದಳಕ್ಕೆ 101, ಆಂಬ್ಯಲೆನ್ಸ್ಗೆ 102, ಆರೋಗ್ಯ ಕವಚ ಆಂಬ್ಯುಲೆನ್ಸ್ಗೆ 108 ಸೇರಿದಂತೆ ಬೇರೆ ಬೇರೆ ಸಂಖ್ಯೆಗಳಿಗೆ ಕರೆ ಮಾಡಬೇಕಿತ್ತು. ಬೆಂಕಿ ಅವಘಡ ಉಂಟಾದಾಗ, ಅಥವಾ ಅಪಘಾತಗಳಾದಾಗ ಗಡಿಬಿಡಿಯಾಗಿ ಆತಂಕದಲ್ಲಿ ಕೈಕಾಲು ಆಡದೆ ನಿರ್ದಿಷ್ಟವಾದ ನಂಬರ್ಗಳು ನೆನಪಾಗದೆ ಸಂತ್ರಸ್ಥರು ಪರದಾಡುತ್ತಿದ್ದರು. ಈ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ ಈಗ ಒಂದೇ ಸಹಾಯವಾಣಿ ನಂಬರ್ ತರಲಾಗಿದೆ.
ಇದಕ್ಕಾಗಿ ಬೆಂಗಳೂರಿನಲ್ಲಿ ಕಮಾಂಡಿಗ್ ಸೆಂಟರ್ ಸ್ಥಾಪಿಸಲಾಗಿದೆ. ಈ ಸೆಂಟರ್ ಎಲ್ಲಾ ಜಿಲ್ಲೆಗಳ ಮೂಲೆ ಮೂಲೆಗಳಿಂದ ಬರುವ ಕರೆಗಳ ಮೇಲೆ ನಿಗಾ ವಹಿಸಲಿದೆ. ಕರೆಗಳಿಗೆ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲೇ ನೆರವಿನ ತಂಡಗಳು ಸ್ಪಂದಿಸಲಿವೆ.
ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂಪಾಯಿ ಹಣ- ಇಂದೇ ಅರ್ಜಿ ಸಲ್ಲಿಸಿ ಪಡೆಯಿರಿ
ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2023ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರನರಿ, ಮೆಡಿಶನ್ ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶವಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.