ಅಂಗನವಾಡಿ ನೌಕರರಿಗೆ Smartphone – ಇಲ್ಲಿದೆ ಮಾಹಿತಿ

Written by Ramlinganna

Published on:

Smartphone for Anganwadi employees: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀಗೆ ಪ್ರಸಕ್ತ ಸಾಲಿನಲ್ಲಿ 28,608 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ.

ಅಂಗನವಾಡಿ ನೌಕರರ ಬಹುದಿನದ ಬೇಡಿಕೆಯಾದ ಸ್ಮಾರ್ಟ್ ಫೋನ್, ಗ್ರ್ಯಾಚುಟಿಗೆ ಒಪ್ಪಿಗೆ ಸಿಕ್ಕಿದೆ. ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನವನ್ನು 800 ರಿಂದ 12000 ರೂಪಾಯಿಹಾಗೂ ದೇವದಾಸಿಯರ ಮಾಸಾಶನವನ್ನು 1500 ರಿಂದ 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆ

ಎಪಿಎಲ್, ಬಿಪಿಎಲ್, ಎಎಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ತಲಾ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ರಾಜ್ಯದಲ್ಲಿ 1.33 ಕೋಟಿ ಅರ್ಹರರನ್ನು ಗುರುತಿಸಲಾಗಿದ್ದು, 1.17 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಈವರೆಗೂ 11,726 ಕೋಟಿ ರೂಪಾಯಿ ಫಲಾನುಭವಿಗಳಿಗೆ ಸಂದಾಯವಾಗಿದೆ. ಈ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿಡಲಾಗಿದೆ.

Smartphone for Anganwadi employees  ಗ್ರಾಚ್ಯುಟಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತು ನೀಡಲಾಗುವುದು. 2000 ಕಾರ್ಯಕರ್ತೆಯರು, ಸಹಾಯಕಿಯರಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲು 10 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.

ಇದನ್ನೂ ಓದಿAnnabhagya DBT Status: ಮೊಬೈಲ್ ನಲ್ಲೇ ಚೆಕ್ ಮಾಡಿ

ಕಾರ್ಯಕರ್ತೆಯರಿಗೆ 90 ಕೋಟಿ ರೂಪಾಯಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು. ಒಂದು  ಸಾವಿರ ಅಂಗನವಾಡಿಗಳಿಗೆ ಸ್ವಂತಕಟ್ಟಡಕ್ಕೆ 200 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ವೈದ್ಯಕೀಯ ನೆರವು

ಸೆರಬ್ರಲ್ ಪಾಲಿಸಿ, ಮಸ್ಯುಲರ್ ಡೈಸ್ಪ್ರೋಪಿ, ಪಾರ್ಕಿನ್ಸಸ್ ಮತ್ತು ಮಲ್ಟಿಪಲ್ ಸೆಲೆರೋಸಿಸ್ ಕಾಯಿಲೆಗಳಿಂದ ಬಳಲುತ್ತಿರುವವರ ಆರೈಕೆದಾರರಿಗೆ ಪ್ರತಿ ತಿಂಗಳು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ತಾಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ 2 ಕ್ಯಾಟರಾಕ್ಟ್ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 2 ಕೋಟಿ ರೂಪಾಯಿ ವೆಚ್ಚದಲ್ಲಿ 4 ಅನುಪಾಲನಾ ಗೃಹ ಪ್ರಾರಂಭಿಸಲಾಗುವುದು.

ಮಾಸಾಶನ ಹೆಚ್ಚಳ

1500 ವಿಶೇಷಚೇತನರಿಗೆ ಬಾಕಿ ಇರುವ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಪ್ರಸಕ್ತ ಸಾಲಿನಲ್ಲಿ  ವಿತರಿಸಲಾಗುವುದು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರಿಂದ 1200 ರೂಪಾಯಿಗೆ ಹೆಚ್ಚಿಸಲಾಗುವುದು. ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಸೌಲಭ್ಯ ಕಲ್ಪಿಸಲಾಗುವುದು. ಒಟ್ಟಾರೆ ಮಹಿಳಾ ಯೋಜನೆಗಳಿಗೆ 86,423 ಕೋಟಿ ಮತ್ತು ಮಕ್ಕಳ ಯೋಜನೆಗಳಿಗೆ 54,617 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯ 6 ನೇ ಕಂತಿನ ಹಣ ಜಮೆ: ಸ್ಟೇಟಸ್ ಇಲ್ಲೇ ಚೆಕ್ ಮಾಡಿ

Gruha lakshmi scheme 6 ನೇ ಕಂತಿನ ಹಣ ಬಿಡುಗಡೆಯಾಗಿದೆ. ಯಾರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ್ದಾರೋ ಆ ಮಹಿಳೆಯರು ತಮ್ಮಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಬಹುದು.

ಹೌದು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದು ಸಂತಸದ ಸುದ್ದಿಯಾಗಿದೆ. ಕಳೆದ ತಿಂಗಳು 5ನೇ ಕಂತಿನ ಹಣ ಜಮೆಯಾಯಿತು.ಈಗ ಕಳೆದ ತಿಂಗಳು ಯಾರು ಯಾರಿಗೆ ಹಣ ಜಮೆಯಾಗಿಲ್ಲವೋ ಅವರಿಗೂ ಸಹ ಈಗ 5 ಮತ್ತು 6ನೇ ಕಂತಿನ ಹಣ ಜಮೆಯಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿರಲಿಲ್ಲ. ಕೊನೆಗೂ ರಾಜ್ಯದ ಕೆಲವು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ 6ನೇ ಕಂತಿನ ಹಣ ಜಮೆಯಾಯಿತು.

ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು.

Leave a Comment