ಪ್ರಸಕ್ತ ವರ್ಷದ ನೈರುತ್ಯ ಮುಂಗಾರು ಗುರುವಾರ ಕೇರಳಕ್ಕೆ (Southwest monsoon hits Kerala)  ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈ ಮಾಹಿತಿ ಮಾಡಿದೆ. ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ಮೈಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 6 ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತಿ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಜೂನ್ 4 ರಂದು ರಾಜ್ಯದ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ಗದಗ, ಚಿಕ್ಕಮಗಳೂರು, ಕೋಲಾರ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಸಿಡಿಲು ಬೀಳುವ ಮೊದಲೇ ಮುನ್ಸೂಚನೆ ನೀಡುತ್ತದೆ ದಾಮಿನಿ ಆ್ಯಪ್‌ (Damini App): ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಡಿಕೆಯಂತೆ ಜೂನ್ 1 ರಿಂದ ಮುಂಗಾರು ಮಾರುತಗಳು ಕೇರಳ ಪ್ರವೇಶಿಸುತ್ತವೆ. ಈ ವರ್ಷ ಎರಡು ದಿನ ತಡವಾದರೂ ಮಂಗಾರು  ಮಾರುತಗಳಿಂದಾಗಿಯೇ ಜೂನ್ ತಿಂಗಳಿಂದ ಸೆಪ್ಟೆಂಬರ್ ತಿಂಗಳವರೆಗೆ ದೇಶದ ಬಹುತೇಕ ಕಡೆ ಮಳೆಯಾಗುತ್ತದೆ. ದೇಶದಲ್ಲಿ ವಾಡಿಕೆ ಮಳೆಯ ಶೇ. 70 ರಷ್ಟು ಮಳೆ ಜೂನ್-ಸೆಪ್ಟೆಂಬರ್ ನಡುವಿನ ಮುಂಗಾರು ಋತುವಿನಲ್ಲಿ ಸುರಿಯುತ್ತದೆ. ಈ ವರ್ಷ ವಾಡಿಕೆ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *