ತೊಗರಿ, ಹೆಸರು, ಸೋಯಾ, ಶೇಂಗಾ ಹಾಗೂ ಅವರೆ ಬೆಳೆಗಳ ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ 19 ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳ ಮಿನಿಕಿಟ್ ಗಳನ್ನು ರೈತರಿಗೆ ಉಚಿತವಾಗಿ (Sowing seeds mini kit  free distribution) ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಅವರು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ (ಎನ್.ಎಫ್.ಎಸ್.ಎಂ) ಯೋಜನೆಯಡಿಯಲ್ಲಿ ರೈತರಿರೆಗ ಉಚಿತವಾಗಿ 12.60 ಕೋಟಿ ರೂಪಾಯಿ ಮೌಲ್ಯದ ಬಿತ್ತನೆ ಬೀಜಗಳ ಮಿನಿ ಕಿಟ್ ಗಳನ್ನು ನೀಡಲಾಗುತ್ತಿದೆ ಎಂದರು.

ಎನ್ಎಫ್ಎಸ್ಎಂ ಯೋಜನಯಡಿ 4 ಕೆಜಿ ತೊಗರಿಯನ್ನು 16 ಜಿಲ್ಲೆಗಳಲ್ಲಿ, 4 ಕೆಜಿ ಹೆಸರು 4 ನಾಲ್ಕು ಜಿಲ್ಲೆಗಳಲ್ಲಿ, 20 ಕೆಜಿಯಂತೆ ಸೋಯಾ 8 ಜಿಲ್ಲೆಗಳಲ್ಲಿ ಹಾಗೂ 8 ಕೆಜಿಯಂತೆ 2 ಜಿಲ್ಲೆಗಳಿಗೆ ಸೋಯಾ ಅವರೆ ಮಿನಿಕಿಟ್ ಗಳ್ನು ವಿತರಿಸಲಾಗುತ್ತಿದೆ. ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸುವುದಕ್ಕಾಗಿ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ 2020-21ನೇ ಸಾಲಿನಲ್ಲಿ 153.08 ಲಕ್ಷ ಟನ್ ಆಹಾರಧಾನ್ಯ ಉತ್ಪಾದನೆಯಾಗಿದ್ದು, ದೇಶದ ಸರಾಸರಿಗೆ ಹೋಲಿಸಿದರೆ ಶೇ. 2 ಹಾಗೂ ರಾಜ್ಯ ಸರಾಸರಿಗೆ ಹೋಲಿಸಿದೆ ಶೇ. 10 ಹೆಚ್ಚಿನ ಉತ್ಪಾದನೆಯಾಗಿದೆ. ಕೋವಿಡ್ ಸಂಕಷ್ಟದಲ್ಲಿಯೂ ಕಳೆದ ಬಾರಿ ದಾಖಲೆಯ ಪ್ರಮಾಣದಲ್ಲಿ ಆಹಾರಧಾನ್ಯಗಳ ಉತ್ಪಾದನೆಯಾಗಿರುವುದನ್ನು ನೋಡಿದರೆ ಕೃಷಿಯತ್ತ ಜನರ ಒಲವು ಹಾಗೂ ಕೋವಿಡ್ ಅವಧಿಯಲ್ಲಿಯೂ ರೈತರ ಶ್ರಮಕ್ಕೆ ಇದು ಸಾಕ್ಷಿಯಾಗಿದೆ. ಎಂದದರು.

ಬಿತ್ತನೆ ಗುರಿ:

ಮುಂಗಾರು ಹಂಗಾಮಿಗೆ 77 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಿದ್ದು, ಇಲ್ಲಿಯವರೆಗೆ 11.73 ಲಕ್ಷ ಹೆಕ್ಟೇರ್ ಬಿತ್ತನೆ ಅಂದರೆ ಶೇ.15.23 ಬಿತ್ತನೆಯಾಗಿದೆ. ಈ ಬಾರಿ 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆಯಿದ್ದು, 7.74 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯತೆಯಿದ್ದು, ಇಲ್ಲಿಯವರೆಗೆ 1.79 ಲಕ್ಷ ಕ್ವಿಂಟಾಲ್ ವಿತರಣೆಯಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ 1.15 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನಿದೆ ಎಂದರು.

ರಸಗೊಬ್ಬರ ದಾಸ್ತಾನು:

ಏಪ್ರೀಲ್ ನಿಂದ ಜೂನ್ ವರೆಗೆ ಡಿಎಪಿ, ಎಂಒಪಿ, ಕಾಂಪ್ಲೆಕ್ಸ್ ಹಾಗೂ ಯೂರಿಯಾ ಸೇರಿ 12,77,815 ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆಯಿದ್ದು, ಇದರಲ್ಲಿ 8,02,504 ಮೆಟ್ರಿಕ್ ಟನ್ ಸರಬರಾಜು ಆಗಿದೆ ಎಂದರು.

2021-22ನೇ ಸಾಲಿನಲ್ಲಿ 55,07,256 ರೈತರಿಗೆ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 7017 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗಿದೆ. ರಾಜ್ಯ ಸರ್ಕಾರ 47,98,095 ಫಲಾನುಭವಿಗಳಿಗೆ 2849 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ ಎಂದರು.

ಇದನ್ನೂ ಓದಿ: ಇಳುವರಿ ಹೆಚ್ಚಿಸಲು ಬೆಳೆಗಳಿಗೆ ಅಮೃತವಾಗಲಿದೆ ಜೀವಾಮೃತ (Jeevamrutha) ಅದು ಹೇಗೆ ಅಂದುಕೊಂಡಿದ್ದೀರಾ…. ಇಲ್ಲಿದೆ ಮಾಹಿತಿ

ಬೆಳೆ ಸಮೀಕ್ಷೆ : ಬೆಳೆ ಸಮೀಕ್ಷೆ ಈ ವರ್ಷ ಮುಂಗಾರು ಹಂಗಾಮಿನಲ್ಲಿ 2.10 ಕೋಟಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ರೈತರಿಂದಲೇ ಅವರ ಜಮೀನಿನ ಬೆಳೆ ಮಾಹಿತಿಯನ್ನು ಆ್ಯಪ್ ಮೂಲಕ ಅಪ್​ಲೋಡ್ ಮಾಡಿಸುವ ಉದ್ದೇಶವನ್ನ ಕೃಷಿ ಇಲಾಖೆ ಹೊಂದಿದೆ ಎಂದರು.

Leave a Reply

Your email address will not be published. Required fields are marked *