ಕೇಂದ್ರ ಪೊಲೀಸ್ ಪಡೆಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by By: janajagran

Updated on:

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ, ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಎಸ್‌ಎಸ್‌ಬಿ, ಎಸ್‌ಎಸ್‌ಎಫ್‌, ಎನ್‌ಐಎ, ಐಟಿಬಿಪಿ ಪಡೆಗಳಲ್ಲಿ ಖಾಲಿಯಿರುವ (SSC constable GD recruitment) 25271 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇತ್ತೀಚೆಗೆ ಜೆನೆರಲ್ ಡ್ಯೂಟಿ ಕಾನ್ಸ್‌ಟೇಬಲ್‌ಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪಾಸಾದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಗಡಿ ಭದ್ರತಾ ಪಡೆಯಲ್ಲಿ-7545 ಹುದ್ದೆಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 8464, ಸಶಸ್ತ್ರ ಸೀಮಾ ಬಲ್ ನಲ್ಲಿ 3806, ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ 1431 ಹುದ್ದೆಗಳು, ಅಸ್ಸಾ ರೈಫಲ್ಸ್ ನಲ್ಲಿ 3785 ಸೇರಿದಂತೆ ಒಟ್ಟು 25271 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ 23 ವರ್ಷ.ತುಂಬಿರಬೇಕು.

ವಯೋಮಿತಿ ಸಡಿಲಿಕೆ ನಿಯಮಗಳು ಆಯಾ ವರ್ಗಕ್ಕೆ ಮೀಸಲಾತಿಯಿರಲಿದೆ. ಆನ್ಲೈನ್ ಮೂಲಕ ಜುಲೈ 17 ರಿಂದ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-08-2021 ಆಗಿದೆ.
ಆನ್‌ಲೈನ್‌ ಮೂಲಕ ಅಪ್ಲಿಕೇಶನ್‌ ಶುಲ್ಕ ಪಾವತಿಸಲು ಕೊನೆ ದಿನಾಂಕ : 02-09-2021 ಆಗಿದ್ದು,  ಚಲನ್‌ ಮೂಲಕ ಅಪ್ಲಿಕೇಶನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ  04-09-2021 ಆಗಿದೆ.

ಶುಲ್ಕ ವಿವರ:  ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿ ಆಗಿದೆ. ST / SC / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್‌, ಡೆಬಿಟ್‌ ಕಾರ್ಡ್‌ ಮೂಲಕ ಪಾವತಿಸಬಹುದು.

ವೇತನ ಶ್ರೇಣಿ- 21700-69100 ರೂಪಾಯಿ ಆಗಿದೆ. ಹೆಚ್ಚಿನ ಮಾಹಿತಿಯನ್ನು ವೆಬ್ಸೈಟ್   https://ssc.nic.in/ ಮೇಲೆ ಕ್ಲಿಕ್ ಮಾಡಿ ಪಡೆಯಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಯಸುವವರು ಈ ಲಿಂಕ್  https://ssc.nic.in/ ಮೇಲೆ ಕ್ಲಿಕ್ ಮಾಡಬೇಕು.

Leave a comment