ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Written by Ramlinganna

Updated on:

SSLC Exam date announced ಕೋವಿಡ್ ಹಿನ್ನೆಲೆಯಲ್ಲಿ   ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, (SSLC Exam date announced) ಈ ಪರೀಕ್ಷೆಗಳು ಜುಲೈ 5 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ತಿಂಗಳು ಫೆಬ್ರವರಿಯಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದರು.

SSLC Exam date announced ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಜೂನ್ 21 ರಂದು  ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.

ಇದನ್ನೂ ಓದಿ ಗ್ರಾಮ ಪಂಚಾಯತ್ ಮಾಹಿತಿ whatsapp ನಲ್ಲಿ ಹೀಗೆ ಪಡೆಯಿರಿ

ಜೂನ್  ರಂದು 24-ಗಣಿತ,

ಜೂನ್ 28 ರಂದು -ವಿಜ್ಞಾನ

ಜೂನ್ 30 ರಂದು -ತೃತೀಯ ಭಾಷೆಗಳಾದ ಹಿಂದಿ,ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು

ಜುಲೈ 2 ರಂದು  ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ

ಜುಲೈ 5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದೇ ಏಪ್ರೀಲ್ ಎರಡರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪರೀಕ್ಷಾ ಪೂರ್ವ ಸಿದ್ದತೆಗಳನ್ನು ಸ್ವತಃ ಪರಿಶೀಲಿಸುವುದಾಗಿ ಹೇಳಿದರು.

ಗ್ರಾಮಾಂತರ ಪ್ರದೇಶಗಳಲ್ಲಿನ ಸರ್ಕಾರಿ‌ ಶಾಲಾ ಮಕ್ಕಳಿಗೆ ಮಧ್ಯಾಹ್ನದ‌ ಉಪಹಾರ ಅತ್ಯಂತ ಅವಶ್ಯವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಸಹಮತಿಗಾಗಿ ಕೋರಲಾಗಿದ್ದು ಅನುಮತಿ ದೊರೆತ ಕೂಡಲೇ‌ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ಎಸ್ಎಸ್ಎಲ್ಸಿ ಪಿಯುಸಿ ಪದವಿ ಐಟಿಐ ಪಾಸಾದವರಿಗೆ ಜಾಬ್

ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ಪಾಸಾದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಯಾವುದೇ ಪರೀಕ್ಷೆಯಲ್ಲಿದೆ ನೇರವಾಗಿ ಕಚೇರಿಗೆ ಬಂದು ತಮ್ಮ ದಾಖಲೆಗಳನ್ನು ಸಲ್ಲಿಸಿ ನೇರ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬಹುದು.

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆಬ್ರವರಿ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಜೋಶ್ ಮ್ಯಾನೇಜ್ಮೆಂಟ್ ಆ್ಯಂಡ್ ಸೊಲ್ಯೂಶನ್ ದಲ್ಲಿ ಬ್ಯಾಂಕಿಂಗ್ ಪ್ರೋಸೆಸ್ ಹುದ್ದೆಗೆ ಎಸ್.ಎಸ್.ಎಲ್.ಸಿ , ಪಿಯುಸಿ, ಯಾವುದೇ ಪದವಿ ಹಾಗೂ ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 45 ವಯೋಮಾನದೊಳಗಿರಬೇಕು. ಮ್ಯಾನುಫ್ಯಕ್ಟರಿಂಗ್ ಫ್ಲ್ಯಾಂಟ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ  18 ರಿಂದ 25 ವಯೋಮಾನದೊಳಗಿರಬೇಕು.

 

Leave a Comment