ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, (SSLC Exam date announced) ಈ ಪರೀಕ್ಷೆಗಳು ಜುಲೈ 5 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ತಿಂಗಳು ಫೆಬ್ರವರಿಯಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದರು.
ಜೂನ್ 21 ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.
ಜೂನ್ ರಂದು 24-ಗಣಿತ,
ಜೂನ್ 28 ರಂದು -ವಿಜ್ಞಾನ
ಜೂನ್ 30 ರಂದು -ತೃತೀಯ ಭಾಷೆಗಳಾದ ಹಿಂದಿ,ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
ಜುಲೈ 2 ರಂದು ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ
ಜುಲೈ 5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇದೇ ಏಪ್ರೀಲ್ ಎರಡರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪರೀಕ್ಷಾ ಪೂರ್ವ ಸಿದ್ದತೆಗಳನ್ನು ಸ್ವತಃ ಪರಿಶೀಲಿಸುವುದಾಗಿ ಹೇಳಿದರು.
ಗ್ರಾಮಾಂತರ ಪ್ರದೇಶಗಳಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ಅತ್ಯಂತ ಅವಶ್ಯವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಸಹಮತಿಗಾಗಿ ಕೋರಲಾಗಿದ್ದು ಅನುಮತಿ ದೊರೆತ ಕೂಡಲೇ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.