SSLC Result ಪ್ರಕಟ- ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Updated on:

SSLC Result ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗಿಲ್ಲಿದೆ ಸಂತಸದ ಸುದ್ದಿ.  ಇಂದು ತಮ್ಮ ಪರೀಕ್ಷೆಯ ಫಲಿತಾಂಶವನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮೇ 8 ರಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುವುದು.

ಕರ್ನಾಟಕದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 30 ರಿಂದ ಏಪ್ರೀಲ್ 15 ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ ರಾಜ್ಯಾದ್ಯಂತ 8.69 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.  ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಫಲಿತಾಂಶವನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ವಿಷಯಗಳಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಲಿ ಪ್ರಕಟಣೆಯಲ್ಲಿ ತಿಳಿಸಿದೆ.

SSLC Result ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮೊಬೈಲ್ ನಲ್ಲೇ ನೋಡಿ

ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಂದು ತಮ್ಮ ರಿಸಲ್ಟ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ

https://karresults.nic.in/first_sl_kar.asp

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಎಕ್ಸಾಮಿನೇಶನ್ ರಿಸಲ್ಟ್ -2023 ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಕರ್ನಾಟಕಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಹಾಗೂ ದ್ವಿತೀಯ ಪೀಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶಪ್ರಕಟಣೆ ಎಂಬ ಎರಡು ಆಯ್ಕೆಗಳು ಕಾಣಿಸುತ್ತವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಕೆಳಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ರೋಲ್ ನಂಬರ್ ಅಥವಾ (Registration Number)  ಮತ್ತು ಜನ್ಮ ದಿನಾಂಕ ಬರೆಯಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹಾಗಾಗಿ ಎರಡು ದಿನ ಮೊದಲೇ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಚುನಾವಣೆಗೆ ಅಡ್ಡಿಯಾಗದಂತೆ ಮಕ್ಕಳಿಗೂ ತೊಂದರೆಯಾಗದಂತೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನು ಓದಿ ಈ ಲಿಸ್ಟ್ ನಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ

ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೀ ಉತ್ತರವನ್ನು ಬಿಡುಗಡೆ ಮಾಡಲಾಗಿತ್ತು. ಹೌದು, ಏಪ್ರೀಲ್ 17 ರಂದೇ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು.  ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಕೀ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಅನಮತಿಸಲಾಗಿತ್ತು. ಈಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.

ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಚಿಂತಿಸದೆ ಯಾವುದೇ ಕಾರಣಕ್ಕೆ ದೃತಿಗೆಡದೆ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು.ಅನುತ್ತೀರ್ಣರಾದವರು ಮತ್ತೇ ಪರೀಕ್ಷೆ ಬರೆಯುವ ಅವಕಾಶವಿದೆ. ಹಾಗಾಗಿ ಫೇಲ್ ಆದ ವಿದ್ಯಾರ್ಥಿಗಳು ತಮ್ಮ ಧೈರ್ಯ ಕಳೆದುಕೊಳ್ಳಬಾರದು.ಮತ್ತೇ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೇ ಪರೀಕ್ಷೆ ಬರೆದು ಪಾಸ್ ಆಗುವ ಅವಕಾಶವಿದೆ. ಇಂತಹ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ತೊಡಕಾಗುವುದಿಲ್ಲ.  ಎಲ್ಲಾ ವಿದ್ಯಾರ್ಥಿಗಳಂತೆ ಅವರು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಭ್ಯಾಸ ಮಾಡಬಹುದು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ವಿಜ್ಞಾನ, ಕಲೆ, ವಾಣಿಜ್ಯ ಸೇರಿದಂತೆ ಇನ್ನಿತರ ಆಯ್ಕೆಗಳು ಇರುತ್ತವೆ. ನಿಮಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಎಂಬುದನ್ನು ಗಮನಿಸಿ ಮುದಿನ ಶಿಕ್ಷಣಕ್ಕೆ ಹೋಗಬಹುದು. ಹಾಗಾಗಿ ಆತುರಪಡದೆ ನಿಮಗೆ ಯಾವ ಕ್ಷೇತ್ರದಲ್ಲಿ ಆಸಕ್ತಿಯಿದೆಯೋ ಆ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ. ವೃತ್ತಿಪರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ  ಕೋರ್ಸ್ಗಳು, ಕ್ರೀಡಾ ಶಿಕ್ಷಣ, ರಕ್ಷಣಾ ಸೇವೆಗಳು, ಉದ್ಯಮಶೀಲತೆ ಆಯ್ಕೆಗಳು ಇರುತ್ತದೆ.

Leave a Comment