SSLC Result ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

Written by Ramlinganna

Published on:

SSLC Result 2024 ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಮಕ್ಕಳು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ತಮ್ಮ ರಿಸಲ್ಟ್ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ರಾಜ್ಯದ ಎಂಟುವರೆ ಲಕ್ಷಕ್ಕೂ ಹೆಚ್ಚು ಮಕ್ಕಳು ನಿರೀಕ್ಷಿಸುತ್ತಿರುವ ಪ್ರಸಕ್ತಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ 1ರ ಫಲಿತಾಂಶವನ್ನು ಮೇ 9ರ ಗುರುವಾರ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಹಾಗೂ ಮಂಡಳಿಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಬಳಿಕ ಮಂಡಳಿಯ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳು ತಮ್ಮನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಕಿ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಲಾಗಿದೆ.

SSLC Result 2024 ಮೊಬೈಲ್ ನಲ್ಲೇ ರಿಸಲ್ಟ್ ನೋಡುವುದು ಹೇಗೆ?

ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ರಿಸಲ್ಟ್ ನೋಡಲು ಈ

https://karresults.nic.in

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕಾಣುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ನೋಂದಣಿ ಸಂಖ್ಯೆ ಹಾಕಬೇಕು. ನಿಮ್ಮ ಜನ್ಮ ದಿನಾಂಕ ಹಾಕಿ ಮೊಬೈಲ್ ನಲ್ಲೇ ಫಲಿತಾಂಶ ಚೆಕ್ ಮಾಡಬಹುದು.

ಎಸ್ಎಸ್ಎಲ್ಸಿ ಪರೀಕ್ಷೆ 1ಕ್ಕೆ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಇದನ್ನೂ ಓದಿ  LIC policy Status Mobile ನಲ್ಲಿ ಚೆಕ್ ಮಾಡಿ

ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲಲ್ಲೂ ಸಿಸಿ ಕ್ಯಾಮರಾ ಅಳವಡಿಸಿ ಬಹಳ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಫಲಿತಾಂಶ ಭಾರಿ ಪ್ರಮಾಣದಲ್ಲಿ ಕುಸಿಯಲಿದೆ ಎನ್ನಲಾಗುತ್ತಿದೆ.ಕಳೆದ ಕೆಲ ವರ್ಷಗಳಿಂದ ಫಲಿತಾಂಶ ನಿರಂತರವಾಗಿ ಏರಿಕೆಯಾಗುತ್ತಿದೆ.

2022-23ನೇ ಸಾಲಿನಲ್ಲಿ ಶೇ. 83.89 ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ ಈ ಬಾರಿ ಶೇ. 10 ರಷ್ಟು ಫಲಿತಾಂಶ ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಅದರಲ್ಲೂ ಫಲಿತಾಂಶ ಉತ್ತಮಗೊಳಿಸುವ ದೃಷ್ಟಿಯಿಂದ ಸರ್ಕಾರ ಕೆಲ ವರ್ಷಗಳಿಂದ ಗರಿಷ್ಠ 3 ವಿಷಯಗಳಲ್ಲಿ ಕೆಲ ಅಂಕಗಳಿಂದ ಫೇಲಾಗುವ ಹಂತದಲ್ಲಿರುವವರಿಗೆ ಗರಿಷ್ಠ ಶೇ. 10 ರಷ್ಟು ಗ್ರೇಸ್ ಅಂಕ ನೀಡಿ ಪಾಸು ಮಾಡುವ ಪರಿಪಾಠ ನಡೆಸಿಕೊಂಡು ಬಂದಿದೆ. ಪ್ರತಿ ವರ್ಷ ಈ ರೀತಿ 30 ರಿಂದ 40 ಸಾವಿರ ಮಕ್ಕಳು ಪಾಸಾಗುತ್ತಿದ್ದಾರೆ.

ಶಿಷ್ಯವೇತನವನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ?

ವಿದ್ಯಾರ್ಥಿಗಳು ಪಾಲಕರು ತಮ್ಮ ಮಕ್ಕಳಿಗೆ ಪ್ರತಿ ವರ್ಷ ಎಷ್ಟು ಸ್ಕಾಲರ್ ಶಿಪ್ ಬರುತ್ತಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ

http://ssp.karnataka.gov.in

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ಕಾಣುವ ಮೆಟ್ರಿಕ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಅರ್ಜಿ ಸ್ಥಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ಕ್ಲಿಕ್ ಮಾಡಬೇಕು.  ನಂತರ ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್ ನಲ್ಲಿರುವ SATS ID ಗುರುತಿನ ಸಂಖ್ಯೆ ನಮೂದಿಸಬೇಕು. ನಂತರ ಯಾವ ವರ್ಷದ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಂಡು ಹುಡುಕು ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮ್ಮ ಮಗುವಿಗೆ ಸ್ಕಾಲರ್ ಶಿಪ್ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ವಿದ್ಯಾರ್ಥಿಯು 2018 ರಿಂದ ಇಲ್ಲಿಯವರೆಗೆ ಯಾವ ವರ್ಷದಲ್ಲಿ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ನೋಡಬಹುದು.

ವಿದ್ಯಾರ್ಥಿ ವೇತನವನ್ನು ಆಧಾರ್ ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಯಾಗಲಿದೆ. ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಿದವರು ತಮಗೆ ಪ್ರತಿ ವರ್ಷ ಸ್ಕಾಲರಶಿಪ್ ಬರುತ್ತಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Leave a Comment