ಬೆಳೆ ವಿಮೆ ಅರ್ಜಿ ತಿರಸ್ಕೃತಗೊಂಡಿದ್ದರೆ ಆಕ್ಷೇಪಣೆ ಸಲ್ಲಿಸಿ

Written by Ramlinganna

Updated on:

Still have not you received crop insurance 2020-2021ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡ ರೈತರು ಆಕ್ಷೇಪಣೆ  ಸಲ್ಲಿಸಲು ಅರ್ಜಿ ಕರೆಯಲಾಗಿದೆ.

ಹೌದು, ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ಬೆಳೆ ವಿಮೆ ಜಮೆಯಾಗಿಲ್ಲದಿದ್ದರೆ ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದು.

ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹಣಸಗಿ ತಾಲೂಕಿನ ರೈತರ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿದಾಗ ಮುಂಗಾರು ಹಂಗಾಮಿನ 143 ಮತ್ತು ಹಿಂಗಾರು ಹಂಗಾಮಿನ ಹುಣಸಗಿ ತಾಲೂಕಿನ 1 ಪ್ರಸ್ತಾವನೆಯು ತಾಳೆಯಾಗದೆ ತಿರಸ್ಕೃತಗೊಂಡಿದೆ.

ತಿರಸ್ಕೃತವಾಗಿರುವ ರೈತರ ಪಟ್ಟಿಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ನೋಟಿಸ್ ಬೋರ್ಡ್ ಗಳಲ್ಲಿ ಪ್ರಕಟಿಸಲಾಗಿದೆ.

ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ಆಯಾ ಹೋಬಳಿ ಮಟ್ಟದದ ರೈತ ಸಂಪರ್ಕ ಕೇಂದ್ರಗಳಲ್ಲಿ ಮೇ 11 ರೊಳಗೆ ಆಕ್ಷೇಪಣೆ ಸಲ್ಲಿಸಬಹುದು.

ಆಕ್ಷೇಪಣೆ ಅರ್ಜಿಯೊಂದಿಗೆ 2021-22ನೇ ಸಾಲಿನಲ್ಲಿ ವಿಮೆಗೆ ನೋಂದಾಯಿಸಿದ ಬೆಳೆಯು ನಮೂದಾಗಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಅದರ ರಸೀದಿ, ನೋಂದಾಯಿತ ಬೆಳೆಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡಿರುವ ರಸೀದಿಗಳನ್ನು ಲಗತ್ತಿಸಬೇಕು.

Still have not you received crop insurance ಬೆಳೆ ವಿಮೆ ಮಾಡಿಸಿದ್ದರೆ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿಯ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈ ಸ್ಟೇಟಸ್ ಮೂಲಕ ತಮ್ಮ ಅರ್ಜಿ ಯಾವ ಹಂತದಲ್ಲಿದೆ? ಅರ್ಜಿ ಬೆಳೆ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ ಇಲ್ಲವೋ ಎಂಬಿತ್ಯಾದಿ ಮಾಹಿತಿಗಳನ್ನು ಚೆಕ್ ಮಾಡಬಹುದು.

ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/Premium/CheckStatusMain_aadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿದ ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ, ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ಓಪನ್ ಆಗದಿದ್ದರೆ ಕ್ಯಾಪ್ಚ್ಯಾ ಕೋಡ್ ಮತ್ತೊಮ್ಮೆ ಸರಿಯಾಗಿ ನೋಡಿ ಕ್ಯಾಪ್ಚ್ಯಾ ಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅರ್ಜಿ ನೀವು ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಿದ್ದೀರೋ ಅಥವಾ ಬ್ಯಾಂಕ್ ನಲ್ಲಿ ಕಡಿತಗೊಳಿಸಿದ್ದೀರೋ ಎಂಬ ಮಾಹಿತಿ ಕಾಣಿಸುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಮ್ಯಾಪ್ ನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ಅಲ್ಲಿ ಕಾಣುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನೀವು ಯಾವ ದಿನಾಂಕದಂದು ಬೆಳೆ ವಿಮೆ ಮಾಡಿಸಿದ್ದೀರಿ? ಬ್ಯಾಂಕಿನಿಂದ ನಿಮ್ಮ ಅರ್ಜಿ ಅಪ್ರೂವ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು.

ಬೆಳೆ ಹಾನಿಯಾದಾಗ ನೀವು ವಿಮಾ ಕಂಪನಿಗೆ ಮಾಹಿತಿ ನೀಡಿದ್ದೀರೋ ಇಲ್ಲವೋ?

ಬೆಳೆ ವಿಮೆ ಮಾಡಿಸಿದ ನಂತರ ಒಂದು ವೇಳೆ ನಿಮ್ಮ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಹಾಳಾದರೆ ಅಂದರೆ ಅತೀ ಮಳೆ, ಅತೀ ಕಡಿಮೆ ಮಳೆ, ಪ್ರವಾಹದಿಂದಾಗಿ ಬೆಳೆ ಹಾಳಾಗಿದ್ದಾಗ72 ಗಂಟೆಯೊಳಗೆ ವಿಮಾ ಕಂಪನಿಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ನಿಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡಿ ವಿಮಾ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ. ಆಗ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆಯಾದಾಗ ರೈತರ ಖಾತೆಗೆ ಜಮೆಯಾಗುತ್ತದೆ. ಇಲ್ಲದಿದ್ದರೆ ರೈತರಿಗೆ ಬೆಳೆ ವಿಮೆ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

Leave a Comment