Student scholarship application invited : ವಿದ್ಯಾರ್ಥಿಗಳಿಗೆ ಸ್ಕಾಲರಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕರ್ನಾಟಕದಲ್ಲಿ 10ನೇ ತರಗತಿಯ ನಂತರ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಇತ್ಯಾದಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಸಂಬಂದಿಸಿದ ಮಾಹಿತಿ ಇಲ್ಲಿದೆ
ಯಾವ ಇಲಾಖೆಯಿಂದ ಅರ್ಜಿ ಆಹ್ವಾನ ಹಾಗೂ ಕೊನೆಯ ದಿನಾಂಕ
ಸಮಾಜ ಕಲ್ಯಾಣ ಇಲಾಖೆಯಡಿ ಎಸ್.ಸಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು 2027ರ ಜನವರಿ 31 ಕೊನೆಯ ದಿನವಾಗಿದೆ.
ಬಡುಕಟ್ಟು ಕಲ್ಯಾಣ ಇಲಾಖೆಯಡಿ ಎಸ್.ಟಿ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 30 ಕೊನೆಯ ದಿನವಾಗಿದೆ. ಕರ್ನಟಾಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಧಿ ಮುಗಿದಿದೆ.
Student scholarship application invited ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಅರ್ಜಿ ಸಲ್ಲಿಸಲಿಚ್ಚಿಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು 10ನೇ ತರಗತಿ ಉತ್ತೀರ್ಣರಾಗಿ ಮೇಲ್ಪಟ್ಟ ಕೋರ್ಸ್ ಗಳಿಗೆ ಪಿಯುಸಿ ಹಾಗೂ ಮೇಲ್ಪಟ್ಟ ಕೋರ್ಸ್ ಗೆ ಪ್ರವೇಶ ಪಡೆದಿರಬೇಕು.
ಕುಟುಂಬದ ವಾರ್ಷಿಕ ಆದಾಯ
ಎಸ್.ಸಿ ಎಸ್.ಟಿ ವಿದ್ಯಾರ್ಥಿಗಳಿಗೆ 2.50 ಲಕ್ಷ ಒಳಗೆ ಆದಾಯ ಇರಬೇಕು. ಹಿಂದುಳಿದ ವರ್ಗಗಳ (ಓಬಿಸಿ ವರ್ಗದವರಿಗೂ 2.50 ಲಕ್ಷ ಆದಾಯ ಮಿತಿಯಿರಬೇಕು.
2ಎ, 3ಎ ಹಾಗೂ 3ಬಿ ಓಬಿಸಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ಒಳಗೆ ಆದಾಯ ಇರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಬಳಿ ಆಧಾರ್ ಕಾರ್ಡ್ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು) ಎಸ್.ಎಸ್.ಎಲ್ಸಿ ತರಗತಿಯ ನೋಂದಣಿ ಸಂಖ್ಯೆ ನಮೂದಿಸಬೇಕು. ಪ್ರಸ್ತುತ ವರ್ಷದ ಕಾಲೇಜು ಪ್ರವೇಶ ಸಂಖ್ಯೆ (ಅಡ್ಮಿಷನ್ ನಂಬರ್) ಅಥವಾ ನೋಂದಣಿ ಸಂಖ್ಯೆ ನಮೂದಿಸಬೇಕು. ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಸಕ್ರೀಯವಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ
ಅರ್ಹ ವಿದ್ಯಾರ್ಥಿಗಳು ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಹೌದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://ssp.postmatric.karnataka.gov.in/ssppre/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ವಿದ್ಯಾರ್ಥಿಗಳು ಲಾಗಿನ್ ಆಗಬಹುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಕಾಲಾವಕಾಶ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್ ಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗ, ಅಲೆ ಮಾರಿ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ ಊಟ ಹಾಗೂ ವಸತಿ ಸಹಾಯ ಯೋಜನೆಯ ಸೌಲಭ್ಯ ನೀಡಲು ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿಗ ಇಲಾಖೆಯ ಸಹಾಯವಾಣಿ 8050770004 ಅಥವಾ 1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.
ಇದನ್ನೂ ಓದಿ ನಿಮ್ಮ ಹೆಸರಿಗೆ ಎಫ್ಐಡಿ ಆಗಿದೆಯೇ ಮೊಬೈಲ್ ನಂಬರ್ ಹಾಕಿ ಇಲ್ಲೇ ಚೆಕ್ ಮಾಡಿ
ವಿದ್ಯಾರ್ಥಿಗಳು ತಡಮಾಡದೆ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕೊನೆಯಲ್ಲಿ ಸರ್ವರ್ ಸಮಸ್ಯೆ, ಅಥವಾ ಇನ್ನೂ ಬಹಳಷ್ಟು ಸಮಯವಿದೆ ಎಂದು ಮರೆಯುವ ಸಾಧ್ಯತೆಯಿದೆ. ಹಾಗಾಗಿ ಈಗಲೇ ಅರ್ಜಿ ಸಲ್ಲಿಸಿ ಶಿಷ್ಯವೇತನದ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಇನ್ನೇಕೆ ತಡ ಇಂದೇ ಹೋಗಿ ಅರ್ಜಿ ಸಲ್ಲಿಸಿ ಶಿಷ್ಯವೇತನ ಪಡೆದುಕೊಳ್ಳಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.





