ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವೇ? ಈ ದಾಖಲೆಗಳನ್ನು ಸಲ್ಲಿಸಿ

Written by Ramlinganna

Updated on:

Submit your these document : ಗೃಹಲಕ್ಷ್ಮೀ ಯೋಜನೆಗೆ ನೀವು ನೋಂದಣಿ ಮಾಡಿಸಿದ್ದರೂ  ನಿಮ್ಮ ಖಾತೆಗೆ ಯೋಜನೆಯ ಹಣ ಜಮೆಯಾಗುತ್ತಿಲ್ಲವೇ? ಕೂಡಲೇ ನಿಮ್ಮ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ.

ಹೌದು, ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ನಂತರವು ಹಣ ಜಮೆಯಾಗದವರು ಯಾವ ಯಾವ ದಾಖಲೆಗಳನ್ನು ಸಲ್ಲಿಸಬೇಕು? ಎಲ್ಲಿ ದಾಖಲೆಗಳನ್ನುಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ಖಾತೆಗೆ ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಧನ ಸಹಾಯ ಜಮೆ ಮಾಡಲಾಗಿದ್ದು, ಸದರಿ ತಿಂಗಳಲ್ಲಿ ಧನ ಸಹಾಯ ಜಮೆಯಾಗದೆ ಇರುವ ಫಲಾನುಭವಿಗಳು ತಮ್ಮಸಮೀಪದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರನ್ನು ಅಥವಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ಒದಗಿಸಿದಲ್ಲಿ ಧನಸಹಾಯವನ್ನು ಅವರ ಖಾತೆಗೆ ಜಮೆ ಮಾಡಲು ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ ನಿಮ್ಮ ಜಮೀನಿಗೆ ಹೋಗಲು ದಾರಿಯಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಕಲಬುರಗಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀಯೋಜನೆಯಡಿ ನೋಂದಣಯಾಗಿರುವ ಫಲಾನುಭವಿಗಳಿಗೆ ಈಗಾಗಲೇ ಆಗಸ್ಟ್ ತಿಂಗಳಲ್ಲಿ ಒಟ್ಟು 464154 ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ 443405 ಫಲಾನುಭವಿಗಳ ಖಾತೆಗೆ 2000 ರೂಪಾಯಿಗಳ ಧನ ಸಹಾಯವನ್ನು ಪಾವತಿಸಲಾಗಿದೆ. ಅದೇ ರೀತಿ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 470882 ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 453405 ಫಲಾನುಭವಿಗಳ ಖಾತೆಗೆ ಮಾಸಿಕ ಧನ ಸಹಾಯ ಪಾವತಿಸಲಾಗಿದೆ ಎಂದು ಕಲಬುರಗಿ ಮಹಿಳಆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದವರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ರೇಶನ್ ಕಾರ್ಡ್ ಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಬೇಕು. ಏಕೆಂದರೆ  ಈ ಮೂರು ದಾಖಲೆಗಳಲ್ಲಿ ಹೆಸರು ವ್ಯತ್ಯಾಸವಿದ್ದರೆ ಅಂದರೆ ಒಂದಕ್ಷರ ವ್ಯತ್ಯಾಸವಿದ್ದರೂ ಫಲಾನುಭವಿಗಳ ಖಾತೆಗೆ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

Submit your these document ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿದಮಾತ್ರಕ್ಕೆ ಜಮೆಯಾಗಲ್ಲ

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಾತ್ರಕ್ಕೆ ಹಣ ಜಮೆಯಾಗುವುದಿಲ್ಲ. ಹೌದು, ಈ ಯೋಜನೆಗೆ ನೋಂದಣಿ ಮಾಡಿಸಿದವರು ಅರ್ಹತೆ ಪಡೆದಿರಬೇಕು.ಅರ್ಹತೆ ಇಲ್ಲದವರ ಖಾತೆಗೆ ಹಣ ಜಮೆಯಾಗುವುದಿಲ್ಲ.

ಬ್ಯಾಂಕ್ ಖಾತೆ ಚಾಲ್ತಿಯಲ್ಲಿದೆಯೇ?

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.ಇದರೊಂದಿಗೆ ಹಳೆಯ ಖಾತೆಯಿದ್ದರೆ ಕೆವೈಸಿ ಸಂದೇಶ ಬಂದರೆ ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಹಾಗೂ ಬ್ಯಾಂಕ್ ಖಾತೆ ಜೋಡಣೆ ಆಗದೆ ಇರುವ ಕಾರಣದಿಂದಾಗಿ ಕೆಲವರು ಹಣ ಜಮೆಯಾಗುತ್ತಿಲ್ಲ.

ಇದನ್ನೂ ಓದಿ ನಿಮ್ಮ ಜಮೀನು ಯಾರ ಹೆಸರಿಗೆ ಎಷ್ಟು ಎಕರೆ ಜಂಟಿ ಇದೆ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತು ಜಮೆ ಆಗಿತ್ತು. ಆದರ ನಂತರ ಎರಡು ಮತ್ತು ಮೂರನೇ ಕಂತು ಒಬ್ಬರಿಗೆ ಜಮೆಯಾದರೆ ಮತ್ತೊಬ್ಬರಿಗೆ ಜಮೆಯಾಗುತ್ತಿಲ್ಲ. ಹಾಗಾಗಿ ಹಲವಾರು ಮಹಿಳೆಯರು ನಿರಾಶೆಗೊಂಡಿದ್ದಾರೆ.

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರು ಯಾರಿದ್ದಾರೆ?

ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಬೇಕಾದರೆ ಕುಟುಂಬದ ಮುಖ್ಯಸ್ಥ ಮಹಿಳೆ ಆಗಿರಬೇಕು. ಕುಟುಂಬದ ಮುಖ್ಯಸ್ಥರೆಂದು ರೇಶನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ನಮೂದಿಸಿದ್ದರೆ ಮಾತ್ರ  ಹಣ ಜಮೆಯಾಗಲಿದೆ.

Leave a Comment