Subsidy ಪಾಲಿ ಹೌಸ್ ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Subsidy : ತೋಟಗಾರಿಕೆ ಇಲಾಖೆಯಿಂದ ತಾಲೂಕಿನಲ್ಲಿ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ  ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಯಸಿಂಹ ತಿಳಿಸಿದ್ದಾರೆ.

ಈ ಕುರಿತು  ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ, ವಿಸ್ತರಣೆಯಡಿ ಅಂಗಾಂಶ ಬಾಳೆ, ದಾಳಿಂಬೆ, ತರಕಾರಿ ಬೆಳೆಗಳು, ಸಮಗ್ರರೋಗ ಕೀಟನಿಯಂತ್ರಣ, ನೀರು ಸಂಗ್ರಹಣಾ ಘಟಕ, ಪ್ಯಾಕ್ ಹೌಸ್, ಈರುಳ್ಳಿ ಶೇಖರಣೆ ಘಟಕ ಹಾಗೂ ಇತರೆ ಘಟಕಗಳಿಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಎಲ್ಲಾ ಯೋಜನೆಗಳ ಸಹಾಯಧನ ಪಡೆಯಲು ಅರ್ಹ ಹಾಗೂ ಆಸಕ್ತ ರೈತರು ಜುಲೈ 20 ರೊಳಗೆ ಕೈ ಬರಹ ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಐಡಿ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಕೊಳವೆ ಬಾವಿ ಮತ್ತು ಬೆಳೆ ದೃಢೀಕರಣ ಪ್ರತಿಯನ್ನು ತೋಟಗಾರಿಕೆ ಇಲಾಖೆಯ ಕಚೇರಿಗೆ ಸಲ್ಲಿಸುವಂತೆ ಜಯಸಿಂಗ ಅವರು ತಿಳಿಸಿದ್ದಾರೆ.

Subsidy ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಪ್ರಸಕ್ತಸಾಲಿನ ಬೆಳಗಾವಿ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ  ಉದ್ಯೋಗ ಖಾತ್ರಿ ಯೋಜನೆಯಡಿ ಮಾವು, ಚಿಕ್ಕು, ಗೋಡಂಬಿ, ಬಾಳೆ, ಪಪ್ಪಾಯಿ, ತೆಂಗು, ಪೇರಲ, ನುಗ್ಗೆ, ಸೀತಾಫಲ, ಕರಿಬೇವು ಹಾಗೂ ಇತರೆ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ಪ್ರವೇಶ ವಿಸ್ತರಣೆ ಕಾರ್ಯಕ್ರಮದಲ್ಲಿ ಸಹಾಯಧನ ಪಡೆದುಕೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ, ಕೃಷಿ ಹೊಂಡ, ಸಂರಕ್ಷಿತ ಬೇಸಾಯ, ಪ್ಯಾಕ್ ಹೌಸ್ ಮತ್ತು ಪ್ರಾಥಮಿಕ ಸಂಸ್ಕರಣಾ ಘಟಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ. 90 ರಷ್ಟು ಹಾಗೂ ಇತರೆ ವರ್ಗದ ರೈತರಿಗೆ ಶೇ. 55 ರಷ್ಟು ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ PM kisan Mandhan Yojane ಯಡಿ ರೈತರಿಗೆ ಸಿಗಲಿದೆ 3 ಸಾವಿರ Pension

ಕೃಷಿ ಯಾಂತ್ರೀಕರಣ ಉಫ ಅಭಿಯಾನ ಯೋಜನೆಯಡಿ  ಉತ್ಕೃಷ್ಟ ಗುಣಮಟ್ಟದ ಉಪಕರಣಗಳ ಖರೀದಿಗೆ ಪರಿಶಿಷ್ಟ ಜಾತಿ,  ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗದೂ ಮಹಿಳಾ ಫಲಾನುಭವಿಗಳಿಗೆ ಶೇ. 50 ಹಾಗೂ ಇತರೆ ವರ್ಗದ ರೈತರಿಗೆ ಶೇ. 40 ರಷ್ಟು ಸಹಾಯಧನ ಪಡೆದುಕೊಳ್ಳಲು ಹಾಗೂ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಲೆ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ ನಿರ್ವಹಣೆ ಅಂತರ ಬೆಳೆಗಳ ಹಾಗೂ ಹಾಗೂ ಯಂತ್ರೋಪಕರಣಗಳ ಖರೀದಿ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಸಲ್ಲಿಸಬಹುದಾಗಿದೆ.

 ಕೃಷಿ ಹೊಂಡ ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಕೃಷಿ ಹೊಂಡ ನಿರ್ಮಿಸಿ ನೀರಾವರಿ ಸೌಲಭ್ಯ ಒದಗಿಸಿಕೊಳ್ಳುವ ರೈತರಿಗೆ ಇಲ್ಲಿದೆ ಸಂತಸದ ಸುದ್ದಿ. ಹೌದು, ಕೃಷಿ ಹೊಂಡ ನಿರ್ಮಾಣಕ್ಕೆ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ಯಾವ ಜಿಲ್ಲಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಸಕ್ತ ಸಾಲಿನ ರಾಷ್ಟ್ರೀಯ  ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಘಟಕಗಳಾದ ನೀರು ಸಂಗ್ರಹಣ ಘಟಕಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳು ಹಾಗೂ ಇತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳ ಪ್ರಸನ್ನ ಕುಮಾರ್ ಜಿ. ಎಚ್. 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್. (ಬಿಳಿಚೋಡು), ಸುನೀಲ್ ಕುಮಾರ ಎಚ್.ಟಿ. ಅವರನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment