ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿ ಹೊಂಡ ನಿರ್ಮಾಣ ಮಾಡಲು ಸಾಮನ್ಯ ವರ್ಗದ ರೈತರಿಗೆ ಒಂದು, ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ ಮಾಡಲು ಸಾಮಾನ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ತಲಾ ಒಂದೊಂದು ನಿರ್ಮಾಣ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಮಿನಿ ಟ್ರ್ಯಾಕ್ಟರ್ ಖರೀದಿ ಮಾಡಲು ಇತರೆ ರೈತರಿಗೆ ಎರಡು ಹಾಗೂ ಪ್ಯಾಕ್ ಹೌಸ್ ನಿರ್ಮಾಣ ಮಾಡಲು ರೈತರಿಗೆ ಸಹಾಯಧನ ನೀಡಲಾಗುವುದು.
ಕೋಲಾರ ಜಿಲ್ಲೆಯ ಆಸಕ್ತ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಜುಲೈ 25 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಪಂ, ಕೋಲಾರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿಆಯಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಚಾಮರಾಜನಗರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2022-23ನೇ ಸಾಲಿನ ಸುರಂಗ ಮಾದರಿ ಹಸಿರು ಮನೆ ನಿರ್ಮಾಣಕ್ಕೆ ಚಾಮರಾಜನಗರ ಜಿಲ್ಲೆಯ ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತರಿಗೆ ಶೇ. 50 ರಂತೆ ಪ್ರತಿ ಚದರ ಮೀಟರಿಗೆ 300 ರೂಪಾಯಿ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿದ್ದು, ಗರಿಷ್ಠ 800 ಚದರ್ ಮೀಟರ್ ವಿಸ್ತೀರ್ಣ ಘಟಕಕ್ಕೆ2.40 ಲಕ್ಷ ರೂಪಾಯಿ ಗಳ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತೋಟಗಾರಿಕೆ ಇಲಾಖೆಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು.
ಏನಿದು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ?
ನೀರಾವರಿ ಹೊಂದಿರುವ ಹಾಗೂ ನೀರಾವರಿ ಸೌಲಭ್ಯ ಮಾಡಲಿಚ್ಚಿಸುವರ ರೈತರಿಗೆ, ಮಳೆ ನೀರು ಸಂಗ್ರಹ ಮಾಡಲಿಚ್ಚಿರುವ ರೈತರಿಗೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ನೀಡಲು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು ಮಳೆ ನೀರನ್ನು ಸಂರಕ್ಷಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದು ಆರ್ಥಿಕವಾಗಿ ಸಬಲರಾಗಬಹುದು. ಇದರಿಂದಾಗಿ ರೈತರ ಆದಾಯ ಹೆಚ್ಚಾಗಿ ಆರ್ಥಿಕವಾಗಿ ಸಬಲರಾಗಲು ಸರ್ಕಾರವು ಪ್ರತಿ ವರ್ಷ ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಹಾಗೂ ನೀರಾವರಿ ಸೌಲಭ್ಯ ಮಾಡಿಕೊಳ್ಳಲು ಸಹಾಯಧನ ನೀಡುವುದು.
ರೈತರಿಗೆ ಎಷ್ಟು ಸಹಾಯಧನ ಸಿಗುವುದು?
ಸಾಮಾನ್ಯ ವರ್ಗದ ರೈತರಿಗೆ ಶೇ. 40 ರಷ್ಟು ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಸಹಾಯಧನವೂ ಸಹ ಕೃಷಿ ಯಂತ್ತೋಪಕರಗಳ ಮೇಲೆ ಹೆಚ್ಚು ಕಡಿಮೆಯಾಗುವುದು.
ರೈತರು ಮಾವು, ದಾಳಿಂಬೆ, ದ್ರಾಕ್ಷಿ, ಬಾಳೆ ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆ ಮಾಡಿಕೊಳ್ಳಬಹುದು. ಇದರೊಂದಿಗೆ ತರಕಾರಿ ಬೆಳೆಗಳ ವಿಸ್ತರಣೆಗೂ ಸಹಾಯಧನ ಸಿಗುವುದು.
ರೈತರು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಸಂಬಂಧಿಸಿದ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಬಹುದು. ಆದರೆ ತೋಟಗಾರಿಕೆ ಇಲಾಖೆಯು ಅರ್ಜಿ ಕರೆದಾಗ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೌಲಭ್ಯ ಪಡೆಯಬಹುದು. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆಗಳಿಗೆ ಭೇಟಿ ನೀಡಿ ಲಭ್ಯವಿರುವ ಕೃಷಿಯಂತ್ರೋಪಕರಣಗಳ ಹಾಗೂ ಇತರ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
Good