ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಹಾಗೂ ತೋಟಗಾರಿಕೆ ಮಾಡುತ್ತಿರುವ ರೈತರಿಗೆ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ಅಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ರೈತರಿಗೆ ಸಹಾಯಧನ ನೀಡಲು ಅರ್ಜಿ ಕರೆಯಲಾಗಿದೆ.
ಕಲಬುರಗಿ ಜಿಲ್ಲೆಯ ಆಸಕ್ತ ರೈತರು ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯಬಹುದು ಎಂದು ಕಲಬುರಗಿ (ಜಿಪಂ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈಯಕ್ತಿಕ ಕೃಷಿ ಹೊಂಡ, ಸಾಮೂಹಿಕ ಕೃಷಿ ಹೊಂಡದೊಂದಿಗೆ ಯಾಂತ್ರೀಕರಣ, ಪ್ಯಾಕ್ ಹೌಸ್, ಒಣದ್ರಾಕ್ಷಿ ಘಟಕ, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕ ಹಾಗೂ ಅರಿಶಿಣ ಸಂಸ್ಕರಣಾ ಘಟಕಕಗಳಿಗೆ ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಜುಲೈ 25 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.
ಕೃಷಿ ಹೊಂಡ ನಿರ್ಮಾಣಕ್ಕೆ ಬೇಕಾಗುವ ದಾಖಲೆಗಳು
ರೈತರ ಸ್ವಂತ ಜಮೀನು ಹೊಂದಿರಬೇಕು. ಆಧಾರ್ ಕಾರ್ಡ್ ಇರಬೇಕು. ಪಡಿತರ ಚೀಟಿ ಹೊಂದಿರಬೇಕು. ಖಾತೆಉತಾರ, ಇತ್ತೀಚಿನ ಭಾವಚಿತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಪ್ರಮಾಣ ಪತ್ರ ಇರಬೇಕು. ಬ್ಯಾಂಕ್ ಪಾಸ್ ಝರಾಕ್ಸ್ ಪ್ರತಿ ಇರಬೇಕು. ರೈತರ ಜಮೀನಿನ ಪಹಣಿ ಝರಾಕ್ಸ್ ಪ್ರತಿ ಇರಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಏನಿದು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ?
ಮಳೆ ನೀರು ಸಂರಕ್ಷಿಸಿ ಅದರ ಮೂಲಕ ತೋಟಗಾರಿಕೆ ಬೆಳೆಗೆ ಪ್ರೋತ್ಸಾಹಿಸಲು ಸರ್ಕಾರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿವರ್ಷ ರೈತರು ತೋಟಗಾರಿಕೆ ಬೆಳೆ ವಿಸ್ತರಣೆಗೆ ಪ್ರೋತ್ಸಾಹಿಸಲು ಶೇ. 50ರವರೆಗೆ ಸಹಾಯಧನ ನೀಡಲಾಗುವುದು.
ಇದನ್ನೂ ಓದಿ : ಜಮೀನಿನ ಮೊಟೇಷನ್ ಮೊಬೈಲ್ ನಲ್ಲೇ ನೋಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯ ತೋಟಗಾರಿಕೆ, ಹೂವು. ತರಕಾರಿ ಬೆಳೆಗಳ ವಿಸ್ತರಣೆ, ಬೆಳೆ ಬಿತ್ತನೆಯಿಂದ ಕಟಾವುವರೆಗೂ ಬೇಕಾಗುವ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡಲಾಗುವುದು.
ಗದಗ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ, ಗದಗ ಜಿಲ್ಲೆಯ ಶಿರಹಟ್ಟಿ ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳ ತೋಟಗಾರಿಕೆ ಬೆಳೆ ಹೊಂದಿರುವ ಅರ್ಹ ರೈತರಿಂದಲೂ ಅರ್ಜಿ ಕರೆಯಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬಾಳೆ, ಮಾವು, ಅಂಜೂರು, ಪೇರಲ, ಡ್ರ್ಯಾಗನ್ ಫ್ರೂಟ್ಸ್, ಜಂಬು ನೇರಳೆ, ಹುಣಸೆ ಸೇರಿದಂತೆ ಇನ್ನಿತರ ಹಣ್ಣಿನ ಬೆಳೆಗಳಿಗೆ ಗುಲಾಬಿ, ಸುಗಂಧರಾಜ, ಸೇವಂತಿಗೆ, ಮಲ್ಲಿಗೆ ಮುಂತಾದ ಹೂವಿನ ಬೆಳೆಗಳ ವಿಸ್ತರಣೆಗೆ ಸಹಾಯಧನ ನೀಡಲಾಗುವುದು. ಕೃಷಿ ಹೊಂಡ ನಿರ್ಮಾಣ, ಪಾಲಿಹೌಸ್ ನಿರ್ಮಾಣ, ನೆರಳು ಪರದೆ ನಿರ್ಮಾಣ, ತರಕಾರಿ ಬೆಳೆಗಳಿಗೆ ನೆಲಹಾಸು ನಿರ್ಮಾಣಕ್ಕೂ ಸಹಾಯಧನ ನೀಡಲು ಅರ್ಜಿ ಕರೆಯಲಾಗಿದೆ.
ಗದಗ ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿುನ ರೈತರು ಜುಲೈ 15 ರೊಳಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.
ಗದಗ, ತುಮಕೂರು, ಕಲಬುರಗಿ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಕರೆಯಲಾಗಿದೆ. ಇತರ ಜಿಲ್ಲೆಯ ತೋಟಗಾರಿಕೆ ಇಲಾಖೆಗಳಿಂದಲೂ ಅರ್ಜಿ ಕರೆದಿರುತ್ತಾರೆ. ಆಯಾ ತಾಲೂಕಿನ ರೈತರು ತಮ್ಮ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ವಿಚಾರಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಬರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಲಾಭ ಪಡೆಯಬಹುದು.