Subsidy for cow purchase : ಹೈನುಗಾರಿಕೆಗೆ ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ 65 ಸಾವಿರ ರೂಪಾಯಿಯವರೆಗೆ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಹಾಸನ, ಬೆಳೆಗಾವಿ ಸೇರಿದಂತೆ ಇನ್ನಿತರ ಜಿಲ್ಲೆಗಳಿಂದ ಹಸು ಅಥವಾ ಎಮ್ಮೆ ಖರೀದಿಗೆ ಹಣ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹಸು ಅಥವಾ ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ರೈತ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರ ಬಡ್ಡಿ ಸಹಾಯಧನವನ್ನು ನೀಡಲಾಗುವುದು.
ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದಿರುವ ಜಿಲ್ಲೆಯ ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ಪ್ರತಿ ಫಲಾನುಭವಿಗೆ ಗರಿಷ್ಠ 65 ಸಾವಿರ ರೂಪಾಯಿ ಸಾಲದ ಮೊತ್ತಕ್ಕೆ ಶೇ.6 ಬಡ್ಡಿ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರ ಪಶು ವೈದ್ಯಕೀಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ತಾಲೂಕು ಪಶು ಆಸ್ಪತ್ರೆಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಉಪನಿರ್ದೇಶಕರು ತಿಳಿಸಿದ್ದಾರೆ.
Subsidy for cow purchase ಬೆಳಗಾವಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ರೈತ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ. 6 ರ ಬಡ್ಡಿಯಲ್ಲಿ ಸಹಾಯಧನ ನೀಡಲಾಗುವುದು.
ಗರಿಷ್ಠ 65 ಸಾವಿರ ರೂಪಾಯಿ ಸಾಲದ ಮೊತ್ತಕ್ಕೆ ಶೇ. 6ರ ಬಡ್ಡಿ ಸಹಾಯಧನ ನೀಡುವ ಯೋಜನೆಯಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ಹೈನುಗಾರಿಕೆಗೆ ಸಾಲ ಪಡೆದಿರುವ ರೈತ ಮಹಿಳೆಯರು ಇದರ ಸದುಪಯೋಗ ಪಡೆಯಬಹುದು.
ಇದನ್ನೂ ಓದಿ : ರೈತರ ಯಾವ ಸರ್ವೆ ನಂಬರಿಗೆ ಬರ ಪರಿಹಾರ ಜಮೆ? ಹೀಗೆ ಚೆಕ್ ಮಾಡಿ
ಆಸಕ್ತರು ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಯನ್ನು ಅಥವಾ ಸಂಬಂಧಪಟ್ಟ ತಾಲೂಕು ಪಶು ಆಸ್ಪತ್ರೆಯನ್ನು ಸಂಪರ್ಕಿಸಬಹುದು ಎಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೈನುಗಾರಿಕೆಗೆ ಸೌಲಭ್ಯ ಪಡೆಯಲು ಬೇಕಾಗುವ ದಾಖಲೆಗಳು
ಹೈನುಗಾರಿಕೆ ಮಾಡಲು ಇಚ್ಚಿಸುವ ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರೆ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಎಫ್.ಐಡಿ ಸಂಖ್ಯೆ ಹೊಂದಿರಬೇಕು.
ಯಾರಿಗೆ ಸೌಲಭ್ಯ ಸಿಗಲಿದೆ?
ಕಳೆದ ಐದು ವರ್ಷಗಳಲ್ಲಿ ಪಶು ಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಮತ್ತೇ ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪ್ರಾಣಿ ಕಲ್ಯಾಣಿ ಸಹಾಯವಾಣಿ
ಪಶುಪಾಲನೆ, ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ಕುರಿತಂತೆ ಮಾಹಿತಿ ಕೇಳಲು 24 ಗಂಟೆಗಳ ಕಾಲ ರೈತರು 8277 100 200 ಗೆ ಕರೆ ಮಾಡಬಹುದು. ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.
ಆಸಕ್ತ ರೈತರು ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ. ಈ ಹಿಂದೆ ಸೌಲಭ್ಯ ಪಡೆಯದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಹಾಗಾಗಿ ಆಸಕ್ತ ರೈತರು ಅರ್ಜಿ ಸಲ್ಲಿ ಸೌಲಭ್ಯ ಪಡೆದುಕೊಳ್ಳಬಹುದು.