ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿಯಲ್ಲಿ ಹೈನುಗಾರಿಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.  ಪ್ರಸಕ್ತ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿನ ಫಲಾನುಭವಿಗಳ ಆಧಾರಿತ ಕಾರ್ಯಕ್ರಮವಾದ “ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ” ಹೈನುಗಾರಿಕೆಗೆ  ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಲಬುರಗಿ ಜಿಲ್ಲೆಗೆ ನೀಗದಿಪಡಿಸಿದ ಗುರಿಯಂತೆ ಹೈನುಗಾರಿಕೆ ಘಟಕ ಸ್ಥಾಪನೆಗಾಗಿ ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಕೃಷಿ ಕೂಲಿ ಕಾರ್ಮಿಕರು ಹಾಗೂ ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಅಸಕ್ತ  ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಪಶುಪಾಲನಾ ಇಲಾಖೆಯ ಉಪನಿರ್ದೆಶಕರು ತಿಳಿಸಿದ್ದಾರೆ.

ಆಸಕ್ತರು ಸಂಬಂಧಪಟ್ಟ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2021ರ ಅಕ್ಟೋಬರ್ 21ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪಶುಪಾಲಕರ 8277 100 200

ರಾಜ್ಯದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ದೂರವಾಣಿ ಸಂಖ್ಯೆ 8277 100 200 (ಉಚಿತ) ಕ್ಕೆ 24*7 ರವರೆಗೆ ಕರೆ ಮಾಡಿ, ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುವ ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದಾಗಿದೆ.

ಇದನ್ನೂ ಓದಿ : ಅಮೃತ ಸಿರಿ ಯೋಜನೆಯಡಿಯಲ್ಲಿ ಉತ್ಕೃಷ್ಟ ತಳಿಯ ಹಸುವಿನ ಕರು ವಿತರಣೆಗೆ ಅರ್ಜಿ ಆಹ್ವಾನ

ಸಹಾಯವಾಣಿಯ ಮೂಲಕ ಲಭ್ಯವಿರುವ ಮಾಹಿತಿಗಳು:

ಇಲಾಖೆಯ ವತಿಯಿಂದ ಲಭ್ಯವಿರುವ ತಾಂತ್ರಿಕ ಸೇವೆಗಳ ಬಗ್ಗೆ ಮಾಹಿತಿ.

ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ.

ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹಾಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರ.

ದೇಶಿ ಹಾಗೂ ವಿದೇಶಿ ಜಾನವಾರು ತಳಿಗಳ ಬಗ್ಗೆ ಮಾಹಿತಿ.

ಜಾನುವಾರುಗಳಲ್ಲಿ ನಿಯಮಿತವಾಗಿ ನೀಡಬೇಕಾಗಿರುವ ಲಸಿಕೆಗಳ ಕುರಿತು ವಿವರಣೆ.

ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯ ಕುರಿತು ಮಾಹಿತಿ.

ಮಿಶ‍್ರತಳಿ ಹಸು, ಕುರಿ ಮತ್ತು ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಸ್ಥಳಗಳ ವಿವರ.

ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ.

ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ಅಧಿಕಾರಿಗೆ ವರ್ಗಾಯಿಸಿ, ಅಗತ್ಯ ಸೇವೆ ದೊರೆಯುವಂತೆ ಸಹಕರಿಸುವುದು.

3 Replies to “ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹೈನುಗಾರಿಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ”

  1. Thank you so much for the post
    I am literally searching and looking for loan
    this post made my search easier it’s very good

Leave a Reply

Your email address will not be published. Required fields are marked *