ತುಂತುರು ನೀರಾವರಿ, ಹನಿ ನೀರಾವರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

ಸೂಕ್ಷ್ಮ ನೀರಾವರಿ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳ ರೈತರಿಗೆ ಹನಿ ನೀರಾವರಿ ಘಟಕ ಹಾಗೂ ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ ಸಾಮಾನ್ಯ ವರ್ಗದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನದಲ್ಲಿ ಮತ್ತು ದೊಡ್ಡ ರೈತರಿಗೆ ಶೇ. 45 ರ ಸಹಾಯಧನದಡಿ ಹನಿ ನೀರಾವರಿ ಘಟಕಗಳನ್ನು ನೀಡಲಾಗುತ್ತಿದ್ದು, ಮತ್ತು ತುಂತುರು ನೀರಾವರಿ ಘಟಕಗಳನ್ನು ಎಲ್ಲಾ ವರ್ಗದ ರೈತರಿಗೆಶೇ. 90  ಸಹಾಯಧನದಡಿಯಲ್ಲಿ ನೀಡಲಾಗುತ್ತಿದೆ. ಕೋಲಾರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : 2 ಲಕ್ಷ ಕೃಷಿ ಸಾಲಮನ್ನಾಕ್ಕೆ ಮಾಜಿ ಸಿಎಂ ಆಗ್ರಹ ಎಷ್ಟು ಸಾಲಮನ್ನಾ ಆಗಬೇಕು? ಕಾಮೆಂಟ್ ಮಾಡಿ

ರೈತರು ಅಗತ್ಯ ದಾಖಲೆಗಳಾದ ಪಹಣಿ, ಫೋಟೋ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಛಾಪಾ ಕಾಗದ, ಎನ್.ಓ.ಸಿ ಬೆಳೆ ದೃಢೀಕರಣ, ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರ, ಸಾಮಾನ್ಯ ವರ್ಗದ ರೈತರು ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರಗಳೊಂದಿಗೆ ಹತ್ತಿರದ ಹೋಬಳಿ ರೈತ ಸಂಪರ್ಕ ಕೇಂದ್ರಗಳ ಅಥವಾ ಕೋಲಾರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ಅರ್ಜಿ ಆಹ್ವಾನ

ಚಾಮರಾಜಗನರ ಜಿಲ್ಲೆಯ ಹನೂರು ತಾಲೂಕಿನ ರೈತರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಮೀನುಗಳಲ್ಲಿ ತುಂತುರು ನೀರಾವರಿ ಘಟಕಗಳನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆ ಅರ್ಹ ರೈತರಿಂದ ತುಂತುರು ಹನಿ ಘಟಕ ನಿರ್ಮಾಣ ಮಾಡಿಕೊಳ್ಳಲು ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಲು ಕೋರಲಾಗಿದೆ.

ಮಂಡ್ಯ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅಡಿಕೆ ಬೆಳೆ ಹೊರತುಪಡಿಸಿ ಉಳಿಕೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಯೋಜನೆ ಬಳಕೆ ಮಾಡಿಕೊಳ್ಳಲು ಇತರೆ ಜನಾಂಗಕ್ಕೆ ಶೇ. 75 ರಷ್ಟು ಸಹಾಯಧನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಬರಗಾಲವಿದ್ದು, ಇರುವ ನೀರನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಲು ಅನುವಾಗುವಂತೆ ಈ ಯೋಜನೆಗೆ ಸಹಾಯಧನ ನೀಡಲಾಗುತ್ತಿದೆ. ರೈತರು ಸದ್ಬಳಕೆ ಮಾಡಿಕೊಳ್ಳುವಂತೆ ಹಿರಿಯ ತೋಟಗಾರಿಕೆ ನಿರ್ದೇಶಕಿ ರಾಧಾ ತಿಳಿಸಿದ್ದಾರೆ.

ಇದನ್ನೂ ಓದಿ : ಈ ದಿನ ಬರ ಪರಿಹಾರ ಬಿಡುಗಡೆ: ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ಹನಿ ನೀರಾವರಿ ಅಳವಡಿಸಿಕೊಳ್ಳಲು ಇತ್ತೀಚೆಗೆ ಎಲ್ಲಾ ತಾಲೂಕುಗಳಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ. ಹಾಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ನೀರಾವರಿ ಸೌಲಭ್ಯ ಪಡೆದುಕೊಳ್ಳಬಹುದು.

ಸರ್ಕಾರಿ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯ

ರೈತರು ಯಾವುದೇ ಯೋಜನೆಗಳಡಿಯಲ್ಲಿ ಸರ್ಕಾರಿ ಸೌಲಭ್ಯ ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ. ರೈತರು ಅರ್ಜಿ ಸಲ್ಲಿಸುವ ಮೊದಲು ಪ್ರೂಟ್ಸ್ ಐಡಿ ಮಾಡಿಕೊಳ್ಳಬೇಕು. ಜಮೀನಿನ ದಾಖಲೆಗಳು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೊಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ಫ್ರೂಟ್ಸ್ ಐಡಿ ಮಾಡಿಕೊಳ್ಳಬಹುದು.

Leave a Comment