ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಣ್ಣ, ಅತೀ ಸಣ್ಣ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಪ್ರತಿ ಫಲಾನುಭವಿಗಳಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಲು ಅರ್ಹರಿರುತ್ತಾರೆ. ಮೊದಲು 2 ಹೆಕ್ಟೇರ್ ಪ್ರದೇಶದವರಿಗೆ ಶೇ. 90 ರಷ್ಟು ಮತ್ತು 2 ಹೆಕ್ಟೇರ್ ಮೇಲ್ಪಟ್ಟು 3 ಹೇಕ್ಟೇರ್ ವರಿಗೆ ಶೇ. 45 ರಷ್ಟು ಸಹಾಯಧನ ಸೌಲಭ್ಯವಿರುತ್ತದೆ. ಸಣ್ಣ, ಅತೀ ಸಣ್ಣ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತರಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು.
ಸಹಾಯಧನಕ್ಕೆ ಕಂಪನಿ ಬಿಲ್ಲುಗಳನ್ನು ಮಾತ್ರ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಕೋರಲಾಗಿದೆ.
ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲು ಹಾವೇರಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಪ್ರತಿವರ್ಷದಂತೆ ಈ ವರ್ಷವೂ ಸಹ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಣ್ಣ, ಅತೀ ಸಣ್ಣ ಮತ್ತು ಇತರೆ ರೈತರೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರದ ಮಾರ್ಗಸೂಚಿಯಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಶೇ. 90 ರಷ್ಟು ಹಾಗೂ ಇತರೆ ವರ್ಗಕ್ಕೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು. ರೈತರು ಕಡ್ಡಾಯವಾಗಿ ಕಂದಾಯ ಇಲಾಖೆಯಿಂದ ಸಣ್ಣ, ಅತೀಸಣ್ಣ ರೈತರೆಂದು ದೃಢೀಕರಣ ಪ್ರಮಾಣ ಪತ್ರ, ಪಹಣಿ, ಆಧಾರ್ ಕಾರ್ಡ್, ಬ್ಯಾಂಕಿನ ವಿವರಗಳೊಂದಿಗೆ ತಾಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ಅನುದಾನ ಲಭ್ಯತೆಯನುಸಾರ ಕಾರ್ಯಾದೇಶ ನೀಡಿ ಸಹಾಯಧನಕ್ಕೆ ಪರಿಗಣಿಸಲಾಗುವುದು.
ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲು ಪಾವಗಡ ತಾಲೂಕಿನ ರೈತರಿಂದ ಅರ್ಜಿ ಆಹ್ವಾನ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೈತರಿಂದಲೂ ತೋಟಗಾರಿಕೆ ಬೆಳೆಗೆ ಹನಿ ನೀರಾವರಿ ಅಳವಡಿಸಲು ಪ್ರಧಾನಮ ತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪಾವಗಡ ತಾಲೂಕಿನ ರೈತರು ಭರ್ತಿ ಮಾಡಿದ ಅರ್ಜಿಗಳನ್ನು ಪಾವಗಡ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಂಕರಮೂರ್ತಿ ಪಾವಡಗ 08136244064 ಹಾಗೂ. ಮೊ. 94822 22090 ಗೆ ಕರೆ ಮಾಡಬಹುದು.
ಇದೇ ರೀತಿಯಾಗಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ರೈತರಿಂದಲೂ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಇತರೆ ರೈತರಿಗೆ ಶೇ. 45 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅಗತ್ಯ ದಾಖಲೆಗಳೊಂದಿಗೆ ಆಧಾರ್ ಕಾರ್ಡ್, ಪಹಣಿ,ಬ್ಯಾಂಕ್ ಪಾಸ್ಪುಕ್ ಝರಾಕ್ಸ್ ಪ್ರತಿ, ಇತ್ತೀಚಿನ 2 ಫೊಟೊಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತಸಂಪರ್ಕ ಕೇಂದ್ರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.