ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಮಿಶ್ರ ತಳಿ ಹಸು ಘಟಕ ಸ್ಥಾಪನೆಗೆ ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರಸಕ್ತ ಸಾಲಿನ ಹಾಲು ಉತ್ಪಾದಕರ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಫಲಾನುಭವಿಗಳಿಗೆ ಒಂದು ಮಿಶ್ರ ತಳಿ ಹಸು ಘಟಕಗಳನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಿಂದ ವಿಶೇಷ ಘಟಕ ಯೋಜನೆಯಡಿ 36 ಹಾಗೂ ಗಿರಿಜನ ಉಪ ಯೋಜನೆಯಡಿ 54 ಫಲಾನುಭವಿಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಫಲಾನುಭವಿಗಳು ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಅದೇ ಕಚೇರಿಯಲ್ಲಿ ಸಲ್ಲಿಸಬೇಕೆಂದು ಬೀದರ್ ಪಶು ಪಾಲನಾಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಂದು ಮಿಶ್ರ ತಳಿ ಹಸು ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖಾ ವತಿಯಿಂದ 2023-24ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಒಂದು ಮಿಶ್ರ ತಳಿ ಹಸು ಘಟಕ ಅನುಷ್ಠಾನಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಹಾವೇರಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗಲು ದಾರಿಯಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನವಾಗಿದೆ. ಅರ್ಜಿ ನಮೂನೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೇರೂರ, ರಟ್ಟಿಹಳ್ಳಿ, ರಾಣಿಬೆನ್ನೂರು, ಶಿಗ್ಗಾಂವಿ, ಸವಣೂರು, ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಜಿಲ್ಲೆ ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ ಎಸ್.ವಿ. ಸಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಶ್ರ ತಳಿ ಹಸು ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ
ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಸಲುವಾಗಿ ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯು ಒಂದು ಮಿಶ್ರ ತಳಿ ಹಸು ಘಟಕದ ಅನುಷ್ಠಾನಕ್ಕಾಗಿ ಸಹಾಯಧನ ಸೌಲಭ್ಯ ನೀಡಲು ತುಮಕೂರು ಜಿಲ್ಲೆಯ ಅರ್ಹ ಪರಿಶಿಷ್ಟ ಜಾತಿ ಪರಿಶಿಷ್ಟ ಪಗಡದ ರೈತಾಪಿ ಜನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯತ್ವವನ್ನು ಹೊಂದಿರುವ ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ನವೆಂಬರ್ 29 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ : ಜಮೀನಿನ ಅಳತೆ ಮೊಬೈಲ್ ನಲ್ಲೇ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಪಶುಪಾಲನೆ ಇಲಾಖೆ ಸಹಾಯವಾಣಿ
ರಾಜ್ಯದ ಪಶು ಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ಪಶುಪಾಲನೆ ಹಾಗೂ ಇನ್ನಿತರ ಮಾಹಿತಿಗಾಗಿ ಉಚಿತ ಸಹಾಯವಾಣಿ ನಂಬರ್ 8277100200 ಗೆ ಕರೆ ಮಾಡಬಹುದು. ಈ ನಂಬರಿಗೆಕರೆ ಮಾಡಿ ಪಶುವೈದ್ಯರ ಸಲಹೆ ಹಾಗೂ ಸೌಲಭ್ಯಗಳ ಮಾಹಿತಿ ಪಡೆಯಬಹುದು.