Subsidy for farm machinery equipment ರೈತರಿಗಿಲ್ಲಿದೆ ಗುಡ್ ನ್ಯೂಸ್. ಕೃಷಿ ಇಲಾಖೆಯಲ್ಲಿ ಎಸ್.ಎಮ್.ಎಮ್ ಯೋಜನೆಯಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಖರೀದಿಗೆ ಸಬ್ಸಿಡಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಇತರೆ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡಲಾಗುವುದು, ಹೌದು, ಕಳೆ ಕತ್ತರಿಸುವ ಯಂತ್ರ, ಹುಲ್ಲು ಕತ್ತರಿಸುವ ಯಂತ್ರ, ರೋಟರಿ ಪವರ್ ವೀಡರ್, ಯಂತ್ರಚಾಲಿತ ಕೈಗಾಡಿಗಳು, ಔಷಧಿ ಸಿಂಪರಣೆ ಯಂತ್ರ, ಡಿಸೆಲ್ ಪಂಪ್ ಸೆಟ್, ಗುಂಡಿ ತೆಗೆಯುವ ಡಿಗ್ಗರ್, ಗಿರಣಿಯಂತ್ರ, ರೋಟೋವೇಟರ್, ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ಇನ್ನಿತರ ಕೃಷಿ ಯಂತ್ರೋಪಕರಣಗಳ ಖರೀದಿಗೆ ರಿಯಾಯಿತಿ ನೀಡಲಾಗುವುದು.
ಈ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರವರೆಗೆ ಸಬ್ಸಿಡಿ ನೀಡಲಾಗುವುದು.
Subsidy for farm machinery equipment ಸಬ್ಸಿಡಿ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು
ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲಿಚ್ಚಿಸುವ ರೈತರು ಆಧಾರ್ ಕಾರ್ಡ್ ಹೊಂದಿರಬೇಕು. ಜಮೀನಿನ ಪಹಣಿ (ಆರ್.ಟಿ.ಸಿ) ದಾಖಲೆ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರ ಇರಬೇಕು.
ಇದನ್ನೂ ಓದಿ : PM KISAN ಯೋಜನೆಯ ಹೊಸ ಪಟ್ಟಿಯಿಂದ ನಿಮ್ಮ ಹೆಸರು ತೆಗೆಯಲಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಇದರೊಂದಿಗೆ ಇತ್ತೀಚಿನ ಫೋಟೋ ಇರಬೇಕು. ಅರ್ಜಿಯೊಂದಿಗೆ ಇನ್ನಿತರ ದಾಖಲೆಗಳನ್ನು ಲಗತ್ತಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಎಲ್ಲಿ ಸಲ್ಲಿಸಬೇಕು? (where to apply for get subsidy)
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ರೈತರು ಅರ್ಜಿ ಸಲ್ಲಿ ಕೊರಲಾಗಿದೆ. ಹಾಗಾಗಿ ಅಗತ್ಯ ದಾಖಲೆಗಳೊಂದಿಗೆ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅಱ್ಜಿ ಸಲ್ಲಿಸಬೇಕು. ಈಗಾಗಲೇ ಸೌಲಭ್ಯ ಪಡೆದ ರೈತರಿಗೆ ಸಬ್ಸಿಡಿ ನೀಡಲಾಗುವುದಿಲ್ಲ. ಅನುದಾನ ಲಭ್ಯತೆ ಹಾಗೂ ಜೇಷ್ಠತೆ ಆಧಾರದ ಮೇಲೆ ರೈತರಿಗೆ ಸಬ್ಸಿಡಿ ನೀಡಲಾಗುವುದು ಎಂದು ಕೃಷಿ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಏನಿದು ಅನುದಾನ ಲಭ್ಯತೆ ಆಧಾರದ ಮೇಲೆ ಯಂತ್ರೋಪಕರಣ ನೀಡುವುದು?
ಅನುದಾನ ಲಭ್ಯತೆ ಆಧಾರದ ಮೇಲೆ ಎಂದರೆ ಒಂದು ತಾಲೂಕಿಗೆ ಉದಾಹರಣೆಗೆ 10 ಟ್ರ್ಯಾಕ್ಟರ್ ವಿತರಿಸಬೇಕೆಂಬ ಗುರಿ ಇರುತ್ತದೆ. ಅಲ್ಲಿ ಅರ್ಜಿಗಳನ್ನು ಸಲ್ಲಿಸುವ ರೈತರ ಸಂಖ್ಯೆ ಹೆಚ್ಚಿರುತ್ತದೆ. ಆಗ ಜೇಷ್ಠತೆ ಆಧಾರದ ಮೇಲೆ ಅಂದರೆ ಹಿಂದೆ ಸೌಲಭ್ಯಪಡೆಯದೆ ಇರುವ ರೈತರಿಗೆ ಆದ್ಯತೆ ನೀಡಲಾಗುವುದು. ಇದರೊಂದಿಗೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಾಮುಖ್ಯತೆ ನೀಡಲಾಗುವುದು.
ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳನ್ನು ಲಗತ್ತಿಸುವುದನ್ನು ಮರೆಯಬಾರದು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಯಾವ ಯಾವ ದಾಖಲೆ ಬೇಕೋ ಕೇಳಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಲು ಕೋರಲಾಗಿದೆ.
ಈಗ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಇದೇ ರೀತಿ ಇತರ ಜಿಲ್ಲೆಗಳ ರೈತರಿಂದಲೂ ಅರ್ಜಿ ಆಹ್ವಾನಿಸಲಾಗುವುದು. ಸಂಬಂಧಿಸಿದ ಅಧಿಕಾರಿಗಳು ದಿನಪತ್ರಿಕೆಗಳಲ್ಲಿ ಪ್ರಕಟಣೆ ಕೊಟ್ಟಿರುತ್ತಾರೆ. ತಮ್ಮ ಜಿಲ್ಲೆಯಲ್ಲಿ ಅರ್ಜಿ ಕರೆಯಲಾಗಿದೆಯೋ ಇಲ್ಲವೋ ಎಂಬುದರ ಕುರಿತು ಮಾಹಿತಿ ಪಡೆಯಲು ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.