ಜೀವಜಲ ಯೋಜನೆಯಡಿಯಲ್ಲಿ Free borewell (ಉಚಿತವಾಗಿ ಬೋರ್ವೆಲ್) ಕೊರೆಯಲು ಅರ್ಹ ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹೌದು, ಗಂಗಾ ಕಲ್ಯಾಣ ಯೋಜನೆಯಂತೆ ಜೀವಜಲ ಯೋಜನೆಯಡಿಯಲ್ಲಿ ಬೋರ್ವೆಲ್ ಕೊರೆಯಲು ಸಹಾಯದನ ನೀಡಲಾಗುವುದು. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2023-24 ನೇ ಸಾಲಿಗೆ ಜೀವಜಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಯಾವ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು?
ವೀರಶೈವಲ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂಪಾಯಿ ಹಾಗೂ ಪಟ್ಟಣ ಪ್ರದೇಶದವರಿಗೆ 1 ಲಕ್ಷ 20 ಸಾವಿರ ರೂಪಾಯಿಗಳ ಮಿತಿಯೊಳಗಿರಬೇಕು. ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಘಟಕ ವೆಚ್ಚ 4.75 ಲಕ್ಷ ರೂಪಾಯಿಗಲ್ಲಿ 4.25 ಲಕ್ಷ ರೂಪಾಯಿಗಳನ್ನುಸಹಾಯಧನ ನೀಡಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50 ಸಾವಿರ ರೂಪಾಯಿಗಳ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚ 3.75 ಲಕ್ಷ ರೂಪಾಯಿಗಳಲ್ಲಿ 3.25 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.
ಇದನ್ನೂ ಓದಿ Pinchani status ಮೊಬೈಲ್ ನಲ್ಲೇ ಚೆಕ್ ಮಾಡಿ
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು.ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೈತರು ಫಾರ್ಮರ್ಸ್ ಫ್ರೂಟ್ಸ್ ಐಡಿ ಹಾಗೂ ಸಣ್ಣ ಹಿಡುವಳಿದಾರರ ಪ್ರಮಾಣಪತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಸಂಬಂಧಪಟ್ಟ ಪ್ರಾಧಿಕಾರದಿಂದ ಜಾತಿ ಪ್ರಮಾಣ ಪತ್ರ ಪಡೆದಿರಬೇಕು. ಹಾಲಿ ಜಮೀನುಗಳಿಗೆ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಮಳೆ ಆಧಾರಿತ ಖುಷ್ಕಿ ಜಮೀನು ಆಗಿರಬೇಕು. ವೀರಶೈವ ಲಿಂಗಾಯತ ಸಮುದಾಯದ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಒಳಪಡುವ ನಿಗಮಗಳಲ್ಲಿ ಬೇರೆ ಯಾವುದಾದರೂ ಯೋಜನೆಗಳಲ್ಲಿ ಸಾಲ ಅಥವಾ ಇತರೆ ಆರ್ಥಿಕ ಸೌಲಭ್ಯ ಪಡೆದಿರಬಾರದು. ಸಣ್ಣ ಹಾಗೂ ಅತೀ ಸಣ್ಣಹಿಡುವಳಿ ಪ್ರಮಾಣ ಪತ್ರ ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ
ಜೀವಜಲ ಯೋಜನೆಯಡಿ Free borewell ಬೋರ್ವೆಲ್ ಕೊರೆಯವ ಕುರಿತು ಹೆಚ್ಚಿನ ಮಾಹಿತಿಗೆ ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಗೆ ಸಂಪರ್ಕಿಸಬಹುದು. ಇನ್ನೂ ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ
https://kvldcl.karnataka.gov.in/ ಗೆ ಸಂಪರ್ಕಿಸಬಹುದು.
ಅರ್ಜಿ ಎಲ್ಲಿ ಸಲ್ಲಿಸಬೇಕು?
ಜೀವಜಲ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಯಸುವ ರೈತರು ತಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಸಿಎಸ್.ಸಿ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಆಸಕ್ತ ರೈತರು ಕೂಡಲೇ ಅರ್ಜಿ ಸಲ್ಲಿಸಬೇಕು. ಇಲ್ಲದಿದ್ದರೆ ಮೊದಲು ಅರ್ಜಿ ಸಲ್ಲಿಸಿದ ರೈತರಿಗೆ ಸೌಲಭ್ಯ ಸಿಗಲಿದೆ. ಹಿಂದೆ ಜೀವ ಜಲ ಯೋಜನೆೆೆೆೆೆೆೆೆೆಯಡಿಯಲ್ಲಿ ರೈತರು ಸೌಲಭ್ಯ ಪಡೆದಿರಬಾರದು. ಒಂದು ವೇಳೆ ಈ ಹಿಂದೆ ಸೌಲಭ್ಯ ಪಡೆದಿದ್ದರೆ ಅವರಿಗೆ ಪ್ರಸಕ್ತ ಸಾಲಿನಲ್ಲಿ ಜೀವ ಜಲ ಯೋಜನೆಯಡಿ ಸೌಲಭ್ಯಯ ಸಿಗುವುದಿಲ್ಲ. ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.