ಕುರಿ ಮತ್ತು ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಬೆಳಗಾವಿ, ರಾಮನಗರ, ಬೀದರ್, ಬಳ್ಳಾರಿ ಸೇರಿದಂತೆ ಇನ್ನಿತರ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2022-2023ನೇ ಸಾಲಿನಲ್ಲಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅಡಿಯಲ್ಲಿ 20 + 1 ಕುರಿ ಮೇಕೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಗೆ ಒಟ್ಟು 2113 ಗುರಿಗಳನ್ನು ನಿಗದಿಪಡಿಸಲಾಗಿದ್ದು, ನಿಗಮ ಮಾರ್ಗಸೂಚಿ ಪ್ರಕಾರ ಜಿಲ್ಲೆಯ ನಿಗಮದಲ್ಲಿ ನೋಂದಾಯಿತ ಹಾಗೂ ಕರ್ನಾಟಕ ಸಹಕಾರ ಕುರಿ ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳ ಬೆಂಗಳೂರ ಇಲ್ಲಿ ಸದಸ್ಯತ್ವವನ್ನು ಹೊಂದಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಫಲಾನುಭವಿ ಆಯ್ಕೆಯನ್ನು ಸದಸ್ಯತ್ವವನ್ನು ಹೊಂದಿರುವ ಸಂಘಗಳವರು ಆಯ್ಕೆ ಮಾಡಿ ಜಿಲ್ಲಾ ಉಪನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಇವರಿಗೆ ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿದಾರ ಫಲಾನುಭವಿಗಳ ಪಟ್ಟಿಯನ್ನು ಸಂಘದ ಮೂಲಕ ಸಲ್ಲಿಸಲು ಜುಲೈ 21 ಅಂತಿಮ ದಿನಾಂಕವಾಗಿದೆ. ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯತ್ವವನ್ನು ಹೊಂದಿರುವ 18 ರಿಂದ 60 ವಯೋಮತಿಯಲ್ಲಿರುವ ಎಸ್.ಸಿ, ಎಸ್.ಟಿ ಹಾಗೂ ಸಾಮಾನ್ಯ ವರ್ಗದ ಸದಸ್ಯರುಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ನಿಗಮದಲ್ಲಿ ನೋಂದಾಯಿತ ಹಾಗೂ ಕರ್ನಾಟಕ ರಾಜ್ಯ ಕುರಿ ಮೇಕೆ ಸಾಕಾಣಿಕೆದಾರರ ಮಹಾಮಂಡಳ ಬೆಂಗಳೂರು ಇಲ್ಲಿ ಸದಸ್ಯತ್ವವನ್ನು ಹೊಂದಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳವರು ಜುಲೈ 21 ರೊಳಗಾಗಿ ಎರಡು ಪ್ರತಿಯಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ಸಲ್ಲಿಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 0831 2431294 ಗೆ ಸಂಪರ್ಕಿಸಬಹುದು ಎಂದು ಬೆಳಗಾವಿಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಯಮಿತ ನಿಗಮದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಿಂದ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 5 ಫಲಾನುಭವಿಗಳಿಗೆ ಹಾಗೂ ಸಂಚಾರಿ ಕುರಿ ಮೇಕೆ ಸಾಕಾಣಿಕೆದಾರರಿಗೆ ಸಂಚಾರಿ ಟೆಂಟ್ ಹಾಗೂ ಪರಿಕರ ಕಿಟ್ ಗಳನ್ನು ಒದಗಿಸಲು ಸಾಮಾನ್ಯ ಕುರಿ ಮೇಕೆ ಸಾಕಾಣಿಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ಈ ಪಟ್ಟಿಯಲ್ಲಿರುವವರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಜಮೆ- ಚೆಕ್ ಮಾಡಿ ಅರ್ಜಿ ಸಲ್ಲಿಸಿ

ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಆದ್ಯತೆ ಮೇಲೆ ನೀಡಲಾಗುವುದು. ಸಂಘಗಳು ಇಲ್ಲದೆ ಇರುವ ತಾಲೂಕುಗಳಲ್ಲಿ ಕುರಿ ಸಾಕಾಣಿಕೆದಾರರನ್ನು ಫಲಾನುಭವಿಗಳನ್ನು ಪರಿಗಣಿಸಲಾಗುವುದು.

ಅರ್ಜಿಗಳನ್ನು ಭರ್ತಿ ಮಾಡಿ ಜುಲೈ 21 ರೊಳಗಾಗಿ ತಾಲೂಕಿನ ಸಹಾಯಕ ನಿರ್ದೇಶಕರಿಗೆ ಅಥವಾ ನೇರವಾಗಿ ಈ ಕಚೇರಿಗ ಸಲ್ಲಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿಯಿಂದಲೂ ಆರ್ಜಿ ಆಹ್ವಾನ

ರಾಮನಗರ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಎಸ್.ಸಿ.ಟಿ.ಎಸ್.ಪಿ ಯೋಜನೆಯಡಿ  (6+1) ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ ಮೇಕೆಘಟಕಗಳ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲೆಯ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿದ್ದು, ಯಾವುದೇ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಜಾತಿ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸದಸ್ಯತ್ವ ಹೊಂದಿರುವ ಕುರಿ ಮತ್ತುಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆರವರಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಜುಲೈ 20 ರೊಳಗೆ ಕಚೇರಿಗೆ ಸಲ್ಲಿಸಬಪೇಕು. ಹೆಚ್ಚಿನ ಮಾಹಿತಿ ದೂರವಾಣಿ ಸಂಖ್ಯೆ 9731764326ಗೆ ಸಂಪರ್ಕಿಸಲು ಕೋರಲಾಗಿದೆ.

ಬೀದರ್ ಜಿಲ್ಲೆಯಲ್ಲಿಯೂ ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಕುರಿ ಮೇಕೆ ಘಟಕ ಸ್ಥಾಪನೆಗೆ ಅಱ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನವಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಜನವಾಡ ರಸ್ತೆ, ಬೀದರ್ ಸಲ್ಲಿಸಬೇಕು.

2 thoughts on “ಕುರಿ ಮತ್ತು ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ”

Leave a comment