ಕುರಿ, ಮೇಕೆ, ಮೀನು, ಮೊಲ ಸಾಕಾಣಿಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Written by By: janajagran

Updated on:

Subsidy for Goat farming ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ಕುರಿ/ಹಂದಿ/ಮೊಲ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಶೇಕಡಾ 50 ರಷ್ಟು ಸಹಾಯಧನ ನೀಡಲು ಬಂಜಾರಾ ಸಮುದಾಯದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಟ ಘಟಕ ವೆಚ್ಚ ರೂ. 50,000/- (ಶೇ. 50 ಸಾಲ ಮತ್ತು ಶೇ. 50 ಸಹಾಯಧನ) ನೀಡಲಾಗುವುದು. ಯೋಜನೆಯ ಘಟಕ ವೆಚ್ಚ ರೂ. 50,000/- ಗಳಾಗಿದ್ದು, ಈ ಪೈಕಿ ರೂ. 25,000/- ಸಹಾಯಧನ ಮತ್ತು ರೂ. 25,000/- ಸಾಲವಾಗಿರುತ್ತದೆ. ಸಾಲದ ಮೊತ್ತವನ್ನು ಶೇ. 4ರ ಬಡ್ಡಿದರದಲ್ಲಿ 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಮರು ಪಾವತಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 5 ರೊಳಗಗಾಗಿ ಅರ್ಜಿ ಸಲ್ಲಿಸಬೇಕು. ಆಗಸ್ಟ್ 5 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.ಅರ್ಜಿದಾರರು ಪರಿಶಿಷ್ಟ ಜಾತಿಯಲ್ಲಿ ಬರುವ ಲಂಬಾಣಿ-ಬಂಜಾರ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು.

Subsidy for Goat farming ಅರ್ಜಿ ಸಲ್ಲಿಸಲು ಅರ್ಹತೆ:

ಅರ್ಜಿದಾರರು ಪರಿಶಿಷ್ಟ ಜಾತಿಯ ಲಂಬಾಣಿ-ಬಂಜಾರ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ. ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.

ನಿಯಮಗಳು:

ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ.1,50,000/- ಹಾಗೂ ನಗರ ಪ್ರದೇಶದವರಿಗೆ ರೂ.2,00,000/- ಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು. ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ. ಸಹಾಯಧನ ಮತ್ತು ಸಾಲವನ್ನು ನೇರವಾಗಿ ಫಲಾನುಭವಿಗಳಿಗೆ/ಮಾರಾಟಗಾರರಿಗೆ ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು 3 ಲಕ್ಷ ಸಹಾಯಧನ ನೀಡಲು ಬಂಜಾರಾ ಸಮುದಾಯದ ರೈತರಿಂದ online ಮೂಲಕ ಅರ್ಜಿ ಆಹ್ವಾನ

ರೈತರು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಆಸಕ್ತ ರೈತರು

http://ktdcl.in/web4/online/onlineapp.php ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತಾಂಡಾ ಅಭಿವೃದ್ಧಿ ನಿಗಮದ ಪೇಜ್ ಓಪನ್ ಆಗುತ್ತದೆ ಅಲ್ಲಿ ನೇರ ಸಾಲ ಯೋಜನೆ ಮೇಲೆ ಕ್ಲಿಕ್ ಮಾಡಬೇಕು. ಆಗ ನೇರ ಸಲ ಯೋಜನೆ ಪೇಜ್ ತೆರೆಯಲ್ಪಡುತ್ತದೆ.ಅಥವಾ

http://ktdcl.in/web4/seydls.php ಈ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನೇರ ಸಾಲ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಲ್ಲಾ ಮಾಹಿತಿ ನೀಡಲಾಗಿರುತ್ತದೆ. ಎಲ್ಲಾ ಮಾಹಿತಿಗಳನ್ನು ಓದಿಕೊಳ್ಳಬೇಕು.  ಹೆಸರು, ತಂದೆಯ ಹೆಸರು, ಮೊಬೈಲ್ ನಂಬರ್, ವಿದ್ಯಾರ್ಹತೆ, ಪೂರ್ಣ ವಿಳಾಸ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ,  ಸೇರಿದಂತೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸು ಮೇಲೆ ಕ್ಲಿಕ್ ಮಾಡಬೇಕು.

ಈಗಾಗಲೇ ನೇರಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ  ಮಾಹಿತಿಗಾಗಿ ನಿಮ್ಮ ಜಿಲ್ಲೆಯ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮರವರನ್ನು ಸಂಪರ್ಕಿಸಬಹುದು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಹೊಂದಿರಬೇಕು. ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್ ಹೊಂದಿರಬೇಕು. ರೇಷನ್ ಕಾರ್ಡ್ ಇರಬೇಕು.ಒಂದು ಬಿಳಿ ಪೇಜ್ ಮೇಲೆ ಸಹಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

ತಾಂತ್ರಿಕ ಸಮಸ್ಯೆಗಳಾದರೆ 911300963 ನಂಬರಿಗೆ 10 ರಿಂದ ಸಾಯಂಕಾಲ 5 ರವರೆಗೆ ಸಂಪರ್ಕಿಸಲು ಕೋರಲಾಗಿದೆ.

ಲೇಖನ: ರಾಮಲಿಂಗ್ ಬಾಣ್ಣೋತ್ ಇಟಕಾಲ ತಾಂಡ, ಮೊಬೈಲ್ ನಂಬರ್ 9731491393

Leave a Comment