ಕುರಿ-ಮೇಕೆ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಸಂತಸದ ಸುದ್ದಿ. ರೈತರು ಕುರಿ-ಮೇಕೆ ಸಾಕಾಣಿಕೆ ಮಾಡಿ ಆರ್ಥಿಕವಾಗಿ ಸ್ವಾವಲಂಬಿಯಾಗಿ ಜೀವನ ಸಾಗಿಸಲು ಕುರಿ ಸಾಕಾಣಿಕೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಕುರಿ ಉಣ್ಣೆ ಅಭಿವೃದ್ಧಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ (10+1) ಕುರಿ/ಮೇಕೆ ಘಟಕಗಳ ಅನುಷ್ಠಾನಕ್ಕಾಗಿ ಅರ್ಹರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಲಬುರಗಿ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಕಲಬುರಗಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗದಿತ ಅರ್ಜಿಯನ್ನು ಸದರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಇದೇ ಕಚೇರಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-237772 ಗೆ ಸಂಪರ್ಕಿಸಲು ಕೋರಲಾಗಿದೆ.
ಕುರಿ ಸಾಕಾಣಿಕೆ ಮಾಹಿತಿ ನೀಡಲು ಆರಂಭವಾಗಿದೆ ಉಚಿತ ಸಹಾಯವಾಣಿ
ರಾಜ್ಯ ಸರ್ಕಾರವು ಕುರಿ, ಮೇಕೆ, ಕೋಳಿ, ಮೊಲ , ಹಂದಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಕುರಿತು ರೈತರಿಗೆ ಸಂಪೂರ್ಣ ಮಾಹಿತಿ ನೀಡುವುದಕ್ಕಾಗಿ ಉಛಿತ ಸಹಾಯವಾಣಿ ಆರಂಭವಾಗಿದೆ. ಇದಕ್ಕಾಗಿ ರೈತರು ಯಾವುದೇ ಕರೆ ಶುಲ್ಕ ಪಾವತಿಸುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಇದನ್ನೂ ಓದಿ :ಪಿಎಂ ಕಿಸಾನ್ ಸ್ಟೇಟಸ್ ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ರೈತರು ಉಚಿತ ಸಹಾಯವಾಣಿ (farmer toll free number) 8277 100 200 ಗೆ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು. ಕರೆ ಸ್ವೀಕರಿಸಿದ ಅಧಿಕಾರಿಗಳು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ಕಲ್ಪಿಸುವರು.
ಉಚಿತ ಸಹಾಯವಾಣಿಯಿಂದ ಏನೇನು ಮಾಹಿತಿ ಸಿಗಲಿದೆ?
ಈ ಉಚಿತ ಸಹಾಯವಾಣಿಯಿಂದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು. ದೇಶಿ ಹಾಗೂ ವಿದೇಶಿ ಜಾನುವಾರು ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು. ಮಿಶ್ರತಳಿ, ಹಸು, ಕುರಿ, ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಮಾಹಿತಿ ನೀಡಲಾಗುವುದು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿರುವ ಜಾನುವಾರು ಹಾಗೂ ಇತರೆ ಉತ್ಪನ್ನಗಳ ಮಾರಾಟ ದರ ತಿಳಿಯಲು ಈ http://www.ahvs.kar.nic.in/kn_Sale.html
ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಾನುವಾರು ಹಾಗೂ ಇತರೆ ಉತ್ಪನ್ನಗಳ ದರದ ಮಾಹಿತಿ ಕಾಣುತ್ತದೆ.