Subsidy for Goat sheep unit ಕುರಿ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಕುರಿ, ಮೇಕೆ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯದನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ರಾಷ್ಟೀಯ ಕೃಷಿ ವಿಕಾಸ ಯೋಜನೆಯಡಿ (10+1) ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
Subsidy for Goat sheep unit ಕಲಬುರಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹಾಯಧನ ನೀಡಲಾಗುವುದು. ಕಲಬುರಗಿ ಜಿಲ್ಲೆಯ ರೈತರು ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472 237772 ಗೆ ಸಂಪರ್ಕಿಸಲು ಕೋರಲಾಗಿದೆ.
ಮೈಸೂರು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ರಾಷ್ಟೀಯ ಕೃಷಿ ವಿಕಾಸ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದವರಿಗೆ ಕುರಿ, ಮೇಕೆ 10+1 ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಫಲಾನುಭವಿಗಳು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿತ ಮೈಸೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿಸದಸ್ಯರಾಗಿರುವ ಹಾಗೂ ಹಿಂದಿನ 3 ವರ್ಷಗಳಲ್ಲಿ ಪಶುಪಾಲನೆ ಇಲಾಖೆ, ಅಥವಾ ನಿಗಮದದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವವರು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಹೋಬಳಿಮಟ್ಟದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿ ಪಡೆದು ಫೆಬ್ರವರಿ 24 ರೊಳಗೆ ಅರ್ಜಿ ಸಲ್ಲಿಸಬೇಕು, ಭರ್ತಿ ಮಾಡಿದ ಅರ್ಜಿಯನ್ನು ಸಂಘದ ಅಧ್ಯಕ್ಷರು, ಕಾರ್ಯದರ್ಶಿಯವರ ಮೂಲಕ ಚಾಮುಂಡಿಪುರಂನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.
ಇದನ್ನೂಓದಿ : Bele hani parihara ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿ ಯಾವ ವರ್ಷ ಎಷ್ಟು ಜಮೆಯಾಗಿದೆ? ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮೈಸೂರು ಸಹಾಯಕ ನಿರ್ದೇಶಕರ ಕಚೇರಿಯ ಮೊಬೈಲ್ ಸಂಖ್ಯೆ 9945623137 ಅಥವಾ ಕಚೇರಿ ದೂರವಾಣಿ ಸಂಖ್ಯೆ 0821 2488830 ಗೆ ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು ತಾಲೂಕಿನ ರೈತರಿಂದಲೂ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿನಲ್ಲಿ 10 +1 ಕುರಿ, ಅಥವಾ ಮೇಕೆ ಖರೀದಿಸಲು ರೈತರಿಗೆ ಸಹಾಯಧನ ನೀಡಲಾಗುವುದು. ಹಾಗಾಗಿ ಅರ್ಹ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ.
ರೈತರು ಬೆಂಗಳೂರು ತಾಲೂಕು ಮತ್ತು ಪಶು ವೈದ್ಯಾಧಿಕಾರಿಗಳಿಂದ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 24 ರೊಳಗಾಗಿ ಅರ್ಜಿ ಸ್ಲಲಿಸಲು ಕೋರಲಾಗಿದೆ.
ಇದನ್ನೂ ಓದಿ : ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಈ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿ, ಪಶುಪಾಲನಾ ಇಲಾಖೆ ಅಥವಾ ಹೆಬ್ಬಾಳದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ನಿಯಮಿತದ ಉಪನಿರ್ದೇಶಕರ ಕಚೇರಿ, 080 23414295ಗೆ ಸಂಪರ್ಕಿಸಲು ಕೋರಲಾಗಿದೆ.
ಕೊಪ್ಪಳ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನ (10+1) ಕುರಿ ಮತ್ತು ಮೇಕೆಗಳ ಘಟಕ ಸ್ಥಾಪನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಗಿರಿಜನ ಉಪಯೋಜನೆ ಮತ್ತು ಸಾಮಾನ್ಯ ಯೋಜನೆಯಡಿಯಲ್ಲಿ ಜಿಲ್ಲಾವಾರು ಪರಿಶಿಷ್ಟ ಜಾತಿಗೆ 5, ಪರಿಶಿಷ್ಟ ಪಂಗಡಕ್ಕೆ 1 ಮತ್ತು ಸಾಮಾನ್ಯ ವರ್ಗಕ್ಕೆ 28 ಗುರಿಗಳನ್ನು ನಿಗದಿಪಡಿಸಲಾಗಿದೆ. ಹಾಗಾಗಿ ಅರ್ಹ ರೈತರು ಕೂಡಲೇ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆದುಕೊಳ್ಳಬಹುದು.