Subsidy for house build : ಮನೆಗಳಿಗೆ ರಿಪೇರಿಗಾಗಿ ಹಾಗೂ ನಿವೇಶನ ಹೊಂದಿದ್ದಲ್ಲಿ ಹೊಸದಾಗಿ ಪಕ್ಕಾ ಮನೆ ನಿರ್ಮಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣ ಪಂಚಾಯತಿ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಹಂತ -4 ಅಡಿ ಅನುಮೋದಿತ ಕ್ರಿಯಾ ಯೋಜನೆಯಂತೆ ಶೇ. 24, ಶೇ. 7.25 ಮತ್ತು ಶೇ. 5 ರ ನಿಧಿಯಡಿ ವೈಯಕ್ತಿಕ ಕಾರ್ಯಕ್ರಮದಡಿ ಫಲಾನುಭವಿಗಳಿಗೆ ಸವಲತ್ತು ಒದಗಿಸುವ ಸಂಬಂಧ ಅರ್ಜಿಯನ್ನು ಆಹ್ವಾನಿಸಲಾಗಿದೆ.
Subsidy for house build ಪರಿಶಿಷ್ಟ ಪಂಗಡದ ಜನಾಂಗದವರ ಅತೀವೃ ಷ್ಟಿ ಮತ್ತು ಅನಾವೃ ಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ರಿಪೇರಿಗಾಗಿ ಸಹಾಯಧನ, ಆರ್ಥಿಕವಾಗಿ ಹಿಂದುಳಿದ ವರ್ಗದ ಜನಾಂಗದ ಫಲಾನುಭವಿಗಳಿಗೆ ನಿವೇಶನ ಹೊಂದಿದ್ದಲ್ಲಿ ಹೊಸದಾಗಿ ಪಕ್ಕಾ ಮನೆ ನಿರ್ಮಿಸಲು ಫಲಾನುಭವಿಗಳ ವಂತಿಕೆಯು ಸೇರಿದಂತೆ ಸಹಾಯಧನ ಪಾವತಿಗಾಗಿ, ಆರ್ಥಿಕವಾಗಿ ಹಿಂದುಳಿದ ವರ್ಗದ ಜನಾಂಗದ ಫಲಾನುಭವಿಗಳಿಗೆ ಕಂಪ್ಯೂಟರ್ ತರಬೇತಿ ಪಡೆಯಲು, ವಿಕಲಚೇತನರಿಗೆ ತ್ರಿಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅವಕಾಶವಿದೆ.
ಅರ್ಜಿಯ ಜೊತೆ ಫೋಟೋ, ಆಧಾರ್ ಕಾರ್ಡ್. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಮನೆಯ ಖಾತೆ ನಕಲು ಹಾಗೂ ಬಿಪಿಎಲ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಅಂಗವಿಕಲ ಪ್ರಮಾಣ ಪತ್ರವನ್ನು ಲಗತ್ತಿಸಿ ಮಾರ್ಚ್ 20 ರ ಒಳಗೆ ಪ್ಟಣ ಪಂಚಾಯಿತಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.
ಇದನ್ನೂ ಓದಿ : ಗ್ರಾಮ ಪಂಚಾಯತ್ ಮಾಹಿತಿ whatsapp ನಲ್ಲಿ ಹೀಗೆ ಪಡೆಯಿರಿ
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ವಿಷಯ ನಿರ್ವಾಹಕರನ್ನುಸಂಪರ್ಕಿಸಲು ಅರಕಲಗೂಡು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ನಿಮಗೆಷ್ಟು ಕಂತು ಗೃಹಲಕ್ಷ್ಮೀ ಹಣ ಜಮೆಯಾಗಿದೆ? ಮೊಬೈಲ್ ನಲ್ಲಿ ಚೆಕ್ ಮಾಡಿ
ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ
DBT Karnataka ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು. ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.
ಗೃಹಲಕ್ಷ್ಮೀ ಫಲಾನುಭವಿಗಳ ಅರ್ಹತೆ
ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಯಾರು ಯಾರು ಅರ್ಹತೆ ಪಡೆದಿದ್ದಾರೆ ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಹೊಂದಿರಬೇಕು. ಈ ರೇಶನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಕುಟುಂಬದ ಯಜಮಾನಿ ಎಂದು ಬರೆದಿರಬೇಕು.
ಆದಾಯ ತೆರಿಗೆ ಪಾವತಿ ಮಾಡುವವರ ಕುಟುಂಬದವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ, ಪೆನ್ಶನ್ ಪಡೆಯುವವರಿಗೆ ಯೋಜನೆಯ ಲಾಭ ಸಿಗುವುದಿಲ್ಲ. ಜಿಎಸ್.ಟಿ ಪಾವತಿ ಮಾಡುತ್ತಿರುವ ಮಹಿಳೆಯರಿಗೂ ಯೋಜನೆಯ ಲಾಭ ಸಿಗುವುದಿಲ್ಲ.