ತೋಟಗಾರಿಕೆ ಮಾಡುತ್ತಿರುವ ರೈತರಿಗಿಲ್ಲಿದೆ ಗುಡ್ ನ್ಯೂಸ್. ತೋಟಗಾರಿಕೆ ಮಾಡುತ್ತಿರುವ ರೈತರಿಗೆ ಪಾಲಿಹೌಸ್ ನಿರ್ಮಾಣ, ಕೃಷಿ ಹೊಂಡ, ಈಱುಳ್ಳಿ ಶೇಖರಣ ಘಟಕ ಹಾಗೂ ಸಮುದಾಯ ಕೃಷಿ ಹೊಂಡ ಸೇರಿದಂತೆ ಇನ್ನಿತರ ಸೌಲಭ್ಯ ಪಡೆಯಲು ಶೇ. 90 ರಷ್ಟು ಸಹಾಯಧನ ನೀಡಲು ಆಹ್ವಾನಿಸಲಾಗಿದೆ.

ಹೌದು, ಚಿಕ್ಕಮಗಳೂರು ಜಿಲ್ಲೆಯ ತರಿಕೇರೆ ಹಾಗೂ ಅಜ್ಜಂಪೂರು ತಾಲೂಕಿನ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಇಲಾಖೆ ಯೋಜನೆ ಕಾರ್ಯಕ್ರಮಗಳಿಗೆ ತರಿಕೇರೆ ಹಾಗೂ ಅಜ್ಜಂಪೂರು ತಾಲೂಕಿನ ಅರ್ಹ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತರಿಕೇರಿ ತಾಲೂಕು ತೋಟಗಾರಿಕಾ ನಿರ್ದೇಶಕ ಯತಿರಾಜ್ ತಿಳಿಸಿದ್ದಾರೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸುರಂಗ ಮಾದರಿ ಪಾಲಿಹೌಸ್ ನಿರ್ಮಾಣ, ಪುನೇಟ್ ಬಾಕ್ಸ್, ಪ್ಲಾಸ್ಟಿಕ್ ಕ್ರೇಟ್ಸ್, ನೀರಿನಲ್ಲಿ ಕರಗುವ ರಸಗೊಬ್ಬರ ಹಾಗೂ ಲಘು ಪೋಷಕಾಂಶಗಳ ಮಿಶ್ರಣ ಖರೀದಿಗೆ, ಪಾರಂಗೇಟ್ ನಿರ್ಮಾಣ ಹಾಗೂ ತಾಳೆ ಬೆಳೆ ಯೋಜನೆಯಡಿ ತಾಳೆ ಗಿಡ ಹಾಕಲು ಅರ್ಜಿಗಳನ್ನುಆಹ್ವಾನಿಸಲಾಗಿದೆ.

ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡ ಫಲಾನುಭವಿಗಳ ರೈತರಿಗೆ ಶೇ. 90 ರಷ್ಟು ಸಹಾಯಧನ  ಹಾಗೂ ಇತರೆ ರೈತರಿಗೆ ಶೇ. 75ರ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ಸಮುದಾಯ ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ಸೋಲಾರ್ ಟನಲ್ ಡ್ರೈಯರ್ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ರೈತರಿಗಿಲ್ಲಿದೆ ಗುಡ್ ನ್ಯೂಸ್, ರೈತರೇ ಜಮೀನಿನ ಪೋಡಿ ನಕ್ಷೆ ಮಾಡಬಹುದು- ಇಲ್ಲಿದೆ ಸಂಪೂರ್ಣ ಮಾಹಿತಿ

ಸಹಾಯಧನಕ್ಕೆ ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದು.  ರೈತರು ವಿವಿಧ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಕೋರಿದ್ದಾರೆ. ಆಸಕ್ತ ರೈತರು ಕಚೇರಿಯಿಂದ ನೇರವಾಗಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜೂನ್ 15 ರೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು.

ಯಾವ ಯಾವ ದಾಖಲೆ ಬೇಕು?

ರೈತರು ಕಚೇರಿಯಿಂದ ಪಡೆದ ಅರ್ಜಿ ನಮೂನೆ, ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ ಸಲ್ಲಿಸಬೇಕು. ಬೆಳೆ ದೃಢೀಕರಣ ಪತ್ರ ಹಾಗೂ ಇತರೆ ದಾಖಲಾತಿಗಳು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ  ತೋಟಗಾರಿಕೆ ನಿರ್ದೇಶಕರ ಕಚೇರಿ, ತರಿಕೇರೆ ಹಾಗೂ ಸಂಬಂಧಪಟ್ಟ ಹೋಬಳಿ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನುಸಂಪರ್ಕಿಸಲು ಕೋರಲಾಗಿದೆ.

ರೈತರು ಕೊನೆಯ ದಿನಾಂಕದವರೆಗೆ ಕಾಯದೆಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಿ ತೋಟಗಾರಿಕೆ ಇಲಾಖೆಯಿಂದ ಸೌಲಭ್ಯ ಪಡೆದುಕೊಳ್ಳಬಹುದು. ರೈತರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಈ ಎಲ್ಲಾ ಸೌಲಭ್ಯ ಪಡೆದುಕೊಳ್ಳಬಹುದು.

ತೋಟಗಾರಿಕೆ ಇಲಾಖೆಯ ವತಿಯಿಂದ ಲಭ್ಯತೆಯ ಆಧಾರದ ಮೇಲೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಆಧ್ಯತೆ ನೀಡಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿದ ರೈತರು ಈ ಹಿಂದೆ ಸೌಲಭ್ಯ ಪಡೆಯದ ರೈತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ರೈತರು ತಮ್ಮಹತ್ತಿರದ ತೋಟಗಾರಿಕೆ ಇಲಾಖೆಯಲ್ಲಿ ಈ ಕುರಿತು ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

Leave a Reply

Your email address will not be published.