ಪ್ರಸಕ್ತ ಸಾಲಿನ 2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಸೌರಶಕ್ತಿ ಆಧಾರಿತ Krishi pumpset ಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜೇವರ್ಗಿ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
3 ಹೆಚ್.ಪಿ ಸೋಲಾರ್ ಪಂಪ್ ಸೆಟ್ ಗಳಿಗೆ ಶೇ. 50 ರಂತೆ ಗರಿಷ್ಠ ಸಹಾಯಧನ ಅಂದರೆ 99 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಅದೇ ರೀತಿ 5 ಹೆಚ್.ಪಿ ಮತ್ತು ಮೇಲಿನ ಅಶ್ವಶಕ್ತಿ ಸೋಲಾರ್ ಪಂಪ್ ಸೆಟ್ ಗಳಿಗೆ ಶೇ. 50 ರಂತೆ ಗರಿಷ್ಠ 1.50 ಲಕ್ಷ ರೂಪಾಯಿಗಳವರೆಗೆ ಮಿತಿಗೊಳಿಸಿ ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಅಕ್ಟೋಬರ್ 30 ರ ಸಂಜೆ 5.30 ರೊಳಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ತೋಟಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಕೃಷಿ ಸಿಂಚಾಯಿ ಯೋಜನೆಯಡಿ Krishi pumpset ಗೆ ಅರ್ಜಿ ಆಹ್ವಾನ
ಅದೇ ರೀತಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಲು ಸಾಮಾನ್ಯ ರೈತರಿಗಂ ಶೇ. 75 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಂತೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಹಾಗೂ 2 ಹೆಕ್ಟೇರ್ ಮೇಲ್ಪಟ್ಟ ಎಲ್ಲಾ ವರ್ಗದ ರೈತರಿಗೆ (ಶೇ. 45 ರಷ್ಟು ಬಹುವಾರ್ಷಿಕ ಬೆಳೆಗಳಿಗೆ) ಸಹಾಯಧನ ನೀಡಲಾಗುವುದು. ಮೊದಲು ಅರ್ಜಿ ಸಲ್ಲಿಸಿದ ರೈತರಿಗೆ ಆದ್ಯತೆಯ ಮೇರೆಗೆ ಸಹಾಯಧನ ವಿತರಿಸಲಾಗುವುದು.
ಇದನ್ನೂ ಓದಿ : Aadhaar Number ಹಾಕಿ ಮೊಬೈಲ್ ನಲ್ಲಿ FRUITS ಐಡಿ ಹೀಗೆ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಹಾಗೂ ಸಂಬಂಧಪಟ್ಟ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಹನಿ ನೀರಾವರಿ ಅಳವಡಿಸಲು ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಚಿತ್ತಾಪುರ, ಕಾಳಗಿ ಹಾಗೂ ಶಹಾಬಾದ್ ತಾಲೂಕಿನ ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿರಿಯ ತೋಟಗಾರಿಕೆ ನಿರ್ದೇಶಕರು ಚಿತ್ತಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಪಟ್ಟ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು, ಚಿತ್ತಾಪುರ ಮೊಬೈಲ್ ಸಂಖ್ಯೆ 8088242453, ಕಾಳಗಿ 7899251048, ಶಹಾಬಾದ್ 9611001067, ನಾಲವಾರ 9611001067 ಹಾಗೂ ಚಿತ್ತಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊಬೈಲ್ ಸಂಖ್ಯೆ 7760969088 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಸೂಕ್ಷ್ಮ ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಆಹ್ವಾನ
ಚಾಮರಾಜನಗರ ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ಸೂಕ್ಷ್ಮ ಹನಿ ನೀರಾವರಿಯೋಜನ ಅನುಷ್ಠಾನಗೊಳಿಸುತ್ತಿದ್ದು, ಸದರಿ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : Annabhagya DBT Status: ಅನ್ನಭಾಗ್ಯ ಹಣ ಜಮೆಯ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಹಾಗೂ ಇತರೆ ವರ್ಗದ ರೈತರಿಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು.
ನೀರಾವರಿ ಸೌಲಭ್ಯ ಹೊಂದಿರುವ ಆಸಕ್ತ ರೈತರು ಕೂಡಲೇ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.