ಭೂಮಿ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

Written by By: janajagran

Updated on:

Subsidy for land purchase ಭೂ ಒಡೆತನ ಯೋಜನೆಯಡಿಯಲ್ಲಿ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ಭೂರಹಿತಿ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಜಮೀನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಕನಿಷ್ಟ 2 ಎಕರೆ ಖುಷ್ಕಿ ಅಥವಾ 1 ಎಕರೆ ತರಿ ಅಥವಾ ಕನಿಷ್ಟ 1/2 ಎಕರೆ (20 ಗುಂಟೆ) ಭಾಗಾಯ್ತು ಜಮೀನನ್ನು ಖರೀದಿಸಿ ನೋಂದಣಿ ಮಾಡಿಕೊಡಲಾಗುವುದು. ನಿಗಮದಿಂದ ಸಹಾಯಧನ ಹಾಗೂ ಸಾಲವನ್ನು ಮಂಜೂರು ಮಾಡಿ ಭೂರಹಿತ ಕೃಷಿ ಕರ‍್ಮಿಕ ಮಹಿಳೆಯರಿಗೆ ಜಮೀನನ್ನು ಖರೀದಿಸಿ ಕೊಡಲಾಗುವುದು. ಸೆಪ್ಟೆಂಬರ್ 1 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಘಟಕ ವೆಚ್ಚ ರೂ. 15 ಲಕ್ಷಗಳಾಗಿದ್ದು, ಈ ಪೈಕಿ  7.50 ಲಕ್ಷ ಸಹಾಯಧನ ಹಾಗೂ ರೂ. 7.50 ಲಕ್ಷ ಸಾಲವಾಗಿರುತ್ತದೆ. ಸಾಲದ ಮೊತ್ತವನ್ನು ಶೇ. 6 ರ ಬಡ್ಡಿ ದರದಲ್ಲಿ 20 ಅರ್ಧ ವಾರ್ಷಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಇದನ್ನೂ ಓದಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ. 20 ಲಕ್ಷಗಳಿಗೆ ಹೆಚ್ಚಿಸಲಾಗಿದೆ.

Subsidy for land purchase ಭೂಮಿ ಖರೀದಿಗೆ ಅರ್ಹತೆ:

ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರು ಭೂ ರಹಿತ ಕೃಷಿ ಕಾರ್ಮಿಕ ಕುಟುಂಬದವರಾಗಿರಬೇಕು.ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.

ನಿಯಮಗಳು:

ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.1,50,000/- ಹಾಗೂ ನಗರ ಪ್ರದೇಶದಲ್ಲಿ ರೂ.2,00,000/- ಮಿತಿಯೊಳಗಿರಬೇಕು. ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.

ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅರ್ಜಿ, ಇತ್ತೀಚಿನ ಭಾವಚಿತ್ರ, ಜಾತಿ ಪ್ರಮಾಣಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು).ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಆಧಾರ್ ಕಾರ್ಡ್, ಹಾಗೂ ಕೃಷಿ ಕಾರ್ಮಿಕರ ದೃಡೀಕರಣ  ಪತ್ರ ಹೊಂದಿರಬೇಕು.

ಇದನ್ನೂ ಓದಿ ಈ ರೈತರಿಗೇಕೆ ಬೆಳೆ ವಿಮೆ ಹಣ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ

ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಈ ಕೆಳಕಂಡ ಜಾತಿಗೆ ಸೇರಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು.
[ ಅರುಂಧತಿಯಾರ್, ಭಂಗಿ, ಮೆಹತರ್, ಓಲ್ಗಾನ, ರೂಖಿ, ಮಲ್ಕಾನ, ಹಲಾಲಕೋರ, ಲಾಲ್‍ಬೇಗಿ, ಬಾಲ್ಮಿಕಿ, ಕೊರರ್, ಜಾಡಮಾಲಿ, ಬಾಂಬಿ, ಭಾಂಭಿ, ಅಸಾದರು, ಅಸೋಡಿ, ಚಮ್ಮಡಿಯ, ಚಮ್ಮಾರ್, ಚಂಭಾರ್, ಚಮಗಾರ್, ಹರಳಯ್ಯ, ಹರಲಿ, ಖಲ್ಪ, ಮಚಗಾರ್, ಮೋಚಿಗಾರ್, ಮಾದರ್, ಮಾದಿಗ್, ಮೋಚಿ, ಮೂಚಿ, ತೆಲುಗುಮೋಚಿ, ಕಾಮಟಿಮೋಚಿ, ರಾಣಿಗರ್, ರೋಹಿದಾಸ್, ರೋಹಿತ್, ಸಮಗಾರ್, ಬಿಂಡ್ಲಾ, ಚಕ್ಕಿಲಿಯನ್, ದಕ್ಕಲ್, ದೊಕ್ಕಲವಾರ್, ದಕ್ಕಲಿಗ, ಡೋರ್, ಕಕ್ಕಯ್ಯ, ಕನ್‍ಕಯ್ಯ, ಜಾಂಬುವುಲ, ಮಾಚಾಲ, ಮಾದಿಗ, ಮಾಂಗ್, ಮಾತಂಗ್, ಮಿನಿ ಮಾದಿಗ್, ಮಾಂಗಗಾರುಡಿ, ಮಾಂಗಗಾರೋಡಿ, ಮಾಷ್ಟಿ, ಸಮಗಾರ, ಸಿಂದೊಲ್ಲು, ಚಿಂದೊಲ್ಲು. ಜಾತಿಗೆ ಸೇರಿದವರು ಅರ್ಜಿ ಸಲ್ಲಿಸಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ https://adijambava.online/apl-bhoo-odetana.php ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸದೊಂದು ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು, ಮೊಬೈಲ್ ನಂಬರ್, ಜಿಲ್ಲೆ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://adijambava.online/bhoo-odetana-yojane.pdf

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ನಿಮ್ಮ ಜಿಲ್ಲೆಯ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://adijambava.online/

ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ ನಂ, 17/5, ಓಬ್ಲಾಂಗ್ ಬ್ಲಾಕ್, 2ನೇ ಮಹಡಿ, ಯುನಿಟಿ ಕಟ್ಟಡ, ಜಯಚಾಮರಾಜೇಂದ್ರ ರಸ್ತೆ, ಬೆಂಗಳೊರು 560 002, ದೂರವಾಣಿ 080-22215222ಗೆ ಕರೆ ಮಾಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳಾದರೆ 74144 81167 ನಂಬರಿಗೆ ಬೆಳಗ್ಗೆ 10ರಿಂದ ಸಾಯಂಕಾಲ 5 ರವರೆಗೆ ಕರೆ ಮಾಡಬಹುದು.

Leave a Comment