ಕೃಷಿ ಜಮೀನು ಖರೀದಿಗೆ 10 ಲಕ್ಷ, ಗಂಗಾ ಕಲ್ಯಾಣ ಯೋಜನೆಯಡಿ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಸಬ್ಸಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಭೂ ಒಡೆತನಯೋಜನೆ ಅಡಿಯಲ್ಲಿ  ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಭೂಮಿ ಖರೀದಿಗೆ ಘಟಕದ ವೆಚ್ಚ 20 ಲಕ್ಷ ರೂಪಾಯಿಯಲ್ಲಿ ಶೇ. 50 ರಷ್ಟುಸಹಾಯಧನ ನೀಡಲಾಗುವುದು.ಇದರಲ್ಲಿ ಶೇ. 50 ರಷ್ಟು ಶೇ. 6 ರ ಬಡ್ಡಿದರದಂತೆ ಸಾಲ ಸೌಲಭ್ಯ ಒದಗಿಸಲಾಗುವುದು.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ನೀರಾವರಿ ಸೌಲಭ್ಯಕ್ಕೆ 3 ಲಕ್ಷ ರೂಪಾಯಿಯಿಂದ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. 50 ಸಾವಿರ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುವುದು.

ಇದನ್ನೂ ಓದಿ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ- ಯಾರಿಗೆ ಜಮೆ? ಇಲ್ಲೇ ಚೆಕ್ ಮಾಡಿ

ಇದರೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಕಿರು ಆರ್ಥಿಕ ಚಿಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ನೀಡಲಾಗುವುದು. ಘಟಕ ವೆಚ್ಚ 1 ಲಕ್ಷ ರೂಪಾಯಿಯಲ್ಲಿ 50 ಸಾವಿರ ರೂಪಾಯಿ ಸಬ್ಸಿಡಿ ಹಾಗೂ 50 ಸಾವಿರ ರೂಪಾಯಿ ಶೇ. 4 ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.

ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ

ಮಹಿಳಾ ಸ್ವ ಸಹಾಯ ಸಂಘಗಳಿಗೆ (ಕನಿಷ್ಠ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂಪಾಯಿಯಲ್ಲಿ 1.50 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವುದು. ಉಳಿದ 1 ಲಕ್ಷ ರೂಪಾಯಿಯನ್ನು ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿಯಲ್ಲಿ ಸ್ವಾವಲಂಬಿ ಸಾರಥಿ ಯೋಜನೆಗೆ ಸಹ ಸಬ್ಸಿಡಿ ನೀಡಲಾಗುವುದು. ಹೌದು, ಸರಕು ವಾಹನ / ಟ್ಯಾಕ್ಸಿ  (ಹಳದಿ ಬೋರ್ಡ್) ಖರೀಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ. 75 ರಷ್ಟು ಸಬ್ಸಿಡಿನೀಡಲಾಗುವುದು. ಗರಿಷ್ಠ 4 ಲಕ್ಷ ರೂಪಾಯಿಯವರಗೆ ಸಬ್ಸಿಡಿ ನೀಡಲಾಗುವುದು.

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು 29-11-2023 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್

https://sevasindhu.karnataka.gov.in

ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಂದರೆ ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬಯಸುವ ಫಲಾನುಭವಿಗಳು ಈ ಹಿಂದೆ ಮೇಲಿನ ಯೋಜನೆಗಳ ವತಿಯಿಂದ ಸೌಲಭ್ಯ ಪಡೆದಿರಬಾರದು. ಅಂದರೆ ಕುಟುಂಬದ ಯಾವ ಸದಸ್ಯರು ಹಿಂದೆ ಸೌಲಭ್ಯ ಪಡೆದಿರಬಾರದು. ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482 300 400 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment