ತೋಟಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಇಲ್ಲಿದೆ ಸಂತಸದ ಸುದ್ದಿ. ಆರ್ಥಿಕವಾಗಿ ಹಿಂದುಳಿದ, ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕಗವಾಗಿ ಸಮಸ್ಯೆಯಾಗಿರುವ ರೈತರಿಗೆ ಸಬ್ಸಿಡಿ ರೂಪದಲ್ಲಿ ಯಂತ್ರೋಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು,  ಚಾಮರಾಜನಗರ ಜಿಲ್ಲೆಯ ರೈತರಿಗೆ ತೋಟಗಾರಿಕೆ ಮಾಡಲು ಸಬ್ಸಿಡಿಯಲ್ಲಿ ಕೃಷಿ  ಯಂತ್ರೋಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಪನ್ನ ಗುಣಮಟ್ಟದ ಉಪಕರಣಗಳಾದ ಸ್ಪ್ರೇಯರ್, ಡಿಗ್ಗರ್, ಕಳೆ ತೆಗೆಯುವ ಯಂತ್ರ ಹಾಗೂ ಪವರ್ ಟಿಲ್ಲರ್ ಖರೀದಿಗೆ ಸಹಾಯಧನ ನೀಡಲಾಗುವುದು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಅನುಮೋದಿತ ದರದ ಶೇ. 50 ರಷ್ಟು ಸಹಾಯಧನ  ನೀಡಲಾಗುತ್ತದೆ.ಇತರೆ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ   ನೀಡಲಾಗುವುದು.

ಜಮೀನಿನ ಪಹಣಿ, ಚೆಕ್ ಬಂದಿ, ಬೆಳೆ ದೃಢೀಕರಣ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಇತರೆ ಅಗತ್ಯ ದಾಖಲೆಗಳ ಝರಾಕ್ಸ್ ಪ್ರತಿಗಳೊಂದಿಗೆ ಸಂಬಂಧಪಟ್ಟ ತಾಲೂಕಿನ ತೋಟಗಾರಿಕೆ  ಇಲಾಖೆಗೆ ಮಾರ್ಚ್ 7 ರೊಳಗೆ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.

ಇದನ್ನೂ ಓದಿ: ಯಾವ ಬೆಳೆಗೆ ಎಷ್ಟು ವಿಮೆ ಹಣ ಬರುತ್ತದೆ ? ಮೊಬೈಲ್ ನಲ್ಲೇ ಚೆಕ್ ಮಾಡಬೇಕೆ? ಇಲ್ಲಿದೆ ಮಾಹಿತಿ

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ಚಾಮರಾಜನಗರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಶಿವಪ್ರಸಾದ ಕೋರಿದ್ದಾರೆ.

ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ

ಚಾಮರಾಜನಗರ ಜಿಲ್ಲೆಯ ರೈತರಿಗೆ ಸಬ್ಸಿಡಿಯಲ್ಲಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2021-22 ನೇ ಸಾಲಿನ ಸೂಕ್ಷ್ಮ ಹನಿ ನೀರಾವರಿ ಡ್ರಿಪ್ ಯೋಜನೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರೈತರಿಗೆ ಸಬ್ಸಿಡಿಯಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಲು ಅರ್ಜಿ ಕರೆಯಲಾಗಿದೆ. ರೈತರು ಅರ್ಜಿ ನೀಡಲು ಮಾರ್ಚ್ 5 ಕೊನೆಯ ದಿನವಾಗಿದೆ.

ರೈತರು ತಮ್ಮ ಆಧಾರ್ ಕಾರ್ಡ್, ಜಮೀನಿನ ಪಹಣಿ, ಚೆಕ್ ಬಂದಿ, ಬೆಳೆ ದೃಢೀಕರಣ,  ಬ್ಯಾಂಕ್ ಖಾತೆ, ಇತರೆ ಅಗತ್ಯ ದಾಖಲೆಗಳ ಝರಾಕ್ಸ್ ಪ್ರತಿಗಳೊಂದಿಗೆ ಸಂಬಂಧಪಟ್ಟ ತಾಲೂಕಿನ ತೋಟಗಾರಿಕೆ  ಇಲಾಖೆಗೆ ಮಾರ್ಚ್ 5 ರೊಳಗೆ ಸಲ್ಲಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.

ಇದನ್ನೂ ಓದಿ: ರೈತರ ಖಾತೆಗೆ ಜಮೆಯಾಯಿತು ಪರಿಹಾರದ ಹೆಚ್ಚುವರಿ ಹಣಃ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ಕಾರ್ಯಾದೇಶ ಪಡೆದಿರುವ ರೈತ ಬಾಂಧವರು ಕೂಡಲೇ ಹನಿ ನೀರಾವರಿ  ಅಳವಡಿಸಿಕೊಂಡಿರುವ ಕಂಪನಿಯ ಬಿಲ್ಲು, ವೋಚರ್, ದಾಖಲಾತಿಗಳನ್ನು ಚಾಮರಾಜನಗರ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಸಹಾಯಧನ ಪಡೆಯುವಂತೆ ತೋಟಗಾರಿಕೆ ಉಪ ನಿರ್ದೇಶಕ ಶಿವಪ್ರಸಾದ ಕೋರಿದ್ದಾರೆ.

ಕೊನೆಯ ದಿನಾಂಕದವರೆಗೆ ರೈತರು ಕಾಯದೆ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Leave a Reply

Your email address will not be published. Required fields are marked *