ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಮಂಡಿಸಿದ ತಮ್ಮ ಚೊಚ್ಚಲ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಬಜೆಟ್ ಮಂಡನೆಯ ಆರಂಭದಲ್ಲಿಯೇ ಕೃಷಿ ಕ್ಷೇತ್ರದ ಅನುದಾನವನ್ನುಘೋಷಿಸಿದರು. ಕೃಷಿ ಕ್ಷೇತ್ರಕ್ಕೆ ರೈತರಿಗೆ ಏನೆಲ್ಲಾ ಕೊಡುಗೆ ನೀಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರತಿ ಎಕರೆಗೆ 250 ರೂಪಾಯಿ ಡಿಸೆಲ್ ಸಹಾಯಧನ ನೀಡಲು ರೈತ ಶಕ್ತಿ ನೂತನ ಯೋಜನೆ
ರೈತ ಶಕ್ತಿ ನೂತನ ಯೋಜನೆಯಡಿಯಲ್ಲಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂಪಾಯಿಗಳಂತೆ ಡೀಸಲ್ ಸಹಾಯಧನ ನೀಡಲಾಗುವುದು. ಈಸಹಾಯಧನವನ್ನು ಐದು ಎಕರೆಯವರೆಗೆ 250 ರೂಪಾಯಿಯಂತೆ ಗರಿಷ್ಠ 5000 ರೂಪಾಯಿ ಸಹಾಯಧನ ನೀಡಲಾಗುವುದು. ಈ ಯೋಜನೆಯಡಿಯಲ್ಲಿ 500 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. 2022-23 ನೇ ಸಾಲಿನ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಒಟ್ಟು 33 ಸಾವಿರದ 700 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
2 ಲಕ್ಷ ಹೆಕ್ಟೇರ್ ಗಳಲ್ಲಿ ಸಾವಯವ ಕೃಷ ಆರಂಭ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ವಿವಿ ಸ್ಥಾಪನೆ ಮಾಡಲಾಗುವುದು. ಬಳ್ಳಾರಿಯ ಹಗರಿಬೊಮ್ಮನಳ್ಳಿಯಲ್ಲಿ ಕೃಷಿ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ, 1 ಸಾವಿರ ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷ ಪದ್ಧತಿಯಲ್ಲಿ ಸ್ಥಿರೀಕರಣ, ಕೃಷ ಉತ್ಪನ್ನಗಳಿಗೆ ಮಾರುಕಟ್ಟೆ ಸ್ಥಾಪಿಸಲು 50 ಕೋಟಿ ಘೋಷಣೆ ಮಾಡಿದ್ದಾರೆ. ರೈತರ ಆದಾಯ ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ ಘೋಷಣೆ ಮಾಡಿದ್ದಾರೆ.
ಪಶು ಸಂಗೋಪನೆ, ಹೈನುಗಾರಿಕೆಗೆ ಉತ್ತೇಜನ
ನೂತನವಾಗಿ100 ಪಶು ಚಿಕಿತ್ಸಾಲಯಗಳ ಪ್ರಾರಂಭ, ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ರಾಜ್ಯದಲ್ಲಿರುವ ಗೋ ಶಾಲೆಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಳ ಮಾಡಲಾಗುವುದು. ಇದಕ್ಕಾಗಿ 50 ಕೋಟಿ ರೂಪಾಯಿ ಅನುದಾನ ವಿನಿಯೋಗಿಸಲಾಗಿದೆ. ಗೋಶಾಲೆಗಳಲ್ಲಿನ ಗೋವುಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿಮೊದಲ ಬಾರಿಗೆ ಪುಣ್ಯ ಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ ನಲ್ಲಿಘೋಷಣೆ ಮಾಡಿದ್ದಾರೆ.
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ ಘೋಷಣೆ, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಸ್ಥಾಪಿಸಲು 50 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಕುರಿಗಾರರಿಗೆ ಕುರಿದೊಡ್ಡಿ ನಿರ್ಮಿಸಲು ಸಹಾಯಧನ ಘೋಷಿಸಿದ್ದಾರೆ. ಕುರಿಗಾಯಿಗಳಿಗೆ 5 ಲಕ್ಷ ರೂಪಾಯಿ ವಿಮೆ ಘೋಷಣೆ ಮಾಡಿದ್ದಾರೆ.